ಬೆಳಗಾವಿ(ಡಿ.30): ಭಾಷಾ ಕಿಚ್ಚಿಗೆ ಕುಂದಾನಗರಿ ಬೆಳಗಾವಿ ಮತ್ತೊಮ್ಮೆ ಹೊತ್ತಿ ಉರಿಯುತ್ತಿದೆ. ಹೀಗಾಗಿ ಗಡಿಯಲ್ಲಿ ಶಾಂತಿ ನೆಲೆಸಲು ಕರ್ನಾಟಕದ ಸರ್ಕಾರ ಮುಂದಾಗಬೇಕು, ಯಡಿಯೂರಪ್ಪ ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ, ಗಡಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಿ ಅಂತ ಕನ್ನಡ ಹೋರಾಟಗಾರರು ಗಣೇಶನಿಗೆ ವಿಶೇಷ ಪೂಜೆ ಮಾಡಿದ್ದಾರೆ. 

"

ಇಂದು(ಸೋಮವಾರ) ನಗರದ ಚೆನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ಕನ್ನಡಪರ ಹೋರಾಟಗಾರ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಗಣೇಶನಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಳಿಕ ಮಾಧ್ಯಮದವರ ಜತೆ ಮಾತನಾಡಿದ ದೀಪಕ್ ಗುಡಗನಟ್ಟಿ ಅವರು, ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರವನ್ನು  ಗಂಭೀರವಾಗಿ ಪರಿಗಣಿಸಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮತ್ತು ಶಿವಸೇನಾ ಕಾರ್ಯಕರ್ತರು ಕರ್ನಾಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಗಡಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಹೀಗಾಗಿ ಗಡಿ ವಿಚಾರವಾಗಿ ಸರ್ಕಾರ ಸಕಾರಾತ್ಮಕವಾಗಿ ವಿಚಾರ ಮಾಡಲಿ, ಗಡಿ ಸಮಸ್ಯೆ ನಿಭಾಯಿಸಲು ಸಿಎಂ ಯಡಿಯೂರಪ್ಪಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.