ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಪಟ್ಟಣದಲ್ಲಿ ಗುರುವಾರ ಸರಗೂರು ಟೌನ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ನಾಗರಾಜು ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಸರಗೂರು : ಪಟ್ಟಣದಲ್ಲಿ ಗುರುವಾರ ಸರಗೂರು ಟೌನ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ನಾಗರಾಜು ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಾಂಗ್ರೆಸ್‌ನ ತತ್ವ ಸಿದ್ಧಾಂತಗಳನ್ನು ಅನುಸರಿಸಿ, ಶಾಸಕ ಅನಿಲ್ ಚಿಕ್ಕಮಾದು ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್, ಬಿಜೆಪಿ ತೊರೆದು ಕೈ ಸೇರ್ಪಡೆಗೊಂಡ ಹಲವು ಕಾರ್ಯಕರ್ತರನ್ನು ಟೌನ್ ಅಧ್ಯಕ್ಷ ಎಸ್.ಎನ್. ನಾಗರಾಜು ಅವರು ಕಾಂಗ್ರೆಸ್‌ನ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಕಾಂಗ್ರೆಸ್‌ನ ಟೌನ್ ಅಧ್ಯಕ್ಷ ಎಸ್.ಎನ್. ನಾಗರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಡಿ.ಪಿ.ನಟರಾಜು, ಪಪಂ ಮಾಜಿ ಸದಸ್ಯ ಎಸ್.ಎನ್. ನಾಗಯ್ಯ, ಬಿಲ್ಲಯ್ಯ, ಕಾಳಿಪ್ರಸಾದ್, ಮುರುಳಿ, ಶಿವರಾಜು, ವೆಂಕಟಪ್ಪ, ಗೋಪಿದಾಸಿ, ಸೋಮಣ್ಣ ಇದ್ದರು.
ಕಾಂಗ್ರೆಸ್ ತೊರೆದು ಕಮಲ ಹಿಡಿದ ಮುಸ್ಲಿಂ ಯುವಕರು
ಕೊರಟಗೆರೆ: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳೇ ಬಿಜೆಪಿ ಪಕ್ಷಕ್ಕೆ ಶ್ರೀರಕ್ಷೆ. 2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವು ಖಚಿತ. ಯುವ ಕಾರ್ಯಕರ್ತರ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ಮತ್ತಷ್ಟುಶಕ್ತಿ ಬಂದಿದೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಬಿ.ಹೆಚ್.ಅನಿಲ್‌ಕುಮಾರ್ ತಿಳಿಸಿದರು.
ಕೊರಟಗೆರೆ ತಾಲೂಕು ಹೊಳವನಹಳ್ಳಿಯ ಇಂದಿರಾ ಕಾಲೋನಿಯಲ್ಲಿ ಬಿಜೆಪಿ ಮಂಡಲದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಯುವ ಕಾರ್ಯಕರ್ತರ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ರಾಷ್ಟ್ರ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದೆ. ಮುಳುಗುವ ಹಡಗಿನಲ್ಲಿ ಪ್ರಯಾಣಿಕ ಸಂಚಾರ ಮಾಡಿದರೇ ಅಪಾಯ ಕಟ್ಟಿಟ್ಟಬುತ್ತಿ. ಕರ್ನಾಟಕ ಮತ್ತು ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಕಾಂಗ್ರೆಸ್ ಪಕ್ಷದ ಮುಳುಗಡೆ ಖಚಿತವಾಗಿದೆ. 125ಕ್ಕೂ ಅಧಿಕ ಜನ ಯುವ ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ಮತ್ತಷ್ಟುಶಕ್ತಿ ಬರಲಿದೆ ಎಂದು ಹೇಳಿದರು. ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಬಿ.ಹೆಚ್.ಅನಿಲ್‌ಕುಮಾರ್ ಕೊರಟಗೆರೆ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ. ಕೊರಟಗೆರೆ ಕ್ಷೇತ್ರದ ಪ್ರತಿ ಹಳ್ಳಿಯ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಬೂತ್‌ಮಟ್ಟದ ಸಭೆಗಳನ್ನ ಈಗಾಗಲೇ ನಡೆಸಿದ್ದಾರೆ. ಬೂತ್ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮೀಣ ಮತದಾರರ ವಿಶ್ವಾಸ ಗಳಿಸಲು ಹಗಲುರಾತ್ರಿ ಎನ್ನದೇ ಬಿಜೆಪಿ ಪಕ್ಷದ ಪರವಾರ ಪ್ರಚಾರ ದಲ್ಲಿ ತೊಡಗಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಜಿ.ವೆಂಕಟಾಚಲಯ್ಯ, ರೀಯಾಸತ್ ಅಲಿ, ಸಂಜೀವರೆಡ್ಡಿ, ರವಿವರ್ಮ, ದಾಸಾಲುಕುಂಟೆ ರಘು, ಆಟೋ ಗೋಪಾಲ ಕೃಷ್ಣ, ರಾಜಣ್ಣ, ನಾಗರಾಜು, ವೆಂಕಟೇಶ್, ಇರ್ಫಾನ್, ಪ್ರವೀನ್, ದಯಾನಂದ್, ಆನಂದ್, ಗಂಗಣ್ಣ ಸೇರಿದಂತೆ ಮುಸ್ಲಿಂ ಮುಖಂಡರು ಇದ್ದರು.
ಮುಸ್ಲೀಮರ ಮೀಸಲಾತಿಗೆ ಕೊಕ್, ಸಿಎಂ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ?