ತುಮಕೂರು (ಅ.04) : ಹೊರಗಿನವರಿಗೆ ಟಿಕೆಟ್‌ ನೀಡಿದರೆ ನಾವು ಬೇರೆ ತೀರ್ಮಾನ ಕೈಗೊಳ್ಳುತ್ತೇವೆಂದು ಬಿಜೆಪಿ ಮುಖಂಡ ಬಿ.ಕೆ. ಮಂಜುನಾಥ್‌ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ತಮ್ಮ ಸಮುದಾಯದವರಿಗೆ ಟಿಕೆಟ್‌ ನೀಡುವಂತೆ ಕಾಡುಗೊಲ್ಲರು ಪಟ್ಟು ಹಿಡಿದಿದ್ದಾರೆ.

ಒಂದು ವೇಳೆ ನಮ್ಮ ಸಮುದಾಯದವರಿಗೆ ಟಿಕೆಟ್‌ ನಿರಾಕರಿಸಿ ಬೇರೆಯವರಿಗೆ ಮಣೆ ಹಾಕಿದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯನ್ನು ಶಿರಾ ತಾಲೂಕು ತೊಗರಿಗುಂಟೆ ಗೊಲ್ಲರಹಟ್ಟಿಗ್ರಾಮಸ್ಥರು ನೀಡಿದ್ದಾರೆ.

RR ನಗರ ಉಪಕದನ: ಕುತೂಹಲ ಮೂಡಿಸಿದ ಡಿಕೆಶಿ-ಕುಸುಮಾ ಭೇಟಿ, ಯಾರಿಗೆ ಸಿಗಲಿದೆ ಕೈ ಟಿಕೆಟ್‌? ..

ಕ್ಷೇತ್ರದಲ್ಲಿ 40 ಸಾವಿರಕ್ಕೂ ಹೆಚ್ಚು ಕಾಡುಗೊಲ್ಲ ಮತದಾರರಿದ್ದಾರೆ. ಟಿಕೆಟ್‌ ನೀಡಿದರೆ ಎಲ್ಲರೂ ಒಟ್ಟಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ.

ನಮ್ಮ ಸುಮುದಾಯದ ವಿದ್ಯಾವಂತ ಡಾ.ಶಿವಕುಮಾರ್‌ ಇದ್ದಾರೆ. ಅವರಿಗೆ ಟಿಕೆಟ್‌ ನೀಡಿದರೂ ನಾವೆಲ್ಲ ಸೇರಿ ಗೆಲ್ಲಿಸುತ್ತೇವೆ. ಬೇರೆ ಯಾರಿಗೇ ಟಿಕೆಟ್‌ ನೀಡಿದರೂ ಅವರು ಗೆಲ್ಲುವುದಕ್ಕೆ ಆಗುವುದಿಲ್ಲ ಎಂಬ ಸಂದೇಶವನ್ನು ಕಾಡುಗೊಲ್ಲ ಸಮುದಾಯವರು ಕಳಿಸಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.