ಚನ್ನರಾಯಪಟ್ಟಣ (ಸೆ.30): ಚನ್ನರಾಯಪಟ್ಟಣ ತಾಲೂಕು ಪೂಮಡಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 11 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ 11 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. 

ನೂತನವಾಗಿ ಆಯ್ಕೆಯಾದ ಎಲ್ಲ ನಿರ್ದೇಶಕರು ತಮ್ಮ ಗೆಲುವಿಗೆ ಶ್ರಮಿಸಿದ ಶಾಸಕ ಸಿ.ಎನ್‌.ಬಾಲಕೃಷ್ಣ ಅವರನ್ನು ಸೋಮವಾರ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಹಾಸನ ಕ್ಷೇತ್ರವು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿದ್ದು ಗೌಡರ ಕ್ಷೇತ್ರದಲ್ಲಿ ಸದ್ಯ ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಾರೆ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ  ಇಲ್ಲಿನ ಚುನಾವಣೆಯಲ್ಲಿ ಜೆಡಿಎಸ್ ಭರ್ಜರಿ ಲಾಟಿ ಹೊಡೆದಿದೆ. ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದೆ. 

ಬಿಎಸ್‌ವೈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಕುಮಾರಸ್ವಾಮಿ....! .

ಇನ್ನು ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆ ತಯಾರಿ ಜೋರಾಗಿಯೇ ನಡೆಯುತ್ತಿದ್ದು, ಗೆಲುವಿನ ನಿರೀಕ್ಷೆಯಲ್ಲಿರುವ ಜೆಡಿಎಸ್ ಅಭ್ಯರ್ಥಿ ಆಯ್ಕೆಯ ಬಗ್ಗೆ ಗಹನವಾದ ಚರ್ಚೆಯನ್ನು ನಡೆಸುತ್ತಿದೆ.