ಹುಬ್ಬಳ್ಳಿ(ಮಾ.04): ಉಮೇಶ ಕತ್ತಿ ಅವರಂತಹ ಹಿರಿಯ ನಾಯಕರಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅಲ್ಲಿ ಅಸಮಾಧಾನದ ಹೊಗೆ ಆಡುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ನ ಕೆಲ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಜೆಡಿಎಸ್‌ ಮುಖಂಡ ಎನ್‌.ಎಚ್‌. ಕೋನರಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಶಾಸಕ ಮಧು ಬಂಗಾರಪ್ಪ ಪಕ್ಷ ಬಿಡಲ್ಲ. ಅವರೊಂದಿಗೆ ನಾನು ಮಾತನಾಡುತ್ತೇನೆ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಕೊಂಚ ಜಾಸ್ತಿನೇ ಇದೆ. ಹೀಗಾಗಿ ನಮ್ಮ ನಾಯಕರು ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕುತ್ತಾರೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉತ್ತರ ಕರ್ನಾಟಕಕ್ಕೆ ಜೆಡಿಎಸ್‌ ಅನ್ಯಾಯ ಮಾಡಿಲ್ಲ. ಮಾಡುವುದೂ ಇಲ್ಲ. ಸರ್ಕಾರವಿದ್ದಾಗ ಸಾಕಷ್ಟು ಅನುದಾನ ನೀಡಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂದು ಹೇಳಿದ್ದಾರೆ.