Asianet Suvarna News Asianet Suvarna News

Gandhi Jayanti: ಪೊರಕೆ ಹಿಡಿದು ಕಸಗೂಡಿಸಿದ ಕಲಬುರಗಿ ಜಿ.ಪಂ ಸಿಇಒ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನದ ಅಂಗವಾಗಿ ಕಲಬುರಗಿ ಜಿಪಂ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಮೂಲಕ ಗಾಂಧಿ ಜಯಂತಿ ಆಚರಣೆ ಅರ್ಥಪೂರ್ಣವಾಗಿಸಿದ್ದಾರೆ.

Kalaburagi CEO He took a broom and cleaned rav
Author
First Published Oct 2, 2022, 2:22 PM IST

ಕಲಬುರಗಿ,(ಅ.2) : ಇತ್ತೀಚೆಗೆ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಪ್ರಸನ್ನ ಕಸದ ವಾಹನ ಚಲಾಯಿಸಿ ಬಡಗಬೆಟ್ಟು ಗ್ರಾ.ಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಸ ವಿಲೇವಾರಿ ಮಾಡುವ ಮೂಲಕ ಹಸಿ ಕಸ, ಒಣ ಕಸ ತ್ಯಾಜ್ಯದ ಕುರಿತು ಅರಿವು ಮೂಡಿಸುವ ಕೆಲಸ ಮಾಡುವ ಮೂಲಕ ಸುದ್ದಿಯಾಗಿದ್ದರು. ಇದೀಗ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನದ ಅಂಗವಾಗಿ ಕಲಬುರಗಿ ಜಿಪಂ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಮೂಲಕ ಗಾಂಧಿ ಜಯಂತಿ ಆಚರಣೆ ಅರ್ಥಪೂರ್ಣವಾಗಿಸಿದ್ದಾರೆ.

ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಜಗದೇವಪ್ಪ, ಮುಖ್ಯ ಲೆಕ್ಕಾಧಿಕಾರಿ ಕು.ಗಾಯತ್ರಿ, ಸಹಾಯಕ ಕಾರ್ಯದರ್ಶಿ ಪ್ರಭಾಕರ ಗೊಬ್ಬೂರ, ಲೆಕ್ಕಾಧಿಕಾರಿ ಪವನ್, ವ್ಯವಸ್ಥಾಪಕ ಮಲ್ಲಿಕಾರ್ಜುನ, ಎಸ್.ಬಿ.ಎಂ ಜಿಲ್ಲಾ ಸಂಯೋಜಕಿ ಗುರುಬಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ನಂತರ ಕಚೇರಿಯಲ್ಲಿ ವಿಶ್ವಶಾಂತಿಯ ದೂತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಪೂರ್ವಕ ನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ
ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ತ್ಯಜಿಸುವ ಕುರಿತಂತೆ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

Gandhi Jayanti 2022: ಜಗತ್ತಿಗೇ ಶಕ್ತಿ ತುಂಬಿದ ಗಾಂಧಿ ಆದರ್ಶಗಳು: ಸಚಿವ ಅಶ್ವತ್ಥ್‌

ಇಂದು ಕುಂದುಕೊರತೆ ಸಭೆ

ಕಲಬುರಗಿ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆಯ್ಕೆ ಸಮಿತಿಯ ಅಧ್ಯಕ್ಷ ಕೆ. ಅನ್ವರ ಬಾಷಾ ಅವರು ಬೆಂಗಳೂರಿನಿಂದ ರಸ್ತೆ ಮೂಲಕ ಅಕ್ಟೋಬರ್‌ 2 ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಅಂದು ಸಂಜೆ 4 ಗಂಟೆಗೆ ಕಲಬುರಗಿ ನಗರದ ಐವಾನ್‌ ಶಾಹಿ ಅತಿಥಿ ಗೃಹದ ಸಭಾಂಗಣದಲ್ಲಿ ವಕ್ಫ್ ಸಂಸ್ಥೆಗಳ ಮುತ್ತವಲ್ಲಿಗಳು, ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

 ಮಾಂಸ ಮಾರಾಟ ನಿಷೇಧ

ಕಲಬುರಗಿ: ಗಾಂಧಿ ಜಯಂತಿ ಇರುವ ಪ್ರಯುಕ್ತ ಅಕ್ಟೋಬರ್‌ 02 ರಂದು ನಗರದಲ್ಲಿರುವ ಎಲ್ಲಾ ಕಸಾಯಿ ಖಾನೆ ಮತ್ತು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಎಲ್ಲಾ ಕಸಾಯಿ ಖಾನೆ ಹಾಗೂ ಮಾಂಸ ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಒಂದು ವೇಳೆ ಈ ಆದೇಶ ಉಲ್ಲಂಘಿಸಿದಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಗಾಂಧಿ ಜಯಂತಿಯಂದು ಟ್ವಿಟರ್‌ನಲ್ಲಿ ಟ್ರೆಂಡ್‌ ಆಯ್ತು 'ಗೋಡ್ಸೆ ಜಿಂದಾಬಾದ್': ವರುಣ್ ಗಾಂಧಿ ಕಿಡಿ!

Follow Us:
Download App:
  • android
  • ios