ಬೆಂಗಳೂರು(ಫೆ.26): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ತಯಾರಿ ನಡೆಸಲು ಸಜ್ಜಾಗಿರುವ ಜೆಡಿಎಸ್‌ ಬುಧವಾರದಿಂದ ಸರಣಿ ಸಭೆಗಳನ್ನು ನಡೆಸಲಿದ್ದು, ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗುವುದು.

ಪಕ್ಷದ ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್‌.ಪ್ರಕಾಶ್‌ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ. ಬುಧವಾರದಿಂದ ಮಾ.13ರವರೆಗೆ ವಿಧಾನಸಭಾ ಕ್ಷೇತ್ರವಾರು ಸರಣಿ ಸಭೆಗಳು ನಡೆಯಲಿದೆ. ಮುಂಬರುವ ಬಿಬಿಎಂಪಿ ಚುನಾವಣೆಗೆ ತಯಾರಿ ನಡೆಸುವ ಸಂಬಂಧ ಸಭೆಗಳನ್ನು ನಡೆಸಲಾಗುತ್ತಿದೆ. ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚೆ ನಡೆಸಲಾಗುವುದು. 28 ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ವಾರ್ಡ್‌ ಅಧ್ಯಕ್ಷರು, ವಿವಿಧ ವಿಭಾಗಗಳ ಪದಾಧಿಕಾರಿಗಳು ಸೇರಿದಂತೆ ಇತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮರಣ ಹೊಂದಿದ ಮಗನ ನೆನಪಲ್ಲಿ 10 ಮಕ್ಕಳನ್ನು ದತ್ತು ಪಡೆದ್ರು..!

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆದೇಶದಂತೆ ಸಭೆಯನ್ನು ನಡೆಸಲಾಗುತ್ತಿದೆ. ಚನಾವಣೆಗೆ ಪಕ್ಷದ ನಾಯಕರು, ಕಾರ್ಯಕರ್ತರನ್ನು ಸಜ್ಜುಗೊಳಿಸಿ ಚುನಾವಣಾ ರಣತಂತ್ರ ರೂಪಿಸಲು ಉದ್ದೇಶಿಸಲಾಗಿದೆ. ಪ್ರತಿ ದಿನ ಎರಡು ವಿಧಾನಸಭಾ ಕ್ಷೇತ್ರಗಳ ಸಭೆಗಳನ್ನು ನಡೆಸಿ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ. ಬುಧವಾರ ಯಲಹಂಕ, ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರಗಳ ಸಭೆ ನಡೆಯಲಿದೆ.

ಬೆಂಗಳೂರಿನ ವಿವಿಧೆಡೆ 20 APMC ಮಾರುಕಟ್ಟೆ: ಸಚಿವ ಸೋಮಶೇಖರ್‌

ಗುರುವಾರ ರಾಜರಾಜೇಶ್ವರಿನಗರ, ದಾಸರಹಳ್ಳಿ, ಶುಕ್ರವಾರ ಮಹಾಲಕ್ಷ್ಮೇ ಲೇಔಟ್‌, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇದೇ ರೀತಿ ಮಾ.13ರವರೆಗೆ ನಿರಂತರವಾಗಿ ಸಭೆಗಳನ್ನು ನಡೆಸಲಾಗುವುದು. ಅಲ್ಲದೇ, ಸರಣಿ ಸಭೆಗಳನ್ನು ನಡೆಸಿದ ಬಳಿಕ ಆರ್‌.ಪ್ರಕಾಶ್‌ ಅವರು 100 ದಿನ, 198 ವಾರ್ಡ್‌ಗಳು ಮತ್ತು ಒಂದು ಸಾವಿರ ಸಭೆಗಳನ್ನು ನಡೆಸಲು ಉದ್ದೇಶಿಸಿದ್ದಾರೆ.