ಬೆಂಗಳೂರು (ಆ.141):   ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನವಿರೋಧಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮತ್ತು ಕೈಗಾರಿಕಾ ನೀತಿ ವಿರೋಧಿಸಿ ಜಾತ್ಯಾತೀತ ಜನತಾ ದಳ (ಜೆಡಿಎಸ್‌) ರಾಜ್ಯಾದ್ಯಂತ ಹೋರಾಟ ಆರಂಭಿಸಿದೆ.  ಹಾಸನದಿಂದ ಹೋರಾಟ ಪ್ರಾರಂಭವಾಗಿದೆ.

 ಜನವಿರೋಧಿಯಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮತ್ತು ಕೈಗಾರಿಕಾ ನೀತಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹೋರಾಟ ಆರಂಭವಾಗಿದೆ.

ಹಾಸನದ ಪ್ರತಿಭಟನೆಯಲ್ಲಿ ಜಿಲ್ಲೆಯ ಪಕ್ಷದ ಶಾಸಕರು, ನಾಯಕರು  ಭಾಗಿಯಾಗಿದ್ದು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತಿದೆ.

ಬಿಜೆಪಿ ಸೇರಲು ಜೆಡಿಎಸ್‌ನ ನಾಲ್ವರು ಶಾಸಕರ ಉತ್ಸುಕ'...  

ರಾಜ್ಯದ 30 ಜಿಲ್ಲೆಯಲ್ಲಿಯೂ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು. ರಾಜ್ಯಾಧ್ಯಕ್ಷರು, ಆಯಾ ಭಾಗದ ಶಾಸಕರು, ಮಾಜಿ ಶಾಸಕರು, ಪರಿಷತ್‌ ಸದಸ್ಯರು ಜಿಲ್ಲೆಗಳಲ್ಲಿ ಹೋರಾಟ ಮಾಡುತ್ತಾರೆ. ವಾರದಲ್ಲಿ 30 ಜಿಲ್ಲೆಯಲ್ಲಿ ಹೋರಾಟ ನಡೆಸಲಾಗುವುದು. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಮತ್ತು ನಾನು ಹೋರಾಟದ ಮುಂಚೂಣಿಯಲ್ಲಿ ಭಾಗವಹಿಸುತ್ತೇವೆ ಎಂದು ಈ ವೇಳೆ ಮಾಜಿಪ್ರಧಾನಿ ದೇವೇಗೌಡರು ಹೇಳಿದ್ದಾರೆ.