ಬೆಂಗ್ಳೂರಿನ ಜಲಮೂಲ ರಕ್ಷಣೆಗೆ ಜೆಡಿಎಸ್ ಬದ್ಧ: ಕುಮಾರಸ್ವಾಮಿ
* ಅಧಿಕಾರಕ್ಕೆ ಬಂದರೆ ನಗರದ ಕೆರೆಗಳ ಒತ್ತುವರಿ ತೆರವು
* ಬೆಂಗಳೂರಿನ ಐಟಿ ಕ್ರಾಂತಿಗೆ ಮುನ್ನುಡಿ ಬರೆದವರು ದೇವೇಗೌಡರು
* ಬೆಂಗಳೂರಿಗೆ ಅನೇಕ ಕಾರ್ಯಕ್ರಮ ಕೊಟ್ಟ ದೊಡ್ಡಗೌಡರು
ಬೆಂಗಳೂರು(ಮೇ.13): ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ(JDS) ಪೂರ್ಣ ಬಹುಮತ ಬಂದರೆ ಬೆಂಗಳೂರಿನ(Bengaluru) ಎಲ್ಲ ಕೆರೆಗಳ ಅಭಿವೃದ್ಧಿಯ ಜತೆಗೆ ಕೆರೆಗಳ ಒತ್ತುವರಿ ತೆರವುಗೊಳಿಸಿ ಜಲಮೂಲಗಳನ್ನು ಸಂರಕ್ಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.
ನಗರದ ಗಾಂಧಿನಗರದಲ್ಲಿ ಗುರುವಾರ ನಡೆದ ಜನತಾ ಜಲಧಾರೆ(Janata Jaladhare) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರ್ಕಾರ ರಚನೆಗೆ ಜನ ಬೆಂಬಲ ನೀಡಿದರೆ, ನೀರಿನ(Water) ವಿಷಯದಲ್ಲಿ ಬೆಂಗಳೂರು ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
ಎಚ್‌ಡಿಕೆಗೆ ಶಾಕ್ ಕೊಟ್ಟ ಡಿಕೆ ಬ್ರದರ್ಸ್, ಚನ್ನಪಟ್ಟಣದ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಜಲ ಮೂಲಗಳನ್ನು(Water Source) ರಕ್ಷಿಸಿ ಅದನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. ಕೆರೆಗಳನ್ನು ಉತ್ತಮಪಡಿಸಿ ಅವುಗಳಿಗೆ ನದಿ ನೀರು ತುಂಬಿಸುವ ಕೆಲಸ ಮಾಡಲಾಗುವುದು. ಎಚ್.ಡಿ.ದೇವೇಗೌಡರ(HD Devegowda) ಅಧಿಕಾರದಲ್ಲಿ ಇದ್ದಾಗ ರಾಜ್ಯಕ್ಕೆ(Karnataka) ಅನೇಕ ನೀರಾವರಿ ಯೋಜನೆ(Irrigation Project) ಕೊಟ್ಟಿದ್ದಾರೆ. ಅದರಲ್ಲೂ ಬೆಂಗಳೂರಿಗೆ ಅನೇಕ ಕಾರ್ಯಕ್ರಮ ಕೊಟ್ಟಿದ್ದಾರೆ. ದೇವೇಗೌಡರು ಮಾಡಿದ ಒಂದು ಆದೇಶದಿಂದ ನಗರಕ್ಕೆ ಕಾವೇರಿ ನದಿಯಿಂದ 9 ಟಿಎಂಸಿ ನೀರು ಸಿಕ್ಕಿದೆ. ಇಂದು ನಗರದ ಜನ ಕಾವೇರಿ ನೀರು ಕುಡಿಯುತ್ತಿದ್ದರೆ, ಅದಕ್ಕೆ ಕಾರಣ ದೇವೇಗೌಡರು ಎಂದು ಹೇಳಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಮೆಟ್ರೋ(Metro) ಕಾಮಗಾರಿಗೆ ಅಡಿಗಲ್ಲು ಹಾಕಿ ಮೊದಲ ಹಂತಕ್ಕೆ ಚಾಲನೆ ನೀಡಿದ್ದೆ. ನಗರದ ಐಟಿ ಕ್ರಾಂತಿಗೆ ಮುನ್ನುಡಿ ಬರೆದವರು ದೇವೇಗೌಡರು. ನಗರಕ್ಕೆ ಐಟಿ ಪಾರ್ಕ್ ಬರಲು ಕೂಡ ಅವರೇ ಕಾರಣ. ವರ್ತುಲ ರಸ್ತೆ ಇತ್ಯಾದಿ ಮೂಲಸೌಕರ್ಯವನ್ನು ಕಲ್ಪಿಸಿದವರು ದೇವೇಗೌಡರು. ಇದನ್ನು ಬೆಂಗಳೂರಿನ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು. ಗಾಂಧಿನಗರದ ಜೆಡಿಎಸ್ ಮುಖಂಡ ನಾರಾಯಣ ಸ್ವಾಮಿ, ಪಕ್ಷದ ನಗರ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಂಗ್ರೆಸ್ ,ಬಿಜೆಪಿ ವಿರುದ್ದ ಗುಡುಗಿದ HDK
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಇಂದು ಜೆಡಿಎಸ್ ಪಕ್ಷದಿಂದ ನಡೆದ ಜನತಾ ಜಲಧಾರೆಗೆ (Janata Jaladhare campaign) ಕಾರ್ಯಕ್ರಮಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದ್ದರು.
ನನ್ನ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಅಶ್ವತ್ಥನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ
ಏ.18 ರಂದು ಭದ್ರಾ ನದಿಯ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭದ್ರಾ ನೀರಿನ್ನು ಸಂಗ್ರಹಿಸಲಾಯಿತು. ರಾಜ್ಯದ 84 ಕಡೆಗಳಿಂದ 17 ವಾಹನಗಳಲ್ಲಿ ನೀರಿನ್ನು ಸಂಗ್ರಹ ಮಾಡಲಾಗುತ್ತಿದೆ . ಇದರ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸದ ಭದ್ರಾ ನದಿಯ ನೀರಿನ್ನು ಕೂಡ ಸಂಗ್ರಹ ಮಾಡಲಾಯಿತು.
ಎರಡು ರಾಷ್ಟ್ರೀಯ ಪಕ್ಷಗಳಿಂದ ಜನರಿಗೆ ಅನ್ಯಾಯ
ರಾಜ್ಯದ ಪಾಲಿನ ನೀರನ್ನು ಬಳಕೆ ಮಾಡುವುದರಲ್ಲಿ ರಾಷ್ಟ್ರೀಯ ಪಕ್ಷಗಳು ಈ ರಾಜ್ಯದ ಜನತೆಗೆ ಅನ್ಯಾಯ ಮಾಡಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ 43 ಉಪ ನದಿಗಳಿವೆ. ಅದರ ನೀರನ್ನು ಬಳಸಿಕೊಂಡು ರೈತರ ನೀರಾವರಿಗೆ ಮತ್ತು ಪ್ರತೀ ಮನೆಗಳಿಗೆ ಕುಡಿಯಲು ಶುದ್ಧ ನೀರನ್ನು ಒದಗಿಸುವುದೇ ಜಲಧಾರೆ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.ರಾಜ್ಯದ ನೀರಾವರಿ ಯೋಜನೆಗಳಿಗೆ 5 ಲಕ್ಷ ಕೋಟಿ ರೂ.ಹಣ ಬೇಕಾಗಿದ್ದು, ನಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಐದು ವರ್ಷದಲ್ಲಿ ಇದನ್ನು ಹೊಂದಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತೇವೆ. ಆದರೆ ಇದರಲ್ಲಿ ದುಡ್ಡು ಹೊಡೆಯುವ ಕೆಲಸ ನಾವು ಮಾಡುವುದಿಲ್ಲ ಎಂದರು.