ಮೈಸೂರು [ಸೆ.13]:  ‘ಜಿ.ಟಿ.ದೇವೇಗೌಡರು ಎಲ್ಲಿಗೆ ಬೇಕೋ ಹೋಗಲಿ ಬಿಡಿ. ಯಾರು ಅವರನ್ನು ಹಿಡಿದುಕೊಂಡಿದ್ದಾರೆ?’

-ಇದು ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ಜಿ.ಟಿ. ದೇವೇಗೌಡರ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ಸ್ಪಷ್ಟನುಡಿ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರ ಬಗ್ಗೆ ನಾನೇನಾದರೂ ಮಾತನಾಡಿದ್ದೀನಾ? ದೇವೇಗೌಡರು ಗುರುಗಳಲ್ಲ ಎಂದು ಅವರು ಹೇಳಿದ್ದಾರೆ. ಜಿ.ಟಿ. ದೇವೇಗೌಡರನ್ನು ನಾನು ಕೇಳಿದ್ದೆನಾ? 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವೈಯಕ್ತಿಕವಾಗಿ ನಾನು ಯಾರನ್ನೂ ಟೀಕಿಸುವುದಿಲ್ಲ. ಅವರು ಹೇಳುವುದನ್ನು ಕೇಳಿಸಿಕೊಳ್ಳುತ್ತೇನೆ ಮತ್ತು ಕೇಳಿದ್ದೇನೆ ಕೂಡ. ಎಚ್‌.ಡಿ. ಕುಮಾರಸ್ವಾಮಿಯೂ ಗುರುವಲ್ಲ. ನಾನು ಸ್ವಂತ ಬೆಳೆದಿದ್ದೇನೆ ಎಂದು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.