ಭೇರ್ಯ (ಡಿ.09):  ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದು, ಶಾಸಕ ಸಾ.ರಾ. ಮಹೇಶ… ಅವರ ಕೈ ಬಲಪಡಿಸಲಿದೆ ಎಂದು ತಾಲೂಕು ಜೆಡಿಎಸ್‌ ವಕ್ತಾರ ಕೆ.ಎಲ್ ರಮೇಶ್‌ ವಿಶ್ವಾಸ ವ್ಯಕ್ತಪಡಿಸಿದರು.

ಸಾಲಿಗ್ರಾಮ ತಾಲೂಕಿನ ಜೆಡಿಎಸ್‌ ಅಧ್ಯಕ್ಷರಾಗಿ ಆಯ್ಕೆಯಾದ ಮೆಡಿಕlf ರಾಜಣ್ಣ ಅವರನ್ನು ಪಕ್ಷದ ವತಿಯಿಂದ ಅಭಿನಂದಿಸಿ ಅವರು ಮಾತನಾಡಿದರು.

ಸಾಲಿಗ್ರಾಮ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಪಂ ಸದಸ್ಯರನ್ನು ಆಯ್ಕೆ ಮಾಡಲು ಪ್ರತಿಯೊಂದು ಗ್ರಾಪಂಯ ಗ್ರಾಮಗಳಿಗೆ ಭೇಟಿ ನೀಡಿ ಜೆಡಿಎಸ್‌ ಕಾರ್ಯಕರ್ತರಿಗೆ ಶಾಸಕ ಸಾ.ರಾ. ಮಹೇಶ್‌ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆ ಯಾವುದೇ ಜಾತಿಭೇದವಿಲ್ಲದೆ ಪ್ರತಿಯೊಂದು ಕುಟುಂಬಕ್ಕೂ ಉಚಿತವಾಗಿ ಪಡಿತರ ಕಿಟ್‌ ವಿತರಿಸಿದನ್ನು ಮತದಾರರಿಗೆ ಮನವರಿಕೆ ಮಾಡಿಸಿ ಎಂದು ಸಲಹೆ ನೀಡಿದರು.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಅಂಗೀಕಾರ: ಜೆಡಿಎಸ್-ಬಿಜೆಪಿ ಮೈತ್ರಿಗೆ ನಾಂದಿ.

ಜೆಡಿಎಸ್‌ ಅಧ್ಯಕ್ಷ ಮೆಡಿಕಲ್ ರಾಜಣ್ಣ ಮಾತನಾಡಿ, ಶಾಸಕ ಸಾ.ರಾ. ಮಹೇಶ್‌ ಅವರು ನನ್ನ ಮೇಲಿನ ನಂಬಿಕೆಯಿಂದ ಜೆಡಿಎಸ್‌ ಅಧ್ಯಕ್ಷ ಸ್ಥಾನ ನೀಡಿದ್ದಾರೆ ನಾನು ಅವರಿಗೆ ಅಬಾರಿಯಾಗಿದ್ದೇನೆ ಪಕ್ಷ ಗುರುತಿಸಿ ನನಗೆ ಸ್ಥಾನ ನೀಡಿದೆ, ಯಾವುದೇ ಕಳಂಕ ಬಾರದೇ ಹಾಗೇ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ತಾಲೂಕಿನಲ್ಲಿ ಜೆಡಿಎಸ್‌ ಪಕ್ಷವನ್ನು ಮತ್ತಷ್ಟುಬಲಪಡಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಎಸ್‌.ಕೆ. ಮಧುಚಂದ್ರ, ಸೋಮು, ಕೆ.ಆರ್‌. ನಗರ ಜೆಡಿಎಸ್‌ ಅಧ್ಯಕ್ಷ ಮಹದೇವ್‌, ಭೂ ನ್ಯಾಯಮಂಡಳಿ ಮಾಜಿ ಸದಸ್ಯ ಎಚ್‌.ಪಿ. ಶಿವಣ್ಣ, ತಾಲೂಕು ಜೆಡಿಎಸ್‌ ಹಿಂದುಳಿದ ವರ್ಗಗಳ ಅಧ್ಯಕ್ಷ ಕೃಷ್ಣಶೆಟ್ಟಿ, ಗ್ರಾಪಂ ಮಾಜಿ ಅಧ್ಯಕ್ಷ ಎಸ್‌.ವಿ. ನಟರಾಜ…, ಎಸ್‌.ಆರ್‌. ಪ್ರಕಾಶ್‌, ಜೆಡಿಎಸ್‌ ಮುಖಂಡರಾದ ಪ್ರೇಮ್ ಕುಮಾರ್‌ ಜೈನ್‌, ಅಯಾಯ್ ಇದ್ದರು.