ಗಿಗಾ ಫ್ಯಾಕ್ಟರಿ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ: ಸಚಿವ ಎಂ.ಬಿ.ಪಾಟೀಲ್‌

ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಐಬಿಸಿ ಕಂಪೆನಿ 390 ಕೋಟಿ ವೆಚ್ಚದಲ್ಲಿ ಗಿಗಾ ಫ್ಯಾಕ್ಟರಿ ಘಟಕ ಸ್ಥಾಪಿಸುತ್ತಿದ್ದು, ಇದರಲ್ಲಿ ಕಂಪನಿಯು ಮೊದಲ ಹಂತದಲ್ಲಿ 300 ಉದ್ಯೋಗಿಗಳಿಗೆ ಕೆಲಸ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. 

Job opportunities for locals in Giga Factory unit Says Minister MB Patil

ವಿಜಯಪುರ (ಜ.16): ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಐಬಿಸಿ ಕಂಪೆನಿ 390 ಕೋಟಿ ವೆಚ್ಚದಲ್ಲಿ ಗಿಗಾ ಫ್ಯಾಕ್ಟರಿ ಘಟಕ ಸ್ಥಾಪಿಸುತ್ತಿದ್ದು, ಇದರಲ್ಲಿ ಕಂಪನಿಯು ಮೊದಲ ಹಂತದಲ್ಲಿ 300 ಉದ್ಯೋಗಿಗಳಿಗೆ ಕೆಲಸ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. 

ಹೋಬಳಿಯ ಚನ್ನರಾಯಪಟ್ಟಣ ಸಮೀಪ ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಲೀಥಿಯಂ-ಅಯಾನ್ ಬ್ಯಾಟರಿ ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ(ಐಬಿಸಿ) ಗಿಗಾ ಫ್ಯಾಕ್ಟರಿ ಸ್ಥಳೀಯ ಘಟಕಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಇಲ್ಲಿ ಉತ್ಪಾದಿಸುವ ಬ್ಯಾಟರಿಗಳ ಪೈಕಿ ಶೇ. ೨೦ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕ ಕಾರ್ಯಾಚರಣೆ ಆರಂಭಿಸಲಿದೆ ಎಂದು ಹೇಳಿದರು.

ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ. ಸದ್ಯಕ್ಕೆ ಐಬಿಸಿ ಕಂಪನಿ ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಸಚಿವರು ವಿವರಿಸಿದರು.ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು. ಇದು ಭಾರತದಲ್ಲಿ ಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ವಿವರಿಸಿದರು.

ಬೆದರಿಕೆ ಪತ್ರ ಸಿ.ಟಿ.ರವಿ ಅವರೇ ಸೃಷ್ಟಿಸಿದ್ದು: ಸಚಿವ ಎಂ.ಬಿ.ಪಾಟೀಲ್ ಆರೋಪ

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿ ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯ ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. ಈ ವೇಳೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್‌ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios