Asianet Suvarna News Asianet Suvarna News

ಕೊಡಗು ಮನೆ ಹಸ್ತಾಂತರದಲ್ಲಿ ಎಚ್‌ಡಿಕೆ ಕಡೆಗಣನೆ: ಜೆಡಿಎಸ್‌ ಪ್ರತಿಭಟನೆ

ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಗುರುವಾರ ಜಂಬೂರಿನಲ್ಲಿ ಸಚಿವರು ಆಗಮಿಸುವ ಸಂದರ್ಭ ಪ್ರತಿಭಟನೆ ನಡೆಸಿದರು.

jds supporters protest in madikeri for neglecting hd kumaraswamy in house handover programme
Author
Bangalore, First Published Jun 5, 2020, 1:36 PM IST

ಮಡಿಕೇರಿ(ಜೂ.05): ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಗುರುವಾರ ಜಂಬೂರಿನಲ್ಲಿ ಸಚಿವರು ಆಗಮಿಸುವ ಸಂದರ್ಭ ಪ್ರತಿಭಟನೆ ನಡೆಸಿದರು.

ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ 2018ನೇ ಸಾಲಿನಲ್ಲಿ ಜಿಲ್ಲೆಯ ನಿರಾಶ್ರೀತರಿಗೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮನೆಗಳನ್ನು ನಿರ್ಮಿಸಲು ಶ್ರಮಿಸಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಕನಿಷ್ಠ ಸೌಜನ್ಯಕ್ಕಾದರೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ.

ಕೊಡಗು ಮಹಾಮಳೆ ಸಂತ್ರಸ್ತರ ಮುಖದಲ್ಲಿ ಮಂದಹಾಸ: ಮನೆ ಹಸ್ತಾಂತರದ ಸಂಭ್ರಮದ ಕ್ಷಣ ಹೀಗಿತ್ತು

ಇದೊಂದು ಬಿಜೆಪಿ ನೇತೃತ್ವದ ಪ್ರಾಯೋಜಿತ ಕಾರ್ಯಕ್ರಮ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್‌ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ನಿರತ ಜೆಡಿಎಸ್‌ ಕಾರ್ಯಕರ್ತರನ್ನು ಪೊಲೀಸರು ಮನವೊಲಿಸಲು ಮುಂದಾದರು. ಆದರೂ ಜಗ್ಗದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ಸೇರಿದಂತೆ 59 ಮಂದಿಯನ್ನು ಪೊಲೀಸರು ಬಂ​ಧಿಸಿದರು.

Follow Us:
Download App:
  • android
  • ios