ಬೆಂಗಳೂರು(ಮಾ.01): ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ತಪಾಸಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ.

ಪ್ರತಿ ನಿತ್ಯ ಸಾವಿರಾರು ಮಂದಿ ವಿದೇಶಿಗರು ಹಾಗೂ ವಿದೇಶಗಳಿಂದ ಬರುವ ಭಾರತೀಯರು ವಿಮಾನ ನಿಲ್ದಾಣಕ್ಕೆ ಬರುವುದರಿಂದ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಂತೆಯೇ ವಿಮಾನ ನಿಲ್ದಾಣದಲ್ಲಿ ತಪಾಸಣೆಗಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಷೇರುಪೇಟೆ ಮೇಲೆ ಮಾರಕ ಕೊರೋನಾ ದಾಳಿ

ಕೊರೋನಾ ವೈರಸ್‌ ಕುರಿತಾಗಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ಸರ್ಕಾರ ಕೂಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್‌ ಪರಿಶೀಲನೆ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವದ ಶೇ.70ರಷ್ಟು ಜನರಿಗೆ ಕೊರೋನಾ ಭೀತಿ : ಹೊರಬಿತ್ತು ಮತ್ತೊಂದು ಆತಂಕದ ವಿಚಾರ