ಮಂಡ್ಯ [ಸೆ.23]: ಮಂಡ್ಯ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಅಧಿಕಾರಕ್ಕಾಗಿ ಜೆಡಿಎಸ್ ಗೇಮ್ ಪ್ಲಾನ್ ಬದಲಾಯಿಸಿದೆ.

ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನಿಂದ ಎಚ್.ಟಿ. ಮಂಜು ಬದಲಾಗಿ ರಾಮಚಂದ್ರು ಮತ್ತು ವಿಶ್ವನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ರಘುನಂದನ್ ನಾಮಪತ್ರ ಸಲ್ಲಿಸಿದ್ದಾರೆ. 

ಇನ್ನು ಈ ಬಗ್ಗೆ ಮಾಜಿ ಸಚಿವ ಪುಟ್ಟರಾಜು ಮಾತನಾಡಿ ನಾಮಪತ್ರ ಪರಿಶೀಲನೆ ಬಳಿಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಬ್ಬರಲ್ಲಿ ಒಬ್ಬರ ನಾಮಪತ್ರ ಹಿಂತೆಗೆಯಲಿದ್ದು, ನಾವು ಖಂಡಿತವಾಗಿ ಮನ್ಮುಲ್ ಅಧಿಕಾರ ಹಿಡಿಯುತ್ತೇವೆಂದು  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನು ಅಧ್ಯಕ್ಷ ಸ್ಥಾನ ತನ್ನದಾಗಿಸಿಕೊಳ್ಳಲು ಹರಸಾಹಸಪಡುತ್ತಿರುವ ಬಿಜೆಪಿಯಿಂದ ಅಧ್ಯಕ್ಷ ಸ್ಥಾನ ಎಸ್.ಟಿ ಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.