ಬೆಂಗಳೂರು(ಫೆ.16): ಮುಂಬರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಜ್ಜಾಗಲು ಮಾಚ್‌ರ್‍ ಮೊದಲ ವಾರದಲ್ಲಿ ಪಕ್ಷದ ಮಹಿಳಾ ಸಮಾವೇಶವನ್ನು ನಡೆಸಲು ಜೆಡಿಎಸ್‌ ತೀರ್ಮಾನಿಸಿದೆ.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಶನಿವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಘಟಕದ ಸಭೆಯಲ್ಲಿ ಪಾಲಿಕೆ ಚುನಾವಣೆಯ ಸಿದ್ಧತೆ, ಸಂಘಟನೆ ಕುರಿತು ಚರ್ಚಿಸಲಾಯಿತು.

ಈ ವರ್ಷ ವಿಜಯದಶಮಿಗೆ ಮಕ್ಕಳಿಗೆ ರಜೆ ಇಲ್ಲ..!

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಪಕ್ಷದ ಮಹಿಳಾ ಸಮಾವೇಶವನ್ನು ಮಾಚ್‌ರ್‍ ತಿಂಗಳ ಮೊದಲ ವಾರದಲ್ಲಿ ಅರಮನೆ ಮೈದಾನದಲ್ಲಿ ನಡೆಸಲಾಗುವುದು. ಬೆಂಗಳೂರು ನಗರ ಮಹಿಳಾ ಘಟಕ ಅಧ್ಯಕ್ಷೆ ರೂತ್‌ ಮನೋರಮಾ ಅಧ್ಯಕ್ಷತೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರೂತ್‌ ಮನೋರಮಾ ಅವರು ದೇಶ-ವಿದೇಶದಲ್ಲಿ ಸಾಮಾಜಿಕ ಕೆಲಸ ಮಾಡಿರುವ ಅನುಭವವನ್ನು ಹೊಂದಿದ್ದಾರೆ. ಬೆಂಗಳೂರು ನಗರದಲ್ಲಿ ಮಹಿಳಾ ಸಂಘಟನೆ ಮಾಡುವಲ್ಲಿ ನಿರತರಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾಚ್‌ರ್‍ನಲ್ಲಿ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾದ ಸಮಾವೇಶವಾಗಿದೆ. ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆ ಕುರಿತು ಕಾರ್ಯಕರ್ತರನ್ನು ಹುರಿದುಂಬಿಸಲು ಸಮಾವೇಶ ನಡೆಸಲಾಗುತ್ತಿದೆ. ರಾಜ್ಯ ಮಹಿಳಾ ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸುವುದಿಲ್ಲ. ಜಿಲ್ಲಾ ಕೇಂದ್ರದಲ್ಲಿ ನಡೆಸಲಾಗುವುದು. ಈ ಬಗ್ಗೆ ಚರ್ಚಿಸಿ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದರು.

ಬಿಬಿಎಂಪಿಯಿಂದ 4.15 ಕೋಟಿ ವರ್ಗ: ನಕಲಿ ಖಾತೆ ಯಾರದ್ದು..?

ಜೆಡಿಎಸ್‌ನ ಯುವ ಸಮಾವೇಶವನ್ನು ಸಹ ನಡೆಸಲಾಗುವುದು ಪಕ್ಷವನ್ನು ಸಂಘಟಿಸುವಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತೇನೆ, ಸುಮ್ಮನೆ ಕೂರುವುದಿಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷವನ್ನು ಬಲಗೊಳಿಸಲಾಗುವುದು ಎಂದು ಹೇಳಿದರು.

ಮಹಿಳಾ ಘಟಕ್ಕೆ ಶೀಘ್ರ ಹೊಸ ಅಧ್ಯಕ್ಷೆ

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್‌.ಪ್ರಸಾದ್‌ ಅವರು ಅನಾರೋಗ್ಯದ ಕಾರಣ ರಾಜ್ಯಾಧ್ಯಕ್ಷೆಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಶೀಘ್ರದಲ್ಲಿಯೇ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು. ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌, ಮಹಿಳಾ ಘಟಕದ ಅಧ್ಯಕ್ಷೆ ರೂತ್‌ ಮನೋರಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.