ಬಲಿಜ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ಸಂಪೂರ್ಣವಾಗಿ ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಬಲಿಜ ಸಂಘ ಜ.9 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. 

ಬೆಂಗಳೂರು (ಜ.8): ಬಲಿಜ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ಸಂಪೂರ್ಣವಾಗಿ ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಬಲಿಜ ಸಂಘ ಜ.9 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್‌, ಬಲಿಜ ಜನಾಂಗಕ್ಕೆ ಶಿಕ್ಷಣಕ್ಕೆ 2ಎ ಮೀಸಲಾತಿ ಹಾಗೂ ಉದ್ಯೋಗ ಮತ್ತು ರಾಜಕೀಯಕ್ಕೆ 3ಎ ಮೀಸಲಾತಿ ನೀಡಲಾಗಿದೆ. ಇದರಿಂದ ಸಮುದಾಯವು ರಾಜಕೀಯ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹಿಂದುಳಿದಿದೆ. 40 ಲಕ್ಷಕ್ಕೂ ಅಧಿಕ ಸಂಖ್ಯಾ ಬಲ ಹೊಂದಿರುವ ಸಮುದಾಯ ಶಾಸಕರು, ಸಚಿವರಿಲ್ಲ. ಹೀಗಾಗಿ, ಸಮುದಾಯಕ್ಕೆ ಸಂಪೂರ್ಣವಾಗಿ 2ಎ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಲಾಗುವುದು. ಪ್ರತಿಭಟನೆಗೆ ಸರ್ಕಾರ ಸ್ಪಂದಿಸದಿದ್ದರೆ, ಒಂದು ವಾರದೊಳಗೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದ ಸರ್ಕಾರ (1994) ಯಾವುದೇ ಆಯೋಗದ ಶಿಫಾರಸು ಇಲ್ಲದೇ ಬಲಿಜ ಸಮುದಾಯವನ್ನು ಪ್ರವರ್ಗ 2ಎ ನಿಂದ 3ಎ ಗೆ ಸೇರಿಸಿತ್ತು. ಬಳಿಕ ಬಿ.ಎಸ್‌.ಯಡಿಯೂರಪ್ಪ ಅವರ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಲಿಜ ಸಮುದಾಯಕ್ಕೆ ಶಿಕ್ಷಣಕ್ಕೆ ಮಾತ್ರ 2ಎ ಮೀಸಲಾತಿ ನೀಡಲಾಗಿದೆ. ಆದರೆ, ಉದ್ಯೋಗ ಮತ್ತು ರಾಜಕೀಯಕ್ಕೆ 2ಎ ಮೀಸಲಾತಿ ಸಿಗಲಿಲ್ಲ ಎಂದರು.

Balija community: 2ಎ ಮೀಸಲು ನೀಡಿ, ಇಲ್ಲಿದಿದ್ದರೆ ಉಗ್ರ ಹೋರಾಟ: ಬಲಿಜ ವೇದಿಕೆ

ಹೈಕೋರ್ಚ್‌ ಸೇರಿದಂತೆ ವಿವಿಧ ಆಯೋಗಗಳು ಬಲಿಜ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂದು ನಿರ್ದೇಶಿಸಿದರೂ ಈವರೆಗೆ ಸಂಪೂರ್ಣವಾಗಿ 2ಎ ಮೀಸಲಾತಿ ಸಿಕ್ಕಿಲ್ಲ ಎಂದು ಹೇಳಿದರು.