ಈ ಹಿಂದೆ ಇದ್ದ ಮಾಜಿ ಶಾಸಕ ಕೆ. ವೆಂಕಟೇಶ್‌ ಅವರು ನಾನು ಶಾಂತಿಧೂತ ಎಂದು ಹೇಳಿಕೊಂಡು ನನ್ನನ್ನು ಎರಡು ಬಾರಿ ಸೋಲುವಂತೆ ಮಾಡಿದರು ಎಂದು ಶಾಸಕ ಕೆ. ಮಹದೇವ್‌ ಹೇಳಿದರು.

 ಬೈಲಕುಪ್ಪೆ (ಡಿ. 10): ಈ ಹಿಂದೆ ಇದ್ದ ಮಾಜಿ ಶಾಸಕ ಕೆ. ವೆಂಕಟೇಶ್‌ ಅವರು ನಾನು ಶಾಂತಿಧೂತ ಎಂದು ಹೇಳಿಕೊಂಡು ನನ್ನನ್ನು ಎರಡು ಬಾರಿ ಸೋಲುವಂತೆ ಮಾಡಿದರು ಎಂದು ಶಾಸಕ ಕೆ. ಮಹದೇವ್‌ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ದೊಡ್ಡಕಮರವಳ್ಳಿ ಗ್ರಾಮದಲ್ಲಿ ಸುಮಾರು 40 ಲಕ್ಷದ ರಸ್ತೆ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಾನು ಶಾಸಕರಾದರೆ (MLA) ತಾಲೂಕಿನಲ್ಲಿರುವ ಮೂರು ಪೊಲೀಸ್‌ (Police) ಠಾಣೆಗಳು ಇದ್ದಿದ್ದು, 5 ಪೊಲೀಸ್‌ ಠಾಣೆಗಳು ಆಗುತ್ತವೆ ಎಂದು ಹೇಳುವುದರ ಜೊತೆಗೆ ತಾಲೂಕಿನ ಎಲ್ಲ ಕಡೆಗಳಲ್ಲೂ ರೌಡಿಸಂ ದಬಾರ್‌ರ್‍ ಹೆಚ್ಚಾಗುತ್ತದೆ. ಆದ್ದರಿಂದ ಅವನನ್ನು ಗೆಲ್ಲಿಸಬೇಡಿ ಎಂದು ನನ್ನ ಬಗ್ಗೆ ಅಪಪ್ರಚಾರ ಹೇಳುವುದರೊಂದಿಗೆ ನನ್ನನ್ನು ಎರಡು ಬಾರಿ ಸೋಲಿಸಿದರು.

ಆದರೆ ನನ್ನ ಪ್ರಜ್ಞಾವಂತ ಕಾರ್ಯಕರ್ತರು ನನ್ನ ಮೇಲೆ ನಂಬಿಕೆ ಇಟ್ಟು 2018ರ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಕಷ್ಟಪಟ್ಟು ಗೆಲ್ಲಿಸಿದರು, ಆದರೆ ನಾನು ಗೆದ್ದ ಬಂದ ಮೇಲೆ ಎರಡು ವರ್ಷಗಳ ಕಾಲ ಕೊರೋನಾ, ಒಂದು ವರ್ಷಗಳ ಕಾಲ, ಪ್ರಕೃತಿ ವಿಕೋಪಕ್ಕೆ ದೇಶವೇ ತುತ್ತಾಗಿದ್ದು, ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ, ಬಾಕಿ ಉಳಿದಿದ್ದ ಎರಡು ವರ್ಷದಲ್ಲಿ ನಮ್ಮ ಸರ್ಕಾರ ಇಲ್ಲದಿದ್ದರೂ, ಅವರಿವರ ಸಚಿವರ ಕೈ ಕಾಲು ಕಟ್ಟಿತಾಲೂಕಿಗೆ ಅನುದಾನವನ್ನು ತಂದು ಜಾತಿ ಭೇದವನ್ನು ಮರೆತು ನಾನು ಪಿರಿಯಾಪಟ್ಟಣ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಸರಾಸರಿ ಒಂದು ಕೋಟಿಯಂತೆ ಅನುದಾನವನ್ನು ಸರಿ ಸಮಾನವಾದ ರೀತಿಯಲ್ಲಿ ಅಭಿವೃದ್ಧಿಯನ್ನು ಮಾಡಿದ್ದೇನೆ. ತಾಲೂಕಿಗೆ ಒಬ್ಬ ಸೇವಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

 ಕಾಂಗ್ರೆಸ್‌ ಟಿಕೆಟ್ ಕಾದಾಟ

ಮಂಜುನಾಥ ಕೆ.ಎಂ

ಬಳ್ಳಾರಿ(ಡಿ.10): 1999ರಲ್ಲಿ ಸೋನಿಯಾ ಗಾಂಧಿ ಹಾಗೂ ಸುಷ್ಮಾ ಸ್ವರಾಜ್‌ ನಡುವಿನ ಸ್ಪರ್ಧೆಯಿಂದಾಗಿ ರಾಷ್ಟ್ರದ ಗಮನ ಸೆಳೆದಿದ್ದ ಬಳ್ಳಾರಿ ಜಿಲ್ಲೆ ಗಣಿದಣಿಗಳ ರಾಜಕಾರಣಕ್ಕೆ ಹೆಸರುವಾಸಿ. ಒಂದು ಕಾಲದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗುತ್ತಿದ್ದ ಬಳ್ಳಾರಿಯಲ್ಲಿ ಜೆಡಿಎಸ್‌ ನಿಧಾನವಾಗಿ ಮೂಲೆಗೆ ಸರಿದು ಅದರ ಜಾಗವನ್ನು ಬಿಜೆಪಿ ಆಕ್ರಮಿಸಿಕೊಂಡಿದೆ.

Assembly election: ಪಿಟಿಪಿ ಹ್ಯಾಟ್ರಿಕ್‌ ಕನಸಿಗೆ ಬ್ರೇಕ್‌ ಹಾಕುವದೇ ಕಮಲ?

ಜಿಲ್ಲೆಯಲ್ಲಿ ಜೆಡಿಎಸ್‌ ಸಂಘಟನಾತ್ಮಕವಾಗಿ ಸೊರಗಿದೆ. ಗಣಿ ಧಣಿ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಿಂದಾಗಿ ಜಿಲ್ಲೆಯಲ್ಲೀಗ ಬಿಜೆಪಿ ಸಂಘಟನಾತ್ಮಕವಾಗಿ ಬಲಿಷ್ಠವಾಗಿದೆ. ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಬಳ್ಳಾರಿ ನಗರ ಹೊರತುಪಡಿಸಿ ಉಳಿದವು ಪರಿಶಿಷ್ಟಪಂಗಡಕ್ಕೆ ಮೀಸಲಾಗಿವೆ. ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದು ಶಾಸಕರಾಗಿದ್ದಾರೆ. ಬಿಜೆಪಿಯಲ್ಲಿ ಸಚಿವ ಬಿ. ಶ್ರೀರಾಮುಲು, ಶಾಸಕ ಜಿ. ಸೋಮಶೇಖರ ರೆಡ್ಡಿ ವರ್ಚಸ್ಸಿನ ನಾಯಕರು ಎನಿಸಿಕೊಂಡಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಎಂಎಲ್‌ಸಿ ಕೆ.ಸಿ.ಕೊಂಡಯ್ಯ, ಮಾಜಿ ಸಚಿವ ಎಂ.ದಿವಾಕರಬಾಬು, ಗ್ರಾಮೀಣ ಶಾಸಕ ನಾಗೇಂದ್ರ ಪ್ರಮುಖ ರಾಜಕೀಯ ನಾಯಕರು. ದಲಿತ, ವಾಲ್ಮೀಕಿ, ಲಿಂಗಾಯತ ಹಾಗೂ ಕುರುಬ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ದಲಿತ ಮತಗಳು ನಿರ್ಣಾಯಕ ಎನಿಸಿವೆ.

ಜನಾರ್ಧನ ರೆಡ್ಡಿ ರಾಜಕೀಯ ಎಂಟ್ರಿಗೆ ಭಾರಿ ಮುನ್ನಡೆ: 4 ಕೋರ್ಟ್ ಕೇಸ್‌ ರದ್ದು

ಬಳ್ಳಾರಿ ನಗರ ಕ್ಷೇತ್ರ: ಕಾಂಗ್ರೆಸ್‌ನಲ್ಲಿ ಟಿಕೆಟ್‌ ಪೈಪೋಟಿ

ಗಣಿದಣಿ ಜನಾರ್ದನ ರೆಡ್ಡಿ ಅವರ ಸೋದರ, ಬಿಜೆಪಿಯ ಜಿ.ಸೋಮಶೇಖರ ರೆಡ್ಡಿ ಬಳ್ಳಾರಿ ನಗರ ಕ್ಷೇತ್ರದ ಹಾಲಿ ಶಾಸಕರು. ಈ ಬಾರಿಯ ಚುನಾವಣೆಯಲ್ಲಿ ಈವರೆಗೆ ಸೋಮಶೇಖರ ರೆಡ್ಡಿ ಹೊರತುಪಡಿಸಿ ಬಿಜೆಪಿಯಲ್ಲಿ ಬೇರಿನ್ಯಾವ ಆಕಾಂಕ್ಷಿಗಳ ಹೆಸರೂ ಕೇಳಿ ಬರುತ್ತಿಲ್ಲ. ಹೀಗಾಗಿ ಸೋಮಶೇಖರ ರೆಡ್ಡಿ ಅವರೇ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ. ಆದರೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ಪುತ್ರ ಭರತ್‌ ರೆಡ್ಡಿ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪನವರ ಪುತ್ರ ಅಲ್ಲಂ ಪ್ರಶಾಂತ್‌, ಡಿ.ಕೆ.ಶಿವಕುಮಾರ್‌ ಆಪ್ತ ಜೆ.ಎಸ್‌.ಆಂಜಿನೇಯಲು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಹ್ಮದ್‌ ರಫೀಕ್‌, ಉದ್ಯಮಿ ಸುನೀಲ್‌ ರಾವೂರ್‌ ಸೇರಿದಂತೆ 15ಕ್ಕೂ ಹೆಚ್ಚು ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಜೆಡಿಎಸ್‌ನಿಂದ ಈವರೆಗೆ ಯಾವುದೇ ಹೆಸರು ಹೊರಬಿದ್ದಿಲ್ಲ. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ನೋಡಿಕೊಂಡು ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆ ಇದೆ.