ಶಿರಾ (ಅ.05): ಉಳಿದಂತೆ ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿ ಕುಮಾರ್‌ ಸೇರಿದಂತೆ ವಿವಿಧ ಪಕ್ಷ ಹಾಗೂ ಸಂಘಟನೆಗಳ 100 ಮಂದಿ ಶಿರಾ ಕ್ಷೇತ್ರದ ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ, ಡಾ.ಜಿ. ಪರಮೇಶ್ವರ್‌, ಕೆ.ಎನ್‌. ರಾಜಣ್ಣ ಅವರು ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಬೈ ಎಲೆಕ್ಷನ್; ಹೈಕಮಾಂಡ್‌ಗೆ ಕೈ ಅಭ್ಯರ್ಥಿಗಳ ಪಟ್ಟಿ, ಪರಿಷತ್‌ಗೆ ಅಚ್ಚರಿ ಹೆಸರು! .

ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಮಾತನಾಡಿ, ಉಪಚುನಾವಣೆ ಸತ್ಯ ಹಾಗೂ ಅಸತ್ಯಗಳ ನಡುವೆ ನಡೆಯುತ್ತಿರುವ ಹೋರಾಟ. ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಸರ್ಕಾರಕ್ಕೆ ಸಂದೇಶ ಕಳುಹಿಸಲು ಶಿರಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಬೇಕು. ಇದಕ್ಕಾಗಿ ತುಮಕೂರು ಜಿಲ್ಲೆಯಲ್ಲಿ ವೈಯಕ್ತಿಕ ಪ್ರತಿಷ್ಠೆಯನ್ನು ಬಿಟ್ಟು ಎಲ್ಲಾ ನಾಯಕರು ಒಂದಾಗಿದ್ದೇವೆ ಎಂದರು.

ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಮಾತನಾಡಿ, ಈ ಚುನಾವಣೆ ಸುಲಭವಲ್ಲ. ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಟಿ.ಬಿ. ಜಯಚಂದ್ರ ಗೆಲ್ಲುವುದು ಅನಿವಾರ್ಯ. ಹೀಗಾಗಿ ಎಲ್ಲರೂ ಸೇರಿ ಹೋರಾಟ ಮಾಡೋಣ ಎಂದರು.

ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, 10 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ