ರಾಮನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಅಗತ್ಯ: ಎಚ್.ಡಿ.ಕುಮಾರಸ್ವಾಮಿ
ಜಿಲ್ಲೆ ಹಿಂದೆಂದು ಕಂಡು ಕೇಳರಿಯದ ನೆರೆಹಾನಿ ಈ ವರ್ಷ ಕಂಡಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.
ಚನ್ನಪಟ್ಟಣ (ಸೆ.02): ಜಿಲ್ಲೆ ಹಿಂದೆಂದು ಕಂಡು ಕೇಳರಿಯದ ನೆರೆಹಾನಿ ಈ ವರ್ಷ ಕಂಡಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು. ಸತತ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸ್ಥಳ ಪರಿಶೀಲಿಸಿದ ಮೇಲೆ ಎನ್‌ಡಿಆರ್‌ಎಫ್ ಕೊಡುವ ಪರಿಹಾರ ಏತಕ್ಕೂ ಸಾಕಾಗುವುದಿಲ್ಲ ಎಂಬುದು ಗೊತ್ತಾಗಿದೆ. ಆದ್ದರಿಂದ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂ ಜತೆ ಮಾತನಾಡಿದ್ದೇನೆ. ಸರ್ಕಾರದ ಮೇಲೆ ಮತ್ತಷ್ಟುಒತ್ತಡ ಹಾಕುತ್ತೇನೆ. ಪರಿಹಾರದ ಸಮಸ್ಯೆಯಿರುವೆಡೆ ವೈಯಕ್ತಿಕವಾಗಿ ಸಹಾಯ ಮಾಡಲು ತೀರ್ಮಾನಿಸಿದ್ದೇನೆ ಎಂದರು.
ಉಸ್ತುವಾರಿ ಸಚಿವರು ಸ್ಮಂದಿಸಲಿ: ಮಳೆ ಹಾನಿ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ಭೇಟಿ ನೀಡದ ವಿಚಾರವಾಗಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಮಳೆ ಹಾನಿಯಾಗಿದೆ. ಎಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಶ್ವತ್‌್ಥ ನಾರಾಯಣ ಹೇಳ್ತಾ ಇದ್ದರಲ್ಲ, ರಾಮನಗರದಲ್ಲಿ ಅಭಿವೃದ್ಧಿ ಆಗಿಲ್ಲ ಅಂತಾ. ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಮಾಡಿದ್ದೀನಿ ಅಂತಾ ಹೇಳಿದ್ದಾರೆ. ಮಳೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಿ ಎಂದರು.
ಜಲಪ್ರಳಯ: ರಾಮನಗರದಲ್ಲಿ ಎಲ್ಲಿ ನೋಡಿದ್ರೂ ಬರೀ ಅವಶೇಷಗಳೇ..!
ಸಿಪಿವೈ ವಿರುದ್ಧ ವಾಗ್ದಾಳಿ: ಕಳೆದ 25 ವರ್ಷಗಳಿಂದ ನನಗೆ ವೋಟ್ ಹಾಕಿದರೆ ಮಾತ್ರ ಹಕ್ಕುಪತ್ರ ನೀಡುತ್ತೀನಿ ಎಂದು ಮಾಜಿ ಶಾಸಕರು ಹೇಳಿದ್ದರು. ಇದೀಗ ನಾನು ಬಂದ ಮೇಲೆ ಸಾಕಷ್ಟುಕಡೆ ಹಕ್ಕು ಪತ್ರ ನೀಡಿದ್ದೇನೆ. ಮನೆ ನಾನೇ ಕಟ್ಟಿಸಿಕೊಡುತ್ತೇನೆ. ಮಾರಾಟ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೇನೆ. ಶೆಡ್‌ನಲ್ಲಿ ವಾಸಿಸುವವರ ಬಗ್ಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನನಗೆ ಇನ್ನೂ ಒಂದು ವರ್ಷ ಅಧಿಕಾರ ಸಿಕ್ಕಿದ್ದರೆ ಈ ರೀತಿ ಚಿತ್ರಣ ಇರುತ್ತಿರಲಿಲ್ಲ. ಮುಂದಿನ ಚುನಾವಣೆಯಲ್ಲಿ 150 ಸೀಟು ಗೆಲ್ತೀವಿ ಅಂತಾ ಯಾರು ಏನೇ ಹೇಳಿಕೆ ನೀಡಿದರೂ ಆಗಲ್ಲ, ಮುಂದಿನ ಬಾರಿ ಜೆಡಿಎಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಎಂಎಲ್‌ಸಿ ಯೋಗೇಶ್ವರ್‌ಗೆ ತಿರುಗೇಟು ನೀಡಿದರು.
ತಾಲೂಕಿನ ಮಂಗಾಡಹಳ್ಳಿಯ ಶ್ರೀನಿವಾಸಪುರ, ಶಾನುಭೋಗನಹಳ್ಳಿ, ಹುಣಸನಹಳ್ಳಿ, ಕೊಂಡಾಪುರ, ಕರಲಹಳ್ಳಿ, ಚಕ್ಕರೆ , ಸುಳ್ಳೇರಿ, ಬೆಳಕೆರೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರಿಶೀಲಿಸಿದರು. ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್‌ಕಾಮ್ಸ್ ದೇವರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯಮರಮು ಮುಂತಾದವರು ಇದ್ದರು.
ಬದುಕು ಕಟ್ಟಿಕೊಳ್ಳಲು ಬೆನ್ನೆಲುಬಾಗಿ ನಿಲ್ಲುವೆ: ನೆರೆಯಿಂದ ಸಂಕಷ್ಟಕ್ಕೊಳಗಾದವರು ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದು, ಮತ್ತೆ ಬದುಕು ಕಟ್ಟಿಕೊಳ್ಳಲು ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೆರೆ ಸಂತ್ರಸ್ತರಿಗೆ ಅಭಯ ನೀಡಿದರು. ನಗರದ ಪರ್ಹಾ ಶಾಲೆಯ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದರು. ಮಳೆಯಿಂದ ಆದ ಹಾನಿಯ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದು, ರಾಮನಗರ ಮತ್ತು ಚನ್ನಪಟ್ಟಣಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದ್ದೇನೆ.
ಪ್ರವಾಹ: ಬೆಂಗಳೂರು-ಮೈಸೂರು ಹೆದ್ದಾರಿ ಪ್ಲಾನ್ ಮಾಡಿದವನಿಗೆ ಪ್ರಶಸ್ತಿ ಕೊಡಿ, ಡಿಕೆಶಿ
ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮವಾಗಿ ಸ್ಮಂದಿಸಿದ್ದಾರೆ ಎಂದರು. ನಿಮಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಗತ್ಯ ವಸ್ತುಗಳನ್ನು ಪಕ್ಷದಿಂದ ನೀಡಲಾಗಿದೆ. ಅಧಿಕಾರಿಗಳು ಅಂದಾಜು ವೆಚ್ಚದ ವರದಿ ನೀಡಿದ ಬಳಿಕ ಸರ್ಕಾರದಿಂದ ಪರಿಹಾರ ದೊರಕಲಿದೆ ಎಂದರು. ಸಂತ್ರಸ್ತರಿಗೆ ಊಟದ ವ್ಯವಸ್ಥೆಯ ಜೊತೆಗೆ ಆರೋಗ್ಯ ತಪಾಸಣೆ ನಡೆಸುವಂತೆ ಹಾಗೂ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.