Asianet Suvarna News Asianet Suvarna News

ಕಾಂಗ್ರೆಸ್‌ನಿಂದ ಎಲ್ಲ ಸಮುದಾಯಗಳಿಗೂ ನ್ಯಾಯ : ಧ್ರುವನಾರಾಯಣ್‌

ಕಾಂಗ್ರೆಸ್‌ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸುತ್ತಿದೆ. ಆದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನಂಬಿಕೆ ಇಲ್ಲದ ಕಾರಣ ಅಲ್ಪಸಂಖ್ಯಾತರಿಗೆ ಒಂದು ಟಿಕೆಟ್‌ ನೀಡಿಲ್ಲ, ಮಂತ್ರಿಯನ್ನೂ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಆರೋಪಿಸಿದರು.

Justice for all communities from Congress: Dhruvanarayan  snr
Author
First Published Mar 9, 2023, 5:42 AM IST

  ನಂಜನಗೂಡು :  ಕಾಂಗ್ರೆಸ್‌ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸುತ್ತಿದೆ. ಆದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನಂಬಿಕೆ ಇಲ್ಲದ ಕಾರಣ ಅಲ್ಪಸಂಖ್ಯಾತರಿಗೆ ಒಂದು ಟಿಕೆಟ್‌ ನೀಡಿಲ್ಲ, ಮಂತ್ರಿಯನ್ನೂ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಆರೋಪಿಸಿದರು.

ತಾಲೂಕಿನ ದೊಡ್ಡಕವಲಂದೆ, ಗಟ್ಟವಾಡಿ, ಗಟ್ಟವಾಡಿಪುರ, ನೇರಳೆ, ಹಂಪಾಪುರ, ಹಳೇಪುರ, ಹರಗನಪುರ ಗ್ರಾಮಗಳಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲಿ 6 ಅಲ್ಪಸಂಖ್ಯಾತ ಮಂತ್ರಿಗಳಿದ್ದರು, ಆದರೆ ಬಿಜೆಪಿಯಲ್ಲಿ ಒಬ್ಬ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್‌ ನೀಡಿಲ್ಲ, ಸಿದ್ದರಾಮಯ್ಯರವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 3,600 ಕೋಟಿ ಅನುದಾನ ಮೀಸಲಿಟ್ಟಿದ್ದರು. ಬಿಜೆಪಿ ಸರ್ಕಾರ ಅದನ್ನು 1,100 ಕೋಟಿಗೆ ಇಳಿಸಿದ್ದಾರೆ. ದಲಿತರ ಅನುದಾನವನ್ನೂ ಸಹ ಕಡಿಮೆ ಮಾಡಿದ್ದಾರೆ. ಕಳೆದ 4 ವರ್ಷದಲ್ಲಿ ಅವರು ಕೊಟ್ಟಆಶ್ವಾಸನೆ ಈಡೇರಿಸಿಲ್ಲ ಒಳ್ಳೆ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಬಿಜೆಪಿ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿ ಶೇ. 40 ಕಮಿಷನ್‌ ಎಂಬ ಬಿರುದು ಪಡೆದಿದ್ದಾರೆ. ಬಿಜೆಪಿ ಶಾಸಕ ಮಾಡಾಳು ಮನೆಯಲ್ಲಿ 8 ಕೋಟಿ ಲಂಚದ ಹಣ ದೊರಕಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಅವರಿಗೆ ಸರ್ಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್‌ ಬೆಲೆ ಏರಿಕೆಯಿಂದ ರಾಜ್ಯಾದ್ಯಂತ ಬದಲಾವಣೆ ಗಾಳಿ ಬೀಸುತ್ತಿದೆ. ಜೆಡಿಎಸ್‌ನ ಹಾಲಿ ಶಾಸಕರು, ಬಿಜೆಪಿ ಮಾಜಿ ಶಾಸಕರು ಎಲ್ಲರೂ ಕಾಂಗ್ರೆಸ್‌ ಸೇರ್ಪಡೆಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ, ಕಾರ್ಯಕರ್ತರು ಭಿನ್ನಾಭಿಪ್ರಾಯಬಿಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿ ಕಾಂಗ್ರೇಸ್‌ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡಿ ಗೆಲ್ಲಿಸಿ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ಆರ್‌. ಧ್ರುವನಾರಾಯಣ್‌ ಅವರೇ ಅಭ್ಯರ್ಥಿ, ಅದರಲ್ಲಿ ಯಾವುದೇ ಅನುಮಾನ ಬೇಡ, ಚುನಾವಣೆ ಕೆಲವೇ ದಿನಗಳಲ್ಲಿ ಘೋಷಣೆಯಾಗಲಿದ್ದು, ಕಾಂಗ್ರೆಸ್‌ ಸಾಧನೆ ಮತ್ತು ಘೋಷಣೆಗಳನ್ನು ಮನೆ ಮನೆಗೆ ತಿಳಿಸಿ ಪಕ್ಷ ಸಂಘಟನೆಗೊಳಿಸಿ ಎಂದರು.

ಕಾಂಗ್ರೆಸ್‌ನತ್ತ ಗೌಡರ ಚಿತ್ತ

ಮಂಡ್ಯ(ಮಾ.09): ಜಿಲ್ಲೆಯೊಳಗೆ ಮೊದಲ ಬಾರಿಗೆ ಕೆ.ಆರ್‌.ಪೇಟೆಯಲ್ಲಿ ಕಮಲ ಅರಳಿಸಿದ ಕ್ಷೇತ್ರದ ಶಾಸಕ ಕೆ.ಸಿ.ನಾರಾಯಣಗೌಡ ಮತ್ತೊಮ್ಮೆ ಪಕ್ಷಾಂತರಕ್ಕೆ ಸಿದ್ಧರಾಗಿದ್ದಾರೆ. ಬಿಎಸ್‌ಪಿ, ಜೆಡಿಎಸ್‌, ಬಿಜೆಪಿ ಪಕ್ಷಗಳ ಬಳಿಕ ಇದೀಗ ಕಾಂಗ್ರೆಸ್‌ ಸೇರುವ ತವಕದಲ್ಲಿದ್ದಾರೆ. ಮಾ.12ರಂದು ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಬಳಿಕ ಪಕ್ಷಾಂತರಕ್ಕೆ ವೇದಿಕೆ ರೆಡಿ ಮಾಡಿಕೊಂಡಿದ್ದಾರೆ.

ಭಾರತೀಯ ಜನತಾ ಪಕ್ಷದೊಂದಿಗೆ ಈಗಾಗಲೇ ಬಹುತೇಕ ಅಂತರ ಕಾಯ್ದುಕೊಂಡಿರುವ ಕೆ.ಸಿ.ನಾರಾಯಣಗೌಡರು ಜಿಲ್ಲೆಯವರೇ ಆಗಿ ಮೋದಿ ಕಾರ್ಯಕ್ರಮದ ಯಾವುದೇ ಪೂರ್ವಭಾವಿ ಸಭೆಗಳಲ್ಲೂ ಭಾಗವಹಿಸುತ್ತಿಲ್ಲ. ನಾರಾಯಣಗೌಡ ಪಕ್ಷ ಬಿಡುವುದನ್ನು ಖಚಿತ ಪಡಿಸಿಕೊಂಡಿರುವ ಬಿಜೆಪಿ ನಾಯಕರು ಅವರಿಗೆ ಯಾವುದೇ ಜವಾಬ್ದಾರಿ ವಹಿಸದೆ ದೂರವೇ ಇಟ್ಟಿದ್ದಾರೆ. ಮಂಗಳವಾರ ಕೆ.ಆರ್‌.ಪೇಟೆಯಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಗೆ ನಾರಾಯಣಗೌಡರು ಯಾವುದೇ ಪೂರ್ವಸಿದ್ಧತೆ ಮಾಡಿಕೊಂಡಿರಲಿಲ್ಲ. ಜನರನ್ನು ಸಂಘಟಿಸಿಕೊಂಡು ಯಾತ್ರೆಗೂ ಕರೆತಂದಿರಲಿಲ್ಲ. ಇದರಿಂದ ಬೇಸರಗೊಂಡ ಮಾಜಿ ಪ್ರಧಾನಿ ಡಿ.ವಿ. ಸದಾನಂದಗೌಡ ಮತ್ತಿತರ ಬಿಜೆಪಿ ನಾಯಕರು ಯಾತ್ರೆಯನ್ನು ಅರ್ಧಕ್ಕೆ ಕೈಬಿಟ್ಟು ಹೊರಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಇದಕ್ಕೂ ಮುನ್ನ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೇಶ್‌, ಸಿ.ಎಂ. ಶಂಕರ್‌, ಶ್ರೀಕಂಠನಾಯಕ, ತಾಪಂ ಮಾಜಿ ಅಧ್ಯಕ್ಷ ನಾಗೇಶ್‌ರಾಜ್‌, ಎಪಿಎಂಸಿ ಮಾಜಿ ಅಧ್ಯಕ್ಷ ಮುದ್ದುಮಾದಶೆಟ್ಟಿ, ಮುಖಂಡರಾದ ನಾಗರಾಜು, ಮಹದೇವು, ಎಂ. ರಾಜು, ಕುಳ್ಳಯ್ಯ, ನಾಗರಾಜಯ್ಯ, ಪರಶಿವಮೂರ್ತಿ, ನಾಗೇಶ್‌, ಶಿವಪ್ಪದೇವರು, ಪ್ರದೀಪ್‌, ಜಿಪಂ ಮಾಜಿ ಸದಸ್ಯರಾದ ಲತಾಸಿದ್ದಶೆಟ್ಟಿ, ಎನ್‌. ಮಹದೇವು, ಕಾಂಗ್ರೆಸ್‌ ಉಸ್ತುವಾರಿ ರವಿಕುಮಾರ್‌ ಇದ್ದರು.

Follow Us:
Download App:
  • android
  • ios