Asianet Suvarna News Asianet Suvarna News

'ಮತ್ತೆ ಅಧಿಕಾರಕ್ಕೆ ತರುವ ಪ್ರಯತ್ನ : ಜೆಡಿಎಸ್ ಪಕ್ಷದ ಗೆಲುವು ಖಚಿತ '

  • ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ 6 ಜಿಪಂ, 16 ತಾಪಂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆಲುವು 
  • ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಚಿಕ್ಕಣ್ಣ ವಿಶ್ವಾಸ
JDS will win in taluk And Zp election says ex MLA chikkanna snr
Author
Bengaluru, First Published Aug 16, 2021, 10:29 AM IST
  • Facebook
  • Twitter
  • Whatsapp

ಸರಗೂರು (ಆ.16): ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ 6 ಜಿಪಂ, 16 ತಾಪಂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಚಿಕ್ಕಣ್ಣ ವಿಶ್ವಾಸ ವ್ಯಕ್ತಪಡಿಸಿದರು. 

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ನೂತನ ತಾಲೂಕು ಅಧ್ಯಕ್ಷ ಗೊಪಾಲಸ್ವಾಮಿ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ತಾಲೂಕು ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಸರಗೂರು ತಾಲೂಕಲ್ಲಿ ಜೆಡಿಎಸ್ ಅನ್ನು ತಳಮಟ್ಟದಿಂದ ಸಂಘಟಿಸಲು ಕ್ರಮ ವಹಿಸಲಾಗುವುದು ಎಂದರು. 

50 ಜನರ ಜೊತೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ ಮುಖಂಡ

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ ಎಂದರು. 

ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ ಮಾತನಾಡಿ ಸರಗೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಭದ್ರಪಡಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದ್ದು ಎಲ್ಲರೂ ಪಕ್ಷವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ತಾಲೂಕಿನಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲು ಕಾರಣವಾಗಬೇಕು. ಜಿಪಂ ತಾಪಂ  ಚುನಾವಣೆಗಳಲ್ಲಿ ಪಕ್ಷ ಅಭ್ಯರ್ಥಿಗಳ ಪರ ಹೋರಾಡಿ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಇದು ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು. 

ಈ ವೇಳೆ ವಿವಿಧ ಜೆಡಿಎಸ್ ಮುಖಂಡರು ಹಾಜರಿದ್ದರು. 

Follow Us:
Download App:
  • android
  • ios