Asianet Suvarna News Asianet Suvarna News

ಹಾಸನದಲ್ಲಿ ರೇವಣ್ಣ ನೃತೃತ್ವದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಹಾಸನ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. 

JDS big Convention planning in Hassan says Union Minister H D Kumaraswamy sat
Author
First Published Jul 21, 2024, 2:56 PM IST | Last Updated Jul 21, 2024, 2:56 PM IST

ಹಾಸನ (ಜು.21): ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಲ್ಲಿ ಬೃಹತ್ ಸಮಾವೇಶ ಮಾಡುವಂತೆ ಶಾಸಕರ‌ ಒತ್ತಾಯ ಇದೆ. ಕಲಾಪ ಮುಗಿದ ನಂತರ ಮಾಡಲು ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ಹೆಚ್.ಡಿ. ರೇವಣ್ಣ ನೇತೃತ್ವದಲ್ಲೇ ಬೃಹತ್ ಸಮಾವೇಶ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಾದ್ಯಂತ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ನಂತರ, ಚುನಾವಣೆ ಆಸುಪಾಸಿನಲ್ಲಿ ಕೆಲವು ಅಹಿತರಕರ ಘಟನೆಗಳಿಂದ‌ ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿದೆ. ಹಾಸನ ಜಿಲ್ಲೆಯ ಜನತೆ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿ‌ ಕೊಟ್ಟಿದ್ದಾರೆ. ಕಳೆದ 60 ವರ್ಷಗಳ ಏಳು ಬೀಳುಗಳಲ್ಲಿ ಅವರ ರಾಜಕೀಯ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿರುವುದು ಹಾಸನ ಜಿಲ್ಲೆಯ ಜನ. ನಮ್ಮ ಬದುಕು ಇರುವವರೆಗೂ ನಾವು ಮರೆಯಲ್ಲ ಎಂದು ಹೇಳಿದರು.

ಮಿಲಿಟರಿ ಪಡೆ ಕರ್ಕೊಂಡು ಬರುವುದಾಗಿ ಡಿ.ಕೆ. ಶಿವಕುಮಾರ್‌ಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಹಾಸನದಲ್ಲಿ ಆಗಿರುವ ಬೆಳವಣಿಗೆಗಳನ್ನು ನೋಡಿದ ಜನರು ಕುಮಾರಣ್ಣ ಹಾಸನ ಜಿಲ್ಲೆಗೆ ಬರಬೇಕೆಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ನಾನು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಎಲ್ಲ‌ ಮಾಹಿತಿಯನ್ನು ಕೇಂದ್ರ ಸಚಿವರಿಗೆ ನೀಡುತ್ತೇನೆ. ಅವರನ್ನು ಒಮ್ಮೆ ಭೇಟಿ ನೀಡುವಂತೆ ಚರ್ಚೆ ಮಾಡುತ್ತೇನೆ. ಬಹಳ ದಿನಗಳಿಂದ ಈ ರಸ್ತೆಯಲ್ಲಿ ಸುರಂಗ ಮಾರ್ಗ ಆಗಬೇಕು ಎನ್ನುವ ಚರ್ಚೆಗಳಿವೆ. ಇದಕ್ಕೆ ಅರಣ್ಯ ಇಲಾಖೆಯ ತೊಡಕುಗಳಿವೆ. ಎಲ್ಲವನ್ನೂ ನಾನು ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಲ್ಲಿ ಬೃಹತ್ ಸಮಾವೇಶ ಮಾಡುವಂತೆ ಶಾಸಕರ‌ ಒತ್ತಾಯ ಇದೆ. ಕಲಾಪ ಮುಗಿದ ನಂತರ ಮಾಡಲು ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ಹೆಚ್.ಡಿ. ರೇವಣ್ಣ ನೇತೃತ್ವದಲ್ಲೇ ಬೃಹತ್ ಸಮಾವೇಶ ಮಾಡುತ್ತೇನೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ, ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿನ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ, ಶಾಸಕರುಗಳನ್ನೊಳಗೊಂಡು ನಾನು ಸೇರಿ ಪಕ್ಷ ಸಂಘಟನೆ ಮಾಡುತ್ತೇವೆ. ಈ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇವೆ ಎಂದು ಹೇಳಿದರು.

ಕನ್ನಡಿಗರನ್ನು ಬೆಂಬಲಿಸಿ ಫೋನ್‌ಪೇ ಜತೆಗಿನ ಒಪ್ಪಂದದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ನನ್ನ ತಂದೆ ದೇವೇಗೌಡರು ಹಾಗೂ ನನ್ನ ತಾಯಿ ಇಬ್ಬರೂ ಭಗವಂತನಲ್ಲಿ ಹೆಚ್ಚು ನಂಬಿಕೆ ಇಟ್ಟಿದ್ದಾರೆ. ಅವರು ಶಿವನನ್ನು ಆರಾಧಿಸುತ್ತಾರೆ. ಈ‌ ಕುಟುಂಬವನ್ನು ಮುಗಿಸಲು ಹೊರಟರ ವಿರುದ್ಧ ಹೋರಾಡಲು, ರಾಜಕೀಯ ಏಳುಬೀಳಿನ ನಡುವೆ ಆ ಭಗವಂತ ಶಕ್ತಿ ಕೊಟ್ಟಿದ್ದಾನೆ. ಹಲವು ದು:ಖ, ನೋವುಗಳನ್ನು ಕೊಟ್ಟಿದ್ದಾನೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಹಲವಾರು ಯೋಜನೆಗಳನ್ನು ತರುವ ಸಿದ್ದತೆಗಳಾಗುತ್ತಿವೆ. ನನಗೂ ಸಹ ಜವಾಬ್ದಾರಿ ನೀಡಿದ್ದಾರೆ. ಎರಡು ಜವಾಬ್ದಾರಿ, ಎರಡು ಕಮಿಟಿ ಜೊತೆಗೆ ದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆದ್ದರಿಂದ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜೊತೆಗೆ ನಾನು ಎರಡು ಬಾರಿ ಸಿಎಂ ಆಗಿ ಮಾಡಿರುವ ಕೆಲಸದ ಬಗ್ಗೆ ನಂಬಿಕೆ ಇಟ್ಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Latest Videos
Follow Us:
Download App:
  • android
  • ios