ಮಂಡ್ಯ ಉಸ್ತುವಾರಿ ಸಚಿವ ಕೆ ಸಿ ನಾರಾಯಣಗೌಡಗೆ ಮಾಜಿ ಸಿಎಂ ಹಾಗೂ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಅವರಿಗೆ ಸಾಮರ್ಥ್ಯ ಇಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ. 

ಚನ್ನಪಟ್ಟಣ (ಜ.24): ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಷೇಧಿಸುವಲ್ಲಿ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಅಸಮರ್ಥರೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡಗೆ ಟಾಂಗ್‌ ನೀಡಿದ್ದಾರೆ. 

ಸ್ವಕ್ಷೇತ್ರದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಸಚಿವ ನಾರಾಯಣಗೌಡ ಹೇಳಿಕೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದು ವರ್ಷ ಕಳೆದಿದೆ. ಈವಾಗ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ದೊರೆತಿದೆಯಾ ಎಂದು ವ್ಯಂಗ್ಯವಾಡಿದರು.

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಇದ್ದ ಮೇಲೆ ಅವರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕ್ರಮ ಕೈಗೊಂಡಿಲ್ಲ. ಕ್ರಮ ಕೈಗೊಳ್ಳಲು ಅವರು ಅಸಮರ್ಥರಾ? ಯಾವುದೇ ಪಕ್ಷವರು ಅಕ್ರಮ ವ್ಯವಹಾರದಲ್ಲಿ ತೊಡಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾದದ್ದು ಸರ್ಕಾರದ ಕರ್ತವ್ಯ ಎಂದರು.