ಜೆಡಿಎಸ್‌ಗೆ ಭರ್ಜರಿ ಜಯ ಒಲಿದಿದ್ದು ವಿಜಯ ಪತಾಕೆ ಹಾರಿಸಿದೆ. 14 ಸ್ಥಾನಗಳಲ್ಲಿ ಜಯಗಳಿಸಿದೆ.
ಕುಣಿಗಲ್ (ನ.25): ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷವನ್ನು ಮುಗಿಸಲು ಕುತಂತ್ರ ನಡೆಸಿದ್ದಾರೆ ಎಂದು ಮಾಜಿ ಸಚಿವ ಡಿ.ನಾಗರಾಜಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಟಿಎಪಿಸಿಎಂಎಸ್‌ನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 14 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರು ಆಯ್ಕೆಯಾದ ಹಿನ್ನೆಲೆ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಕುಣಿಗಲ್ ತಾಲೂಕಿನಲ್ಲಿ ಜೆಡಿಎಸ್ ಪಕ್ಷವು ಸದೃಢವಾಗಿದ್ದು ಯಾವುದೇ ಕಾರಣಕ್ಕೂ ಇಲ್ಲಿ ಕಾಂಗ್ರೆಸ್‌ನ ಒಳ ಒಪ್ಪಂದ ನಡೆಯುವುದಿಲ್ಲ, ಸ್ಥಳೀಯ ಸಹಕಾರ ಸಂಘದ ಟಿಎಪಿಸಿಎಂಎಸ್ ನ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲಿತರು ಆಯ್ಕೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಬಿಜೆಪಿಯತ್ತ ಕುಮಾರಸ್ವಾಮಿ ಒಲವು : ಅವಕಾಶವಾದಿ ಎಂದ್ರು ನಾಯಕ! ...
ಮುಂದಿನ ದಿನದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು, ಜೆಡಿಎಸ್‌ನ ಕಾರ್ಯಕರ್ತರು ಚುನಾವಣೆಗೆ ಯಾವುದೇ ಕಾರಣಕ್ಕೂ ದೃತಿಗೆಡದೆ ಸಜ್ಜಾಗಬೇಕೆಂದು ಹುರಿದುಂಬಿಸಿದರು.
ರಾಜ್ಯ ಯುವ ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಡಿ ನಾಗರಾಜಯ್ಯ ಮಾತನಾಡಿ ಟಿಎಪಿಸಿಎಂಎಸ್‌ನ 5 ನಿರ್ದೇಶಕ ಸ್ಥಾನಗಳಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರುಗಳು ಈ ಬಗ್ಗೆ ಚುನಾವಣೆ ನಡೆಯದಂತೆ ಕೋಟ್‌ಗೆ ಹೋಗಿ ಅಲ್ಲಿ ಛೀಮಾರಿ ಹಾಕಿಸಿಕೊಂಡು ಬಂದಿದ್ದಾರೆ ಎಂದರು.
ತಾಲೂಕಿನ ವ್ಯವಸಾಯೋತ್ಪನ್ನ ಮಾರುಕಟ್ಟೆನಿಯಮಿತ ಸಂಘದ ನಿರ್ದೇಶಕ ಸ್ಥಾನಗಳಿಗೆ ಇಂದು ಚುನಾವಣೆ ನಡೆದು ಡಿ ನಾಗರಾಜಯ್ಯ ಅವರ ಸಹೋದರ ಬಿ ಶಿವಣ್ಣ ನವರ ನೇತೃತ್ವದಲ್ಲಿ ಸ್ಪರ್ಧಿಸಿದ್ದ ಎಲ್ಲಾ 14 ಮಂದಿ ಆಯ್ಕೆಯಾಗಿದ್ದಾರೆ. ಇದರಲ್ಲಿ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ 5 ಸ್ಥಾನಕ್ಕೆ ಚುನಾವಣೆ ನಡೆದು ಎಲ್ಲಾ ಸ್ಥಾನಗಳು ಜೆಡಿಎಸ್ ಬೆಂಬಲಿತ ಸದಸ್ಯರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕೆ.ಎಲ್ ಹರೀಶ್, ತಾಪಂ ಅಧ್ಯಕ್ಷ ಹರೀಶ್ ನಾಯ್ಕ್ ಸೇರಿದಂತೆ ಇತರರು ಉಪಸ್ಥತರಿದ್ದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 25, 2020, 11:39 AM IST