Asianet Suvarna News Asianet Suvarna News

ಕನ್ನಡ ಸಾಹಿತ್ಯ ಸಮ್ಮೇಳನ: ಸಾಮರಸ್ಯದ ಭಾವ-ಕನ್ನಡದ ಜೀವ ಸೇರಿ ಇಂದು ಹಲವು ಗೋಷ್ಠಿ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7 ಮತ್ತು 8ರಂದು ಹಾವೇರಿ ನಗರದ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.

Kannada Sahitya Sammelana  Many programs today at haveri rav
Author
First Published Jan 6, 2023, 10:00 AM IST

ಹಾವೇರಿ (ಜ.6) : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7 ಮತ್ತು 8ರಂದು ಹಾವೇರಿ ನಗರದ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.

ಧ್ವಜಾರೋಹಣ:

ಜ. 6ರಂದು ಬೆಳಗ್ಗೆ 7ರಿಂದ 7-30ರ ವರೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಅವರು ನಾಡಧ್ವಜಾರೋಹಣ ನೆವೇರಿಸಲಿದ್ದಾರೆ.

ಮೆರವಣಿಗೆ:

ಬೆಳಗ್ಗೆ 7-30ರಿಂದ 10-30ರ ವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಲಿದೆ. ಪುರಸಿದ್ದೇಶ್ವರ ದೇವಸ್ಥಾನದಿಂದ ಬಸ್‌ ನಿಲ್ದಾಣ, ಆರ್‌ಟಿಒ ಕಚೇರಿ ಮಾರ್ಗವಾಗಿ ಸಮ್ಮೇಳನ ವೇದಿಕೆ ತಲುಪಲಿದೆ. ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭ ಉದ್ಘಾಟನೆ:

ಬೆಳಗ್ಗೆ 10-30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj bommai) ಅವರು ಸಮ್ಮೇಳನ ಉದ್ಘಾಟನೆ ನೆರವೇರಿಸಿ ಉದ್ಘಾಟನಾ ನುಡಿಗಳನ್ನಾಡುವರು. ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ(Basavaraj horatti)ಉಪಸ್ಥಿತಿಯಲ್ಲಿ ಶಾಸಕ ನೆಹರು ಓಲೇಕಾರ ಅವರು ಸ್ವಾಗತಿಸುವರು.

Haveri: ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧವಾಗುತ್ತಿದೆ ಭಕ್ಷ್ಯ ಭೋಜನ: ಈಗಾಗಲೇ ಸಿಹಿ ತಿಂಡಿ ತಯಾರಿ

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ(Shivaram hebbar) ಅವರಿಂದ ಮೊದಲ ಮಾತು, ಕನ್ನಡ ಸಾಹಿತ್ಯ ಪರಿಷತ್‌(Kannada sahitya parishath) ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ(Dr Mahesh Joshi) ಅವರಿಂದ ಆಶಯ ನುಡಿ, ಸಮ್ಮೇಳನಾಧ್ಯಕ್ಷರಾದ ಡಾ. ದೊಡ್ಡರಂಗೇಗೌಡ(Dr Doddarangegowda)ರಿಂದ ಭಾಷಣ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ(BS Yadiyurappa) ಅವರಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಅವರಿಂದ ಪರಿಷತ್ತಿನ ಪುಸ್ತಕಗಳ ಬಿಡುಗಡೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲಕುಮಾರ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಂದ ವೇದಿಕೆ ಉದ್ಘಾಟನೆ, ಸಂಸದ ಶಿವಕುಮಾರ ಉದಾಸಿ ಅವರಿಂದ ಹಾವೇರಿ ಜಿಲ್ಲಾ ಪುಸ್ತಕಗಳ ಬಿಡುಗಡೆ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಚಿತ್ರಕಲಾಪ್ರದರ್ಶನ, ಶಾಸಕ ಅರುಣಕುಮಾರ ಪೂಜಾರ ಅವರು ವಾಣಿಜ್ಯ ಮಳಿಗೆ ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪುಸ್ತಕ ಮಳಿಗೆ ಉದ್ಘಾಟಿಸುವರು.

ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌(Saleem ahmed) ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ವಿಧಾನ ಪರಿಷತ್‌ ಸದಸ್ಯರಾದ ಆರ್‌. ಶಂಕರ್‌ ವಸ್ತು ಪ್ರದರ್ಶನ ಹಾಗೂ ಪ್ರದೀಪ ಶೆಟ್ಟರ ಮಾಧ್ಯಮ ಕೇಂದ್ರ ಉದ್ಘಾಟಿಸಲಿದ್ದಾರೆ.

ಸಾಮರಸ್ಯದ ಭಾವ- ಕನ್ನಡದ ಜೀವ:

ಮಧ್ಯಾಹ್ನ 2ರಿಂದ 4ರ ವರೆಗೆ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಗೋಷ್ಠಿ-1 ಸಾಮರಸ್ಯದ ಭಾವ-ಕನ್ನಡದ ಜೀವ ಜರುಗಲಿದ್ದು, ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ ಅವರಿಂದ ಆಶಯನುಡಿ, ಕನಕರ ಭಾವೈಕ್ಯತಾ ದೃಷ್ಟಿಕುರಿತು ಡಾ. ವೈ.ಎಂ. ಯಾಕೊಳ್ಳಿ, ಶರೀಫರ ಸಾಮರಸ್ಯ ದೃಷ್ಟಿಕುರಿತು ಡಾ. ಅಡಿವೆಪ್ಪ ವಾಲಿ ಹಾಗೂ ಸರ್ವಜ್ಞರ ಸಾಮಾಜಿಕ ದೃಷ್ಟಿಕುರಿತು ಡಾ. ನಾಗರಾಜ ದ್ಯಾಮನಕೊಪ್ಪ ವಿಷಯ ಮಂಡನೆ ಮಾಡಲಿದ್ದಾರೆ.

ಗೋಷ್ಠಿ 2 ಸಂಜೆ 4ರಿಂದ 6ರ ವರೆಗೆ ಜರುಗಲಿದ್ದು, ಹಿರಿಯ ಕವಿ ಸರಜೂ ಕಾಟ್ಕರ್‌ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಹಿರಿಯ ಕವಯತ್ರಿ ಡಾ. ವಿಜಯಶ್ರೀ ಸಬರದ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕವಿಗೋಷ್ಠಿಯಲ್ಲಿ 25 ಕವಿಗಳು ಭಾಗವಹಿಸಲಿದ್ದಾರೆ.

ಸಂಜೆ 6 ರಿಂದ 7 ಗಂಟೆವರೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಚಲನಚಿತ್ರ ನಟ ರಮೇಶ ಅರವಿಂದ ಆಶಯ ನುಡಿಗಳನ್ನಾಡುವರು. ವಿಶ್ರಾಂತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಸನ್ಮಾನಿಸುವರು. ಸಂಜೆ 7 ರಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ವೇದಿಕೆ-2 ಪಾಪು-ಚಂಪಾ ವೇದಿಕೆ ಹೆಳವನಕಟ್ಟೆಗಿರಿಯ ಮಹಾಮಂಟಪ:

ಜ. 6ರಂದು ಮಧ್ಯಾಹ್ನ 2ರಿಂದ 4 ಗಂಟೆವರೆಗೆ ಹಾವೇರಿ ಜಿಲ್ಲಾ ದರ್ಶನ ಗೋಷ್ಠಿ-1 ಜರುಗಲಿದೆ. ಗೋಷ್ಠಿ-2 ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕರ್ನಾಟಕದ ಕೊಡುಗೆ ಸಂಜೆ 4ರಿಂದ 5 ಗಂಟೆವರೆಗೆ ಜರುಗಲಿದೆ. ಗೋಷ್ಠಿ-3 ಕನ್ನಡ ದಿಗ್ಗಜರು ಸಂಜೆ 5ರಿಂದ 7 ಗಂಟೆವರೆಗೆ ಜರುಗಲಿದೆ.

ವೇದಿಕೆ-3 ಶ್ರೀ ಹಾನಗಲ್‌ ಕುಮಾರ ಶಿವಯೋಗಿಗಳ ವೇದಿಕೆ

ಗೋಷ್ಠಿ-1 ಶತಮಾನ-ಪುರುಷರು ಈ ಮಹನೀಯರ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಧ್ಯಾಹ್ನ 2ರಿಂದ 3-30ರವರೆಗೆ ಜರುಗಲಿದೆ. ಹಿರಿಯ ಜಾನಪದ ವಿದ್ವಾಂಸ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಬರಹಗಾರ ಬಾಬು ಕೃಷ್ಣಮೂರ್ತಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ.

ಗೋಷ್ಠಿ-2: ಮಧ್ಯಾಹ್ನ 3-30ರಿಂದ 5-15ರ ವರೆಗೆ ಸಂಕೀರ್ಣ ಗೋಷ್ಠಿ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದು, ಗಮಕ ಕಲೆ ಅಳಿವು ಉಳಿವು ಕುರಿತು ಡಾ. ಎ.ವಿ. ಪ್ರಸನ್ನ, ಲಿಂಗತ್ವ ಅಲ್ಪಸಂಖ್ಯಾತರ ಭವಿಷ್ಯ ಮತ್ತು ಭರವಸೆಗಳು ಕುರಿತು ಶ್ರೀಮತಿ ಕೆ.ಸಿ. ಅಕ್ಷತಾ, ಮೊಬೈಲ್‌: ಸಾಧಕ ಮತ್ತು ಬಾಧಕಗಳು ಕುರಿತು ಡಾ.ಶುಭಾ ಮರವಂತೆ, ಪೊಲೀಸ್‌ ಸಾಹಿತ್ಯ ಕುರಿತು ಡಿ.ಸಿ. ರಾಜಪ್ಪ ಅವರು ಮಾತನಾಡಲಿದ್ದಾರೆ.

Jana sahitya sammelana: ಹಾವೇರಿಗೆ ಪರ್ಯಾಯವಾಗಿ ಜ.8ಕ್ಕೆ ಬೆಂಗಳೂರಲ್ಲಿ ಜನ ಸಾಹಿತ್ಯ ಸಮ್ಮೇಳನ

ಗೋಷ್ಠಿ-3: ಸಂಜೆ 5.15ರಿಂದ 7 ಗಂಟೆವರೆಗೆ ಬೆಳ್ಳಿತೆರೆ-ಕಿರುತೆರೆ ಜರುಗಲಿದೆ. ಹಿರಿಯ ಕಲಾವಿದ ಎಚ್‌.ಜಿ. ದತ್ತಾತ್ರೇಯ(ದತ್ತಣ್ಣ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್‌ ಆಶಯ ನುಡಿಗಳನ್ನಾಡಲಿದ್ದಾರೆ.

ಚಲನಚಿತ್ರ ಸಾಹಿತ್ಯ ಪರಂಪರೆ ಕುರಿತು ಎನ್‌.ಎಸ್‌. ಶ್ರೀಧರಮೂರ್ತಿ, ಸಮಾಜದ ಮೇಲೆ ಧಾರಾವಾಹಿಗಳ ಪರಿಣಾಮ ಕುರಿತು ಶ್ರೀಮತಿ ಕುಸುಮ ಆಯರಹಳ್ಳಿ ಹಾಗೂ ಕನ್ನಡ ಚಲನಚಿತ್ರಗಳಲ್ಲಿ ದೇಶಭಕ್ತಿ ಮತ್ತು ಕನ್ನಡಪರ ಗೀತೆಗಳು ಕುರಿತು ಪ್ರಕಾಶ್‌ ಮಲ್ಪೆ ಅವರು ಮಾತನಾಡಲಿದ್ದಾರೆ. ಸಂಜೆ 7ರಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Follow Us:
Download App:
  • android
  • ios