ಮೈಸೂರಿನ JDS ಮುಖಂಡ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರ್ಪಡೆ

ಪುರಸಭೆಯ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಅವರು ತಮ್ಮ ಬೆಂಬಲಿಗರೊಡನೆ ಜೆಡಿಎಸ್‌ನ್ನು ತೊರೆದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

JDS leader of Mysore joins Congress with supporters snr

  ನಂಜನಗೂಡು (ಜ. 0 8 ):  ಪುರಸಭೆಯ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಅವರು ತಮ್ಮ ಬೆಂಬಲಿಗರೊಡನೆ ಜೆಡಿಎಸ್‌ನ್ನು ತೊರೆದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಮಾತನಾಡಿ, ಪುರಸಭಾ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಅವರು ತಮ್ಮ ಬೆಂಬಲಿಗರೊಡನೆ ಕಾಂಗ್ರೆಸ್‌ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂದಿನ ಕೆಲವೇ ದಿನಗಳಲ್ಲಿ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್‌ನ ಹಲವಾರು ಮುಖಂಡರು ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ. ಇದರಿಂದ ಪಕ್ಷಕ್ಕೆ ಬಲ ಹೆಚ್ಚಾಗಿದೆ ಎಂದರು.

ಕಾಂಗ್ರೆಸ್‌ ಗೆಲುವು ನಿಶ್ಚಿತ- ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದ್ದು, ಅವರು ಕಳೆದ ನಾಲ್ಕು ವರ್ಷಗಳಲ್ಲಿ ಜನರ ಜೀವನಮಟ್ಟವನ್ನು ಸುಧಾರಿಸುವಂತಹ ಯಾವುದೇ ಜನಪರ ಆಡಳಿತವನ್ನು ಕೊಡುವುದರಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲೆಡೆ ಕಾಂಗ್ರೆಸ್‌ ಪರ ಅಲೆ ಇದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ನಂಜನಗೂಡು ಕ್ಷೇತ್ರದಲ್ಲೂ ಸಹ ಉತ್ತಮ ವಾತಾವರಣವಿದ್ದು, ಕಾಂಗ್ರೆಸ್‌ ಗೆಲುವು ನಿಶ್ಚಿತವಾಗಿದೆ ಎಂದರು.

ಮುಂದಿನ 15 ದಿನಗಳಲ್ಲಿ ಕಾಂಗ್ರೆಸ್‌ ಪಟ್ಟಿಸಿದ್ಧ:

ಈಗಾಗಲೇ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಸ್ವೀಕರಿಸಿದ್ದು. ಕೆಪಿಸಿಸಿ ಚುನಾವಣಾ ಸಮಿತಿ ಅರ್ಜಿಗಳ ಪರಿಶೀಲನೆ ನಡೆಸಿ, ಕ್ಷೇತ್ರದಲ್ಲಿ ಮುಖಂಡರ, ಆಕಾಂಕ್ಷಿಗಳ, ಜನಾಭಿಪ್ರಾಯವನ್ನು ಸಂಗ್ರಹಿಸಿ ದೆಹಲಿಯ ಎಐಸಿಸಿ ಕಚೇರಿಗೆ ರವಾನಿಸಿದೆ. ಹೈಕಮಾಂಡ್‌ನ ಸ್ಕ್ರೀನಿಂಗ್‌ ಸಮಿತಿ ಎಲ್ಲ ವರದಿಯ ಆಧಾರದ ಮೇಲೆ ಸಮೀಕ್ಷೆ ನಡೆಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಮುಂದಿನ 15 ದಿನಗಳೊಳಗೆ 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದ ಅವರು, ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಬಣ ರಾಜಕೀಯ, ಭಿನ್ನಾಭಿಪ್ರಾಯಗಳಿಲ್ಲ, ಎಲ್ಲರೂ ಒಟ್ಟಾಗಿದ್ದೇವೆ. ಮುಂದಿನ 15 ದಿನದಲ್ಲಿ ಅಭ್ಯರ್ಥಿಯ ಹೆಸರು ಘೋಷಣೆಯಾಗಲಿದ್ದು. ಎಲ್ಲರೂ ಸಹ ಪಕ್ಷದ ಗೆಲುವಿಗೆ ಒಟ್ಟಾಗಿ ಶ್ರಮಿಸಲಿದ್ದೇವೆ ಎಂದರು.

ಪಕ್ಷ ಸೇರ್ಪಡೆಗೊಂಡ ಮಾಜಿ ಪುರಸಭಾಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ಕ್ಷೇತ್ರದಲ್ಲಿ ಆರ್‌. ಧ್ರುವನಾರಾಯಣ್‌ ಅವರ ಕೈ ಬಲಪಡಿಸುವ ಸಲುವಾಗಿ ಮತ್ತು ಕಾಂಗ್ರೆಸ್‌ನ್ನು ಗೆಲ್ಲಿಸುವ ಸಲುವಾಗಿ ಯಾವುದೇ ಆಕಾಂಕ್ಷೆಗಳಿಲ್ಲದೆ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಗೊಂಡಿದ್ದೇನೆ. ಜೆಡಿಎಸ್‌ ಪಕ್ಷದ ಹಲವಾರು ಮುಖಂಡರು ಕಾಂಗ್ರೆಸ್‌ ಸೇರ್ಪಡೆಗೊಳ್ಳಲು ಕಾದಿದ್ದಾರೆ. ಸೂಕ್ತ ವೇದಿಕೆಯಲ್ಲಿ ಎಲ್ಲರನ್ನೂ ಬರಮಾಡಿಕೊಳ್ಳಲಾಗುವುದು ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ. ಬಸವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೇಶ್‌, ಸಿ.ಎಂ. ಶಂಕರ್‌, ಶ್ರೀಕಂಠನಾಯಕ, ಹಾಡ್ಯರಂಗಸ್ವಾಮಿ, ನಗರಸಭಾ ಸದಸ್ಯರಾದ ಶ್ರೀಕಂಠಸ್ವಾಮಿ, ಶ್ವೇತಲಕ್ಷಿ ್ಮ, ಎಸ್‌.ಪಿ. ಮಹೇಶ್‌ ಇದ್ದರು.

80 ಸ್ಥಾನವನ್ನು ಗೆಲ್ಲಲ್ಲ

ಬೆಂಗಳೂರು (ಜ.07): ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಯೂಸುಫ್‌ ಶರೀಫ್‌ (ಕೆಜಿಎಫ್‌ ಬಾಬು) ಅವರು ಕೆಪಿಸಿಸಿ ಕಚೇರಿಯಲ್ಲೇ ‘ಕಾಂಗ್ರೆಸ್‌ ರಾಜ್ಯದಲ್ಲಿ 80 ಸ್ಥಾನವೂ ದಾಟಲ್ಲ’ ಎಂದಿರುವುದು ಕಾರ್ಯಕರ್ತರನ್ನು ತೀವ್ರವಾಗಿ ಕೆರಳಿಸಿದ್ದು, ಕಾರ್ಯಕರ್ತರೇ ಕೆಜಿಎಫ್‌ ಬಾಬು ಅವರನ್ನು ತರಾಟೆಗೆ ತೆಗೆದುಕೊಂಡು ಕಚೇರಿಯಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಇದು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಹೈಡ್ರಾಮಾ ಸೃಷ್ಟಿಸಿದೆ’. ಇದರ ಬೆನ್ನಲ್ಲೇ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕೆಜಿಎಫ್‌ ಬಾಬು, ‘ಕಾಂಗ್ರೆಸ್‌ನವರು ಅತಿ ಆತ್ಮವಿಶ್ವಾಸದಲ್ಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಲೀಂ ಅಹಮದ್‌ ಅವರನ್ನು ಮಾಡಲಾಗಿದ್ದು, ಅವರ ಹಿಂದೆ ನಾಲ್ಕು ಜನರಿಲ್ಲ. ಅವರು ನನ್ನನ್ನು ಕೆಪಿಸಿಸಿ ಕಚೇರಿಗೆ ಬಿಟ್ಟುಕೊಳ್ಳಬೇಡಿ ಎಂದು ಹೇಳಿದ್ದಾರೆ. 

ನನ್ನನ್ನು ಕಡೆಗಣಿಸಿದರೆ ಕಾಂಗ್ರೆಸ್‌ 10-12 ಕ್ಷೇತ್ರಗಳಲ್ಲಿ ಸೋಲಲಿದೆ’ ಎಂದು ಕಾರ್ಯಾಧ್ಯಕ್ಷರ ವಿರುದ್ಧವೂ ಟೀಕಾಪ್ರಹಾರ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕೆಜಿಎಫ್‌ ಬಾಬು, ನಾನು ಚಿಕ್ಕಪೇಟೆಯಲ್ಲಿ ಕೆಲಸ ಮಾಡುತ್ತಿದ್ದೇನೆ.ಈಗಾಗಲೇ 30 ಕೋಟಿ ರು. ಖರ್ಚು ಮಾಡಿದ್ದೇನೆ. 3 ಸಾವಿರ ಮನೆಗಳನ್ನು ಕಟ್ಟಿಕೊಡುವುದಾಗಿ ಹೇಳಿದ್ದು, ಮನೆಗೆ 5 ಸಾವಿರ ಕೊಡುತ್ತೇನೆ. ಆದರೆ ಆರ್‌.ವಿ. ದೇವರಾಜ್‌ ಅವರೂ ಕೆಲಸ ಮಾಡುತ್ತಿಲ್ಲ ಮಾಡುವವರಿಗೂ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಸಿಬಿಐಯನ್ನು ಛೂ ಬಿಟ್ರು ಬಿಜೆಪಿಯವರು: ಜನಾರ್ದನ ರೆಡ್ಡಿ

ಹೊರಗೆ ಹೋಗಿ ಮಾತನಾಡು: ಕಾರ್ಯಕರ್ತರಿಂದ ತರಾಟೆ: ಕೆಜಿಎಫ್‌ ಬಾಬು ಅವರನ್ನು ತಡೆದ ಕಾರ್ಯಕರ್ತರು ಇದನ್ನೆಲ್ಲಾ ಹೋಗಿ ಹೊರಗಡೆ ಮಾತನಾಡು. ಕಚೇರಿಯಲ್ಲಿ ಏನೇನೋ ಮಾತನಾಡಬೇಡ ಎಂದು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು. ಈ ವೇಳೆ ಕಾರ್ಯಕರ್ತರೊಂದಿಗೆ ಬಾಬು ಸಹ ವಾದಕ್ಕೆ ಇಳಿದಿದ್ದರಿಂದ ವಾಗ್ವಾದ ಜೋರಾಗಿ ಹೈಡ್ರಾಮಾ ಸೃಷ್ಟಿಯಾಯಿತು. ಕೊನೆಗೆ ಒತ್ತಾಯಪೂರ್ವಕವಾಗಿ ಕಾರ್ಯಕರ್ತರು ಬಾಬು ಅವರನ್ನು ಹೊರಗೆ ಕಳುಹಿಸಿದರು.

Latest Videos
Follow Us:
Download App:
  • android
  • ios