ಜೆಡಿಎಸ್‌, ಬಿಜೆಪಿ ಒಂದಾಗುತ್ತಿದೆ: ದಿನೇಶ್‌

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮ ಕಣ್ಮುಂದೆಯೇ ಒಂದಾಗುತ್ತಿರುವುದು ಕಂಡು ಬರುತ್ತಿದೆ. ನಮಗೆ ಈ ಬಗ್ಗೆ ಆತಂಕವಿಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

JDS BJP coming together: Dinesh snr

ತುಮಕೂರು: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮ ಕಣ್ಮುಂದೆಯೇ ಒಂದಾಗುತ್ತಿರುವುದು ಕಂಡು ಬರುತ್ತಿದೆ. ನಮಗೆ ಈ ಬಗ್ಗೆ ಆತಂಕವಿಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಸಿಂಗಾಪೂರ್‌ ರಾಜಕಾರಣದ ಬಗ್ಗೆ ಈಗಾಗಲೇ ನಮ್ಮ ಪಕ್ಷದ ಅಧ್ಯಕ್ಷರು ಮಾತನಾಡಿದ್ದಾರೆ. ಅವರಿಗೆ ವಿಶೇಷ ಮಾಹಿತಿ ಇರಬಹುದು. ಜೆಡಿಎಸ್‌ ಮತ್ತು ಬಿಜೆಪಿಯವರು ನಮ್ಮ ವಿರುದ್ಧ ಷಡ್ಯಂತ್ರ ಮಾಡಲು ಒಂದಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದರಿಂದ ನಮಗೇನೂ ಆತಂಕವಿಲ್ಲ. ನಮ್ಮ ಪಕ್ಷದ ಸಚಿವರು, ಶಾಸಕರು ಎಲ್ಲರೂ ಒಗ್ಗಟ್ಟಾಗಿದ್ದೇವೆ. ನಮ್ಮ ಸರ್ಕಾರದ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿದೆ. ಇದರಲ್ಲಿ ಯಾವುದೇ ಸಂದೇಹ ಬೇಡ. ಸಚಿವರ ಮೇಲೆ ಶಾಸಕರಿಗೆ ಅಸಮಾಧಾನ ಇದೆ, ಶಾಸಕರು, ಸಚಿವರ ವಿರುದ್ಧ ಪತ್ರ ಬರೆದಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೇನು ಆ ಬಗ್ಗೆ ಮಾಹಿತಿ ಇಲ್ಲ. ನಿನ್ನೆ ಮುಖ್ಯಮಂತ್ರಿಗಳು ಸಿಕ್ಕಿದ್ದರು, ಆ ಬಗ್ಗೆ ಏನೂ ಮಾತನಾಡಲಿಲ್ಲ ಎಂದರು.

ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಬಹಳ ಅತ್ಯಂತ ಸ್ವಚ್ಛವಾಗಿರುವ ಉತ್ತಮ ಸಂಸ್ಥೆ. ನೂತನವಾಗಿ ನಿರ್ಮಾಣ ಮಾಡಲಾಗಿರುವ ಸೂಪರ್‌ ಸ್ಪೆಷಾಲಿಟಿ ಹೊರ ರೋಗಿಗಳ ಘಟಕದಿಂದ ಜನರಿಗೆ ಬಹಳಷ್ಟುಅನುಕೂಲವಾಗಲಿದೆ. ನೆಪ್ರೋಲಜಿ, ಗ್ಯಾಸ್ಟೊ್ರೕಎಂಟರಾಲಜಿ ಸೇರಿದಂತೆ ವಿವಿಧ ರೋಗಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲಾಗಿದೆ ಎಂದರು.

ಬಿಜೆಪಿ ವಕಾಲತ್ತು ಯಾಕೆ

ಮಂಗಳೂರು (ಜು.23): ಗಡಿಪಾರು ನೋಟಿಸ್‌ ಅಪರಾಧಿಗಳಿಗೆ ನೀಡಿರುವುದು. ಅವರು ಹಲವು ಪ್ರಕರಣಗಳಲ್ಲಿ ಭಾಗಿಯಾದವರು. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದ್ದಾರೆ. ಅವರ ಮೇಲೆ ಅನೇಕ ಪ್ರಕರಣಗಳು ದಾಖಲಾಗಿವೆ. ಅಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಅಂದರೆ, ಅದಕ್ಕಿಂತ ಕೆಟ್ಟಸಂಗತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌(Dinesh gundu rao) ಹೇಳಿದ್ದಾರೆ.

ಬಜರಂಗದಳದ ಮೂವರು ಕಾರ್ಯಕರ್ತರಿಗೆ ಪೊಲೀಸರು ಗಡೀಪಾರು ನೋಟಿಸ್‌ ನೀಡಿರುವ ವಿಚಾರವಾಗಿ ಬಿಜೆಪಿಯವರ ವಿರೋಧದ ಬಗ್ಗೆ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಪರಾಧಿಗಳ ವಿರುದ್ಧ ಕ್ರಮ ವಹಿಸಲು ಯಾವುದೇ ಜಾತಿ-ಧರ್ಮ ಅಡ್ಡ ಬರುವುದಿಲ್ಲ. ನಮ್ಮ ಪೊಲೀಸರಿಗೆ ತಪ್ಪು$ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ ಎಂದವರು ಹೇಳಿದರು

ಭಜರಂಗದಳ ಕಾರ್ಯಕರ್ತರ ಗಡಿಪಾರು; ಶಾಂತಿ ಕದಡೋರಿಗೆ ಖಡಕ್ ವಾರ್ನ್ ಕೊಟ್ಟ ಮಂಗಳೂರು ಕಮಿಷನರ್

ಜಿಲ್ಲೆಯಲ್ಲಿ ಈಗಾಗಲೇ 65 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಆ ಪಟ್ಟಿಯನ್ನು ಬಿಜೆಪಿಯವರು ನೋಡಲಿ. ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇಂಥ ಕೆಲಸಕ್ಕೆ ಪ್ರೋತ್ಸಾಹಿಸುತ್ತದೆ ಎಂದಾದರೆ ಅಪರಾಧ ಕೃತ್ಯಗಳಿಗೆ ಬೆಂಬಲ ಇದೆ ಎಂದಾಯಿತು ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

Latest Videos
Follow Us:
Download App:
  • android
  • ios