ಎಸ್‌.ಆರ್‌.ಶ್ರೀನಿವಾಸ್‌ ಅವರು ಕಾಂಗ್ರೆಸ್‌ ಸೕರ್ಪಡೆಯಾದ ಬೆನ್ನಲ್ಲೇ ಗುಬ್ಬಿ ಜೆಡಿಎಸ್‌ನಲ್ಲಿ ಸಂಕಷ್ಟಎದುರಾಗಿದ್ದು ಜೆಡಿಎಸ್‌ನ 9 ಮಂದಿ ಪಟ್ಟಣ ಪಂಚಾಯತ್‌ ಸದಸ್ಯರು ಕಾಂಗ್ರೆಸ್‌ಗೆ ಬಾಹ್ಯ ಬೆಂಬಲ ನೀಡಿದ್ದಾರೆ.

ತುಮಕೂರು : ಎಸ್‌.ಆರ್‌.ಶ್ರೀನಿವಾಸ್‌ ಅವರು ಕಾಂಗ್ರೆಸ್‌ ಸೕರ್ಪಡೆಯಾದ ಬೆನ್ನಲ್ಲೇ ಗುಬ್ಬಿ ಜೆಡಿಎಸ್‌ನಲ್ಲಿ ಸಂಕಷ್ಟಎದುರಾಗಿದ್ದು ಜೆಡಿಎಸ್‌ನ 9 ಮಂದಿ ಪಟ್ಟಣ ಪಂಚಾಯತ್‌ ಸದಸ್ಯರು ಕಾಂಗ್ರೆಸ್‌ಗೆ ಬಾಹ್ಯ ಬೆಂಬಲ ನೀಡಿದ್ದಾರೆ.

ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡದೇ ಬಾಹ್ಯ ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ದಳಪತಿಗೆ ಶಾಕ್‌ ಮೇಲೆ ಶಾಕ್‌ ನೀಡಿದಂತಾಗಿದೆ. ಗುಬ್ಬಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಅಸಮಾಧಾನ ಹೊರಹಾಕಿದ ಪ.ಪಂ ಸದಸ್ಯರು ನಮಗೆ ಜೆಡಿಎಸ್‌ ಪಕ್ಷದ ಮೇಲೆ ಅಸಮಾಧಾನ ಇಲ್ಲ. ನಮಗೆ ಕೇವಲ ಗುಬ್ಬಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿರುವ ನಾಗರಾಜ… ಮೇಲೆ ಅಸಮಾಧಾನ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ಗುಬ್ಬಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್‌ ಪಂಚರತ್ನ ಯಾತ್ರೆ, ವಿವಿಧ ಸಭೆ, ಸಮಾರಂಭ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಪ.ಪಂ ಸದಸ್ಯರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ವಾಸಣ್ಣ ಜೆಡಿಎಸ್‌ ಪಕ್ಷ ಬಿಟ್ಟಮೇಲೆ, ಜೆಡಿಎಸ್‌ ಪಕ್ಷದ ಪ.ಪಂ 9 ಸದಸ್ಯರನ್ನು ನಿರ್ಲಕ್ಷ್ಯ ಮಾಡಿರುವ ಗುಬ್ಬಿ ಕ್ಷೇತ್ರದ ಅಭ್ಯರ್ಥಿ ನಾಗರಾಜ್‌ ಅವರು ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡೇ ಕಾಂಗ್ರೆಸ್‌ ಗೆ ಬೆಂಬಲ ಕೊಡ್ತೀವಿ ಎಂದರು.

ಈಗಾಗಲೇ ನಾವು ಗುಬ್ಬಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗೆ ಮನವಿ ಮಾಡಿದ್ದೇವೆ ಎಂದಿರುವ ಅವರು ಪ್ರತಿಯೊಬ್ಬರಿಗೂ ಸ್ವಾಭಿಮಾನ ಅನ್ನೋದು ಇರುತ್ತದೆ. ಅದಕ್ಕಾಗಿಯೇ ನಾವೆಲ್ಲಾ ನಾಗರಾಜ… ಮೇಲಿನ ಅಸಮಾಧಾನಕ್ಕೆ ಎಸ್‌ ಆರ್‌. ಶ್ರೀನಿವಾಸ್‌ಗೆ ಬಾಹ್ಯ ಬೆಂಬಲ ಕೊಡಲು ಮುಂದಾಗಿದ್ದೇವೆ ಎಂದಿದ್ದಾರೆ.

ಗೌಡರ ಸಂಧಾನ ವಿಫಲ

ಬೆಂಗಳೂರು (ಏ.03): ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್‌.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್‌ ನೀಡುವುದು ಸಾಧ್ಯವಿಲ್ಲ ಎಂಬ ಮಾತನ್ನು ದೇವೇಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ. ಗೌಡರ ಈ ನಿಲುವಿನಿಂದ ಆಕ್ರೋಶಗೊಂಡ ಭವಾನಿ ಮತ್ತು ಎಚ್‌.ಡಿ.ರೇವಣ್ಣ ಮುನಿಸಿಕೊಂಡು ಸಭೆಯ ಅರ್ಧದಲ್ಲೇ ಪ್ರತ್ಯೇಕವಾಗಿ ನಿರ್ಗಮಿಸಿದ್ದಾರೆ. 

ಕುಟುಂಬದವರಿಗೆ ಟಿಕೆಟ್‌ ಬೇಡ ಎಂಬ ಬಲವಾದ ನಿಲುವು ವ್ಯಕ್ತಪಡಿಸಿದ್ದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಮಾತಿಗೇ ದೇವೇಗೌಡರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸೋಮವಾರ ಜೆಡಿಎಸ್‌ನ ಎರಡನೇ ಪಟ್ಟಿಪ್ರಕಟಗೊಳ್ಳುವುದೇ? ಒಂದು ವೇಳೆ ಪ್ರಕಟಗೊಂಡರೂ ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಇರಲಿದೆಯೇ ಎಂಬುದು ಕುತೂಹಲಕರವಾಗಿದೆ. ಭಾನುವಾರ ರಾತ್ರಿ ದೇವೇಗೌಡರ ನಿವಾಸದಲ್ಲಿ ಈ ಸಭೆ ನಡೆಯಿತು. ಮೊದಲಿಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಗಮಿಸಿ ಗೌಡರ ಜತೆ ಮಾತುಕತೆ ನಡೆಸಿದರು. ಬಳಿಕ ರೇವಣ್ಣ ಮತ್ತು ಪತ್ನಿ ಭವಾನಿ ಒಟ್ಟಿಗೆ ಆಗಮಿಸಿದರು.

ಶಾಸಕ ಲಮಾಣಿಗೆ ಟಿಕೆಟ್‌ ಕೊಟ್ಟರೆ ಬಂಡಾಯ ಅಭ್ಯರ್ಥಿ ನಿಲ್ಲಿಸುತ್ತೇವೆ: ಗಂಗಣ್ಣ ಮಹಾಂತಶೆಟ್ಟರ್‌

ಟಿಕೆಟ್‌ಗೆ ಭವಾನಿ ರೇವಣ್ಣ ಬಿಗಿಪಟ್ಟು: ಮೂವರನ್ನೂ ಕೂಡಿಸಿಕೊಂಡು ಸಮಾಲೋಚನೆ ನಡೆಸಿದ ದೇವೇಗೌಡ, ಆರಂಭದಲ್ಲಿ ಅವರವರ ಅಭಿಪ್ರಾಯಗಳನ್ನು ಕೇಳಿದ್ದಾರೆ. ಹಾಸನ ಕ್ಷೇತ್ರದ ಪ್ರಸಕ್ತ ಸನ್ನಿವೇಶದಲ್ಲಿ ಹಾಲಿ ಶಾಸಕ ಪ್ರೀತಂಗೌಡ ಅವರನ್ನು ಮಟ್ಟಹಾಕಲು ತಮಗೇ ಟಿಕೆಟ್‌ ನೀಡಬೇಕು. ಪ್ರೀತಂಗೌಡ ತಮಗೆ ಸಾಕಷ್ಟುಅವಮಾನ ಮಾಡಿರುವುದರಿಂದ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗಿದೆ. ತಮಗೇ ಟಿಕೆಟ್‌ ನೀಡಬೇಕು ಎಂಬ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಭವಾನಿ ರೇವಣ್ಣ ಕಡ್ಡಿ ಮುರಿದಂತೆ ಹೇಳಿದರು ಎನ್ನಲಾಗಿದೆ.