Asianet Suvarna News Asianet Suvarna News

ಸಾಹಿತ್ಯ ಲೋಕ ಅಗಲಿದ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ

* ಹಿರಿಯ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಇನ್ನಿಲ್ಲ
* ಕೊರೋನಾಕ್ಕೆ ಸಿದ್ದಲಿಂಗಯ್ಯ ಬಲಿ
* ಒಂದು ತಿಂಗಳಿನಿಂದ ಸಮಸ್ಯೆ ಅನುಭವಿಸುತ್ತಿದ್ದರು

Kannada Poet dr Siddalingaiah succumbs to corona mah
Author
Bengaluru, First Published Jun 11, 2021, 6:12 PM IST | Last Updated Jun 12, 2021, 4:04 PM IST

ಬೆಂಗಳೂರು(ಜೂ. 11) ಕೊರೋನಾ ಅಟ್ಟಹಾಸಕ್ಕೆ ಕೊನೆ ಇಲ್ಲ.  ಹಿರಿಯ ಸಾಹಿತಿ,  ಕವಿ ಡಾ. ಸಿದ್ದಲಿಂಗಯ್ಯ ಅವರನ್ನು ಕೊರೋನಾ ಬಲಿಪಡೆದಿದೆ. 67 ವರ್ಷ ವಯಸ್ಸಿನ ಡಾ ಸಿದ್ದಲಿಂಗಯ್ಯ ಕೊರೋನಾ ಕಾರಣಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಹಿರಿಯ ಸಾಹಿತಿಯ ಸಾಧನೆಗಳನ್ನು ಕೊಂಡಾಡಿರುವ  ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅಂತಿಮ ದರ್ಶನ;  ಶನಿವಾರ ಬೆಳಗ್ಗೆ  8 ರಿಂದ 10 ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಬೆಂಗಳೂರು ಯೂನಿವರ್ಸಿಟಿ ಅಂಬೇಡ್ಕರ್ ಅಧ್ಯಯನ ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಕಲಾ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ  ಗೌರವ ಸಲ್ಲಿಸಲಾಗುವುದು.

ಬೌದ್ಧ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು  ಸಿದ್ದಲಿಂಗಯ್ಯ ಪುತ್ರಿ ಡಾ. ಮಾನಸ ತಿಳಿಸಿದ್ದಾರೆ."

ಬೆಡ್ ಸಿಗದೆ ಪರದಾಡಿದ್ದ ಹಿರಿಯ ಕವಿ

ಕಳೆದ ತಿಂಗಳು ಬೆಡ್ ಗಾಗಿ ಸಿದ್ದಲಿಂಗಯ್ಯ ಪರದಾಡಿದ್ದು ವರದಿಯಾಗಿತ್ತು.  ರಾಜ್ಯೋತ್ಸವ ಪ್ರಶಸ್ತಿ, ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು. 

ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು ವಿದ್ಯಾರ್ಥಿ ದೆಸೆಯಲ್ಲಿಯೇ ಭಾಷಣಕಾರರಾಗಿ ಗುರುತಿಸಿಕೊಂಡಿದ್ದರು. ಡಾ. ಅಂಬೇಡ್ಕರ್, ಪೆರಿಯಾರ್ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು

ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. 2014 ರಲ್ಲಿ ಶ್ರವಣಬೆಳಗೊಳದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು

ಅವರ ಪತ್ನಿಗೂ ಕೊರೊನಾ ಸೋಂಕು ತಗುಲಿತ್ತು, ಈಗ ಚೇತರಿಸಿಕೊಂಡಿದ್ದಾರೆ, 1975ರಲ್ಲಿ ಅವರ ಹೊಲೆಮಾದಿಗ ಹಾಡು, ಕವನ ಸಂಕಲನ ಪ್ರಕಟಗೊಂಡಿತು, ಬಳಿಕ ಸಾವಿರಾರು ನದಿಗಳು, ಕಪ್ಪುಕಾಡಿನ ಹಾಡು, ಮೆರವಣಿಗೆ, ನನ್ನ ಜನಗಳು ಮತ್ತು ಇತರೆ ಕವಿತೆಗಳು, ಅಲ್ಲೆಂಕುಂತವರು ಮುಂತಾದ ಕವನ ಸಂಕಲನದಿಂದ ಸಾಹಿತ್ಯ ಲೋಕದಲ್ಲಿ ಅಚ್ಚಳಿಯದ ಸಾಧನೆ ಮಾಡಿದರು. 

ಬಾ ನಲ್ಲೆ ಮಧುಚಂದ್ರಕೆ  ಚಿತ್ರದ  'ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ ಸುಳಿದಾಡಬೇಡ ಗೆಳತಿ' ಹಾಡು ಸಿದ್ದಲಿಂಗಯ್ಯ ವಿರಚಿತ ಗೀತೆ. ಇಂದಿಗೂ ಜನಮಾನಸದಲ್ಲಿ ಉಳಿದುಕೊಂಡಿದೆ. ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. 

ಪ್ರಾಧ್ಯಾಪಕ, ಕವಿ, ಹೋರಾಟಗಾರ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ರಾಜ್ಯದಲ್ಲಿ ದಲಿತ ಚಳವಳಿಯ ಆದ್ವರ್ಯು ಹಾಗೂ ದಲಿತ ಸಾಹಿತ್ಯದ ಮೇರು ಆಗಿದ್ದ ಕವಿ ಸಿದ್ದಲಿಂಗಯ್ಯ ಅವರ ನಿಧನ ಕನ್ನಡ ಸಾರಸ್ವತ ಲೋಕಕ್ಕಾದ ಬಹುದೊಡ್ಡ ನಷ್ಟ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶೋಕ ವ್ಯಕ್ತಪಡಿಸಿದ್ದಾರೆ. 

ಸಿದ್ದಲಿಂಗಯ್ಯ ಅವರು ಕನ್ನಡದ ಅಗ್ರ ಲೇಖಕರಲ್ಲೊಬ್ಬರು. 'ದಲಿತ ಕವಿ' ಎಂದೇ ಪ್ರಸಿದ್ಧರು. ಸಾಮಾಜಿಕ ಸಮಾನತೆಯ ಆಶಯದೊಂದಿಗೆ ಅವರು ರಚಿಸಿದ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಆಧುನಿಕ ಸಾಹಿತ್ಯದಲ್ಲಿ ಅತ್ಯುನ್ನತ ಸ್ಥಾನ ಹೊಂದಿವೆ ಎಂದು ಡಿಸಿಎಂ ಗುಣಗಾನ ಮಾಡಿದ್ದಾರೆ. 

ದಲಿತ ಕವಿ ಎಂದೇ ಪ್ರಸಿದ್ಧಿ ಪಡೆದಿದ್ದ ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರು ನಮ್ಮನ್ನು ಅಗಲಿರುವುದು ಅಪಾರ ದುಃಖವನ್ನುಂಟು ಮಾಡಿದೆ. ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಯ ಕಿಚ್ಚು ಅವರ ಕಾವ್ಯ ಸಾಹಿತ್ಯಗಳಲ್ಲಿ ಕಾಣುತ್ತಿತ್ತು. ಅವರೊಂದು ಅದ್ಭುತ ಕವಿಯಾಗಿದ್ದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು. ಅವರ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಪ್ರಾರ್ಥಿಸಿದ್ದಾರೆ. 

ದಲಿತ ಕವಿ ಎಂದೇ ಖ್ಯಾತರಾಗಿದ್ದ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

'ಸಿದ್ದಲಿಂಗಯ್ಯ ಅವರ ಅಗಲಿಕೆ ಸುದ್ದಿ ಬಹಳ ನೋವು ತಂದಿದೆ. ದಲಿತ ಹೋರಾಟ, ಸಾಮಾಜಿಕ ಸಮಾನತೆಗಾಗಿ ಸಾಹಿತ್ಯದ ಮೂಲಕ ಹೋರಾಟ ಆರಂಭಿಸಿದ ಮಹಾನ್ ಸಾಹಿತಿ ಸಿದ್ದಲಿಂಗಯ್ಯ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಆತ್ಮಕಥನ, ಸಂಶೋಧನೆ ಪ್ರಾಕಾರಗಳಲ್ಲಿ ತಮ್ಮ ಸಾಹಿತ್ಯವನ್ನು ರಚಿಸಿ ಹೋರಾಟ ಮಾಡಿದ್ದರು. ಜನರಲ್ಲಿ ಜಾಗೃತಿ ಮೂಡಿಸಿದ್ದರು.

Kannada Poet dr Siddalingaiah succumbs to corona mah

ಅಧ್ಯಾಪಕರು, ಕವಿಗಳು, ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿದ್ದಲಿಂಗಯ್ಯ ಅವರ ಕೊಡುಗೆ ಅಪಾರ ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ. 

ಅವರ ಸಾಹಿತ್ಯ ಕ್ಷೇತ್ರದ ಅಪಾರ ಕೊಡುಗೆಗೆ ಹತ್ತು ಹಲವು ಪ್ರಶಸ್ತಿಗಳು ಸಂದಿವೆ. ಅವರ ಅಗಲಿಕೆ ದಲಿತ ಹೋರಾಟ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಸಿದ್ದಲಿಂಗಯ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ' ಎಂದು ಶಿವಕುಮಾರ್ ಪ್ರಾರ್ಥಿಸಿದ್ದಾರೆ. 

ಡಾ. ಸಿದ್ದಲಿಂಗಯ್ಯನವರ ಗೌರವಾರ್ಥವಾಗಿ ಜ್ಞಾನಭಾರತಿಯ ಬಳಿ ಸ್ಮಾರಕವನ್ನು ಸ್ಥಾಪಿಸಬೇಕು.  ಮರಣೋತ್ತರವಾಗಿ ‌ಅವರನ್ನು ರಾಷ್ಟ್ರಕವಿ ಎಂದು ಘೋಷಿಸಿ ಅವರ ಸೇವೆಯನ್ನು ಗೌರವಿಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Kannada Poet dr Siddalingaiah succumbs to corona mah

ಸಿದ್ದಲಿಂಗಯ್ಯರವರನ್ನು ಕನ್ನಡಪ್ರಭ-ಸುವರ್ಣನ್ಯೂಸ್‌ ಪ್ರಧಾನ ಸಂಪಾದಕ ರವಿ ಹೆಗಡೆ ಸ್ಮರಿಸಿಕೊಂಡದ್ದು ಹೀಗೆ...

"

 

Latest Videos
Follow Us:
Download App:
  • android
  • ios