ಗದಗ(ಡಿ.26): ಜಮ್ಮು ಮತ್ತು ಕಾಶ್ಮೀರದ ರಾಮಪುರ ಹಾಗೂ ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ರಾಜ್ಯದ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ  ಕರಮುಡಿ ಗ್ರಾಮದ ವೀರೇಶ ಕುರಟ್ಟಿ ಹುತಾತ್ಮ ಯೋಧರಾಗಿದ್ದಾರೆ. 

ಬುಧವಾರ ಬೆಳಗ್ಗೆ 11.30 ಸುಮಾರಿಗೆ ಪಾಕ್ ಸೇನೆ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡಿದೆ. ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವೀರೇಶ ಕುರಟ್ಟಿ ಪಾರ್ಥಿವ ಶರೀರ ಇಂದು ಅಥವಾ ನಾಳೆ ಗ್ರಾಮಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಬೆಳಗಾವಿ ವಿಮಾನ ನಿಲ್ದಾಣದ‌ ಮೂಲಕ ವೀರೇಶ ಕುರಟ್ಟಿ ಪಾರ್ಥಿವ ಶರೀರ ಸ್ವಗ್ರಾಮ ಕರಮುಡಿಗೆ ಬರುವ ಸಾಧ್ಯತೆ ಇದೆ.