Mysuru : 2023ಕ್ಕೆ ಜೆಡಿಎಸ್‌ ಅಧಿಕಾರಕ್ಕೆ ತನ್ನಿ ಎಂದು ಮುಖಂಡರ ಕರೆ

ರಾಜ್ಯದ ಬಿಜೆಪಿ  ಸರ್ಕಾರದ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಪಕ್ಷದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಮೂಲಕ ಜೆಡಿಎಸ್‌ ಪಕ್ಷವನ್ನು 2023ಕ್ಕೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಪ್ರಯತ್ನಿಸಬೇಕು ಎಂದು ವಿಧಾನಪರಿಷತ್ತು ಸದಸ್ಯ ಸಿ.ಎನ್‌. ಮಂಜೇಗೌಡ ಕರೆ ನೀಡಿದರು.

JDS Should  get power in 2023 says Manjegowda snr

ಮೈಸೂರುv (ಅ.16):  ರಾಜ್ಯದ ಬಿಜೆಪಿ  ಸರ್ಕಾರದ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಪಕ್ಷದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಮೂಲಕ ಜೆಡಿಎಸ್‌ ಪಕ್ಷವನ್ನು 2023ಕ್ಕೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಪ್ರಯತ್ನಿಸಬೇಕು ಎಂದು ವಿಧಾನಪರಿಷತ್ತು ಸದಸ್ಯ ಸಿ.ಎನ್‌. ಮಂಜೇಗೌಡ ಕರೆ ನೀಡಿದರು.

ನಗರದ ಜೆಡಿಎಸ್‌ (JDS)  ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು, ನಾವು ಪಕ್ಷವನ್ನು ಬೂತ್‌ ಮಟ್ಟದಲ್ಲಿ ಸಂಘಟಿಸಬೇಕು. ಜನರು ರಾಷ್ಟ್ರೀಯ ಪಕ್ಷಗಳಿಂದ (National Parties ) ದೂರ ಹೋಗುತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. 2023ಕ್ಕೆ ಕುಮಾರಸ್ವಾಮಿ ಅವರು ನೂರಕ್ಕೆ ನೂರರಷ್ಟುಮುಖ್ಯಮಂತ್ರಿಯಾಗುವುದು ಖಚಿತ ಎಂದರು.

ಜೆಡಿಎಸ್‌ ನಗರಾಧ್ಯಕ್ಷ ಕೆ.ಟಿ. ಚಲುವೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆರ್‌. ಲಿಂಗಪ್ಪ, ಅಬ್ದುಲ್ಲಾ, ಶಾಹಿದ್‌, ನಗರ ಪಾಲಿಕಾ ಮಾಜಿ ಸದಸ್ಯರಾದ ಕೆಂಪಣ್ಣ, ವಸಂತಕುಮಾರಿ, ಬಾಲು, ಜಯರಾಮು, ಮುಖಂಡರಾದ ಪ್ರಕಾಶ ಪ್ರಿಯದರ್ಶನ್‌, ಗಂಗಾಧರ್‌ ಗೌಡ, ಸಂತೋಷ್‌, ಮಂಜುನಾಥ್‌ ಬಾಬು, ರಮೇಶ್‌, ಕೃಷ್ಣ, ಎನ್‌.ಜಿ. ನಾಗರಾಜ್‌, ಕುಮಾರ್‌, ಮಹೇಶ್‌ ಮೊದಲಾದವರು ಇದ್ದರು.

ಶಾಸಕರ ವಿರುದ್ಧ ಬೀದಿಗಿಳಿದ ಜೆಡಿಎಸ್ ಕಾರ್ಯಕರ್ತರು 

 

ತುಮಕೂರು:  ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್‌ನನ್ನು ಶಾಸಕ ರಂಗನಾಥ್‌ರ ಹಿಂಬಾಲಕರು ಅಪಹರಿಸಿದ್ದಾರೆ ಎಂದು ಆರೋಪಿಸಿ, ಜೆಡಿಎಸ್‌ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು.

ಕುಣಿಗಲ್‌ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ತಾಲೂಕು ಅಧ್ಯಕ್ಷ ಬಿ.ಎನ್‌.ಜಗದೀಶ್‌ ನೇತೃತ್ವದಲ್ಲಿ ಸಮಾವೇಶಗೊಂಡ ಜೆಡಿಎಸ್‌ (JDS)  ಕಾರ್ಯಕರ್ತರು ತಹಸೀಲ್ದಾರ್‌ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎನ್‌.ಜಗದೀಶ್‌ ಮಾತನಾಡಿ, ತಾಲೂಕಿನಾದ್ಯಂತ ಅರಾಜಕತೆ ಸೃಷ್ಟಿಯಾಗುತ್ತಿದೆ. ಗ್ರಾಮ ಪಂಚಾಯಿತಿ ಸದಸ್ಯರಿಗೆ ರಕ್ಷಣೆ ಇಲ್ಲದಂತಾಗಿರುವಾಗ ಶ್ರೀಸಾಮಾನ್ಯರ ಬದುಕು ಹೇಗೆ ಎಂದು ಪ್ರಶ್ನಿಸಿದರು. ತಾಲೂಕಿನ ಜವಾಬ್ದಾರಿ ಹೊತ್ತ ಶಾಸಕರು(MLA)  ಅಪಹರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯಗಳು ಕಾಣುತ್ತಿವೆ. ಆದ್ದರಿಂದ ಶಾಸಕರ ನಡಿಗೆ ಸರಿಯಾದ ನಡಿಗೆ ಆಗಲಿ ಎಂದು ಸಲಹೆ ನೀಡಿದರು.

ಗ್ರಾಪಂ ಸದಸ್ಯ ಮಂಜುನಾಥ್‌ನನ್ನು ರಕ್ಷಣೆ ಮಾಡುವಂತೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಕೂಡ ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ. ಅಪಹರಣ ಮಾಡಿ ಆತನಿಂದ ಬಲವಂತದ ಹೇಳಿಕೆಗಳನ್ನು ಕೊಡಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ದೀಪು, ಪ್ರಕಾಶ್‌, ನಿಡಸಾಲೆ ಸತೀಶ್‌ ಸೇರಿದಂತೆ ಹಲವಾರು ಜೆಡಿಎಸ್‌ ಮುಖಂಡರು ಭಾಗವಹಿಸಿದ್ದರು.

ಏನದು ಕೇಸ್ : 

 ನೀವು ರೆಸಾರ್ಟ್ ರಾಜಕೀಯವನ್ನ ನೋಡಿರ್ತೀರಿ. ಆಪರೇಷನ್ ಕಮಲ, ಆಪರೇಷನ್ ಹಸ್ತದ ಬಗ್ಗೆ ಕೂಡ ಕೇಳಿರ್ತೀರಿ. ಇದೆಲ್ಲಾ ಡೆಲ್ಲಿ ರಾಜಕೀಯ.. ಆದ್ರೆ ಇಲ್ಲೊಂದು ಹಳ್ಳಿಯಲ್ಲಿ ಇವೆಲ್ಲವನ್ನ ಮೀರಿಸುವಂತಹ ರಾಜಕೀಯವೊಂದು ನಡೆದಿದೆ. ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಅಧಿಕಾರದ ಗದ್ದುಗೆ ಏರಲು ಏನೇನು ಕಸರತ್ತು ನಡೆಸುತ್ತಾರೆ ಅನ್ನೋದನ್ನ ನೀವೆಲ್ಲರೂ ನೋಡಿರ್ತೀರ. ಸಂಖ್ಯಾಬಲ ಹೆಚ್ಚಿಸಲು ಕೆಲವರನ್ನ ಹಣ ಬಲದಿಂದ ಕೊಂಡುಕೊಂಡ್ರೆ, ಇನ್ನೂ ಕೆಲವರನ್ನ ರೆಸಾರ್ಟ್ ನಲ್ಲಿ ಇಟ್ಟು ರಾಜಾತಿಥ್ಯ ನೀಡೋದನ್ನ ಕೂಡ ನೀವು ಟಿವಿಗಳಲ್ಲಿ ನೋಡಿರ್ತೀರಿ. ಆದ್ರೆ ಇಲ್ಲೊಂದು ಗ್ರಾ.ಪಂ ಚುನಾವಣೆ ಡೆಲ್ಲಿ ರಾಜಕೀಯವನ್ನ ಕೂಡ ಮೀರಿಸಿಬಿಟ್ಟಿದೆ. ಇಂಥದೊಂದು ಹೈ ವೋಲ್ಟೇಜ್ ಚುನಾವಣೆ ನಡೆದಿರೋದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ನಿಡಸಾಲೆ ಗ್ರಾ.ಪಂಯಲ್ಲಿ. ಇವತ್ತು ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿಗೆ ನಿರ್ಧರಿಸಲಾಗಿತ್ತು. ಅವಿಶ್ವಾಸ ಗೊತ್ತುವಳಿ ಬಳಿಕ ಗ್ರಾ.ಪಂ ಅಧ್ಯಕ್ಷರ ಚುನಾವಣೆ ನಡೆಯಬೇಕಿತ್ತು. ಆದ್ರೆ ಈ ಚುನಾವಣೆಗೆ ಒಂದು ದಿನ ಮುನ್ನವೇ ಜೆಡಿಎಸ್ ಬೆಂಬಲಿತ ಅಧ್ಯಕ್ಷ ಅಭ್ಯರ್ಥಿ ಮಂಜುನಾಥ್ ಎಂಬುವವರನ್ನ ಸೀನಿಮಿಯ ರೀತಿಯಲ್ಲಿ ಕಿಡ್ನಾಪ್ ಮಾಡಲಾಗಿದೆ. ಗ್ರಾ.ಪಂ ಸದಸ್ಯನನ್ನ ಕಿಡ್ನಾಪ್ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Latest Videos
Follow Us:
Download App:
  • android
  • ios