ಜೆಎನ್‌ಯು ಕನ್ನಡ ಪೀಠ ರದ್ದಿಲ್ಲ: ಸಚಿವ ರವಿ ಸ್ಪಷ್ಟನೆ
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ಕನ್ನಡ ಅಧ್ಯಯನ ಪೀಠ ರದ್ದು ಮಾಡುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ. ಜೆಎನ್‌ಯುನಲ್ಲಿರುವ ಕನ್ನಡ ಅಧ್ಯಯನ ಪೀಠ ರದ್ದಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಬರುತ್ತಿವೆ.
ಬೆಂಗಳೂರು(ಆ.01): ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ಕನ್ನಡ ಅಧ್ಯಯನ ಪೀಠ ರದ್ದು ಮಾಡುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಸ್ಪಷ್ಟಪಡಿಸಿದ್ದಾರೆ. ಜೆಎನ್‌ಯುನಲ್ಲಿರುವ ಕನ್ನಡ ಅಧ್ಯಯನ ಪೀಠ ರದ್ದಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಬರುತ್ತಿವೆ.
ಅದು ಸತ್ಯಕ್ಕೆ ದೂರವಾದ ಸುದ್ದಿಯಾಗಿದ್ದು, ಕಳೆದ ನವೆಂಬರ್‌ನಲ್ಲೇ ಜೆಎನ್‌ಯು ಕುಲಪತಿಗಳಿಗೆ ಪತ್ರ ಬರೆದು ಅಧ್ಯಯನ ಪೀಠಕ್ಕೆ ಮುಖ್ಯಸ್ಥರನ್ನು ನೇಮಿಸಲು ತಿಳಿಸಲಾಗಿದೆ ಎಂದಿದ್ದಾರೆ. ಈಗಾಗಲೇ ಜೆಎನ್‌ಯು ವತಿಯಿಂದ ಕನ್ನಡ ಅಧ್ಯಯನ ಪೀಠಕ್ಕೆ ಮುಖ್ಯಸ್ಥರನ್ನು ನೇಮಿಸಲು ಶೋಧನಾ ಸಮಿತಿ ನೇಮಕ ಮಾಡಲಾಗಿದೆ.
Fact Check : ಕೊರೋನಾ ರೋಗಿಗಳ ಕಿಡ್ನಿ ಮಾರಾಟ ಮಾಡಲಾಗುತ್ತಿದೆಯಾ?
ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೋಧನಾ ಸಮಿತಿ ನೀಡುವ ವರದಿ ಆಧರಿಸಿ ಮುಖ್ಯಸ್ಥರನ್ನು ನೇಮಿಸಲಾಗುತ್ತದೆ. ಇದರ ಜೊತೆ ಕಳೆದ ಐದು ವರ್ಷದಲ್ಲಿ ಅಧ್ಯಯನ ಪೀಠದಿಂದ ನಡೆದಿರುವ ಚಟುವಟಿಕೆಗಳು, ಎಷ್ಟುಮಂದಿ ದೇಶ-ವಿದೇಶದವರು ಪೀಠದ ಅನುಕೂಲ ಪಡೆದಿದ್ದಾರೆ ಎಂಬ ಬಗ್ಗೆಯೂ ವರದಿ ಪಡೆಯುತ್ತೇವೆ ಎಂದಿದ್ದಾರೆ.
ರೌಡಿಶೀಟರ್ ಬರ್ಬರ ಹತ್ಯೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
2015ರಲ್ಲಿ ಜೆಎನ್‌ಯುನಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪಿಸಲಾಗಿತ್ತು. ಪುರುಷೋತ್ತಮ ಬಿಳಿಮಲೆ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಗಸ್ಟ್ 20ಕ್ಕೆ ಅವರು ನಿವೃತ್ತಿಯಾಗಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಪತ್ರ ಬರೆದಿದ್ದರೂ ವಿಶ್ವವಿದ್ಯಾಲಯ ಇನ್ನೂ ಕನ್ನಡ ಅಧ್ಯಯನ ಪೀಠಕ್ಕೆ ಹೊಸ ಮುಖ್ಯಸ್ಥರನ್ನು ನೇಮಿಸದಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿತ್ತು ಎಂದು ಮೂಲಗಳು ತಿಳಿಸಿವೆ.