ದಳಕ್ಕೆ ವಿಜಯ ಒಲಿದು ಅಧಿಕಾರ ದೊರಕಲಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತ್ಯಧಿಕ ಸ್ಥಾನಗಳು ತಮ್ಮವಾಗಲಿವೆ ಎಂದರು.

ಬೇಲೂರು (ಏ.16): ಈ ಬಾರಿ ಪುರಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಪುರಸಭೆ ಅ​ಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

Add Asianetnews Kannada as a Preferred SourcegooglePreferred

ಪುರಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಚನ್ನಕೇಶವ ದೇವಾಲಯದಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ ದೇಗುಲದಿಂದ ಪುರಸಭೆಯವರೆಗೂ ಪಾದಯಾತ್ರೆ ಮಾಡುವ ಮೂಲಕ ಆಗಮಿಸಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳ ಜೊತೆ ನಾಮಪತ್ರ ಸಲ್ಲಿಸಿ ಅವರು ಮಾತನಾಡಿದರು.

ಈ ಬಾರಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೆ ಎಲ್ಲಾ ಜನಾಂಗದವರಿಗೂ ಸಾಮಾಜಿಕ ನ್ಯಾಯ ದೊರಕಿಸುವ ಉದ್ದೇಶದಿಂದ ಜಾತ್ಯತೀತದ ನಿಲುವು ಸಿದ್ಧಾಂತ ಇಟ್ಟುಕೊಂಡು ಪ್ರತಿಯೊಬ್ಬರಿಗೂ ಸಮಾನವಾಗಿ ಟಿಕೆಟ್‌ ಹಂಚಿಕೆ ಮಾಡಲಾಗಿದೆ. ಈ ಹಿಂದೆ ಪುರಸಭೆಯಲ್ಲಿ ನಮ್ಮ ಪಕ್ಷ ಅಧಿ​ಕಾರದಲ್ಲಿದ್ದಾಗ ಉತ್ತಮ ಆಡಳಿತ ನಡೆಸುವ ಮೂಲಕ ಶಾಸಕರ ನೇತೃತ್ವದಲ್ಲಿ ಸುಮಾರು .900 ಕೋಟಿ ಅನುದಾನ ತಂದು ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್ ...

ಈ ಬಾರಿ 23 ವಾರ್ಡ್‌ಗಳಲ್ಲಿ 22 ವಾರ್ಡ್‌ಗಳಿಗೆ ಎಲ್ಲಾ ವರ್ಗದವರಿಗೂ ಟಿಕೆಟ್‌ ಹಂಚಲಾಗಿದೆ. 18 ವಾರ್ಡ್‌ಗಳಲ್ಲಿ ಜೆಡಿಎಸ್‌ ಜಯಭೇರಿ ಬಾರಿಸುವ ಮೂಲಕ ಮತ್ತೆ ಪುರಸಭೆಯ ಅಧಿ​ಕಾರ ಹಿಡಿಯುವುದು ಶತಸಿದ್ಧ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ವಾರ್ಡ್‌ ಸಭೆಯಲ್ಲಿ ಹಾಗೂ ಕಾರ್ಯಕರ್ತರ ಒಮ್ಮತದ ನಿರ್ಣಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಭಸ್ಮೀಕರಣ ಸ್ಥಳಾಂತರ ಯೋಜನೆ ಚಾಲನೆ:

ಶಾಸಕ ಕೆ.ಎಸ್‌.ಲಿಂಗೇಶ್‌ ಮಾತನಾಡಿ, ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ 50 ಕೋಟಿ ರು. ವೆಚ್ಚದಲ್ಲಿ ವಿವಿಧ ಕಾಮಗಾರಿ ನಡೆಸಿದ್ದು, ಕುಡಿಯುವ ನೀರು, ರಸ್ತೆ, ಚರಂಡಿ, ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 24*7 ಕಾಲ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬಹುಮುಖ್ಯ ವಾಗಿ ಭಸ್ಮೀಕರಣ ಹೊಂಡವನ್ನು ಬೇರೆಡೆಗೆ ಸ್ಥಳಾಂತರಿಸಲು ಈಗಾಗಲೇ ಕಾರ್ಯ ಯೋಜನೆ ಮಾಡಲಾಗಿದೆ. ಇದರ ಜೊತೆಗೆ ಬಸ್‌ ನಿಲ್ದಾಣ ನವೀಕರಣ, ಮುಖ್ಯರಸ್ತೆ ಅಗಲೀಕರಣಕ್ಕೆ ಈಗಾಗಲೇ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅದ್ಯಕ್ಷ ತೊ.ಚ.ಅನಂತ ಸುಬ್ಬರಾಯ್‌, ಡಿಸಿಸಿ ಬ್ಯಾಂಕ್‌ ಮಾಜಿ ಉಪಾಧ್ಯಕ್ಷ ಎಂ.ಎ.ನಾಗರಾಜ್‌, ಮುಖಂಡರಾದ ಬಿ.ಡಿ.ಚಂದ್ರೇಗೌಡ, ಬಿ.ಸಿ.ಮಂಜುನಾಥ್‌, ಚೇತನ್‌ ಕುಮಾರ್‌, ಪ್ರಧಾನ ಕಾರ್ಯದರ್ಶಿ ಸಿ.ಎಚ್‌.ಮಹೇಶ್‌,ನಾಗೇಶ್‌, ದಿಲೀಪ್‌, ಶ್ರೀನಿ​ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.