ತುಮಕೂರು ನಗರ ವಿಧಾನಸಭಾ ಕ್ಷೇತ್ರ ಜೆಡಿಎಸ್‌ ಪರಾಜಿತ ಅಭ್ಯರ್ಥಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ನಡೆದಿದೆ.

ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರ ಜೆಡಿಎಸ್‌ ಪರಾಜಿತ ಅಭ್ಯರ್ಥಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ನಡೆದಿದೆ.

ತುಮಕೂರಿನ ಬೆಳಗುಂಬ ರಸ್ತೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಗೋವಿಂದರಾಜು ಕಚೇರಿ ತೆರೆದಿದ್ದರು. ಸೋಮವಾರ ಬೆಳಗಿನ ಜಾವ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯಿಂದ ಕಚೇರಿ ಬಾಗಿಲಿಗೆ ಸ್ವಲ್ಪ ಹಾನಿಯಾಗಿದ್ದು ಕಚೇರಿ ಹೊರಗಿದ್ದ ವೇಸ್ಟ್‌ ಪೇಪರ್‌ ಭಸ್ಮವಾಗಿದೆ. ತುಮಕೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗ್ಯಾರಂಟಿ ವಿಚಾರಕ್ಕೆ ಎಚ್‌ಡಿಕೆ ಪ್ರಶ್ನೆ

ಬೆಂಗಳೂರು(ಮೇ.30): ಕಾಂಗ್ರೆಸ್‌ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಮಾಡುವುದು ಕಾಂಗ್ರೆಸ್‌ ಸರ್ಕಾರದ ಜವಾಬ್ದಾರಿಯಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್‌ ಗ್ಯಾರಂಟಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಮಂಗಳವಾರ) ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರವನ್ನ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಅಂತ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್‌ ಗ್ಯಾರಂಟಿ: ಉಚಿತ 10 ಕೆಜಿ ಅಕ್ಕಿ ವಿತರಣೆ ವಿಳಂಬ ಸಾಧ್ಯತೆ?

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಅಂತ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರ್ಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಅಂತ ಹೇಳಿದ್ದಾರೆಅದು ಬಿಟ್ಟು 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಅಂತ ಎಚ್‌.ಡಿ.ಕುಮಾರಸ್ವಾಮಿ