ಹಾವು ಕಚ್ಚಿ ಕನ್ನಡದ ವೀರ ಯೋಧ ಸಾವು

ಇವರಿಗೆ ಜುಲೈ 22 ರಂದು ಹಾವು ಕಚ್ಚಿ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಏಳು ದಿನಗಳಿಂದ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯೋಧ ಸಂಗಮೇಶ್ ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ.

Kannadiga Soldier Dies by Snake Bite

ಬಾಗಲಕೋಟೆ[ಆ.04]: ದೆಹಲಿಯಲ್ಲಿ ಹಾವು ಕಚ್ಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಾಗಲಕೋಟೆ ಯೋಧನ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ನೆರವೇರಿತು. ಇಲ್ಲಿನ ಬೀಳಗಿ ತಾಲ್ಲೂಕಿನ ಗಿರಿಸಾಗರ ಗ್ರಾಮದ ಯೋಧ ಸಂಗಮೇಶ ಗುಡ್ಲಮನಿ ಎಂಬುವರೇ ಮೃತಪಟ್ಟ ಯೋಧ. 

ಇವರಿಗೆ ಜುಲೈ 22 ರಂದು ಹಾವು ಕಚ್ಚಿ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಏಳು ದಿನಗಳಿಂದ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯೋಧ ಸಂಗಮೇಶ್ ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ. ಹೀಗಾಗಿ  ಇಂದು ಬಾಗಲಕೋಟೆಗೆ ಆಗಮಿಸಿದ ಯೋಧನ ಪಾರ್ಥಿವ ಶರೀರವನ್ನು  ಸ್ವಗ್ರಾಮ ಗಿರಿಸಾಗರಕ್ಕೆ ಕೊಂಡೊಯ್ಯಲಾಗಿತ್ತು.

ಗ್ರಾಮದ‌ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಯೋಧನ ಪಾರ್ಥಿವ ಶರೀರವನ್ನು ತರಲಾಯಿತು. ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಹೊಲದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. 
ಯೋಧನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು‌ ಮುಟ್ಟಿತ್ತು.

Latest Videos
Follow Us:
Download App:
  • android
  • ios