ಸಮಾಜದ ಎಲ್ಲಾ ವರ್ಗವನ್ನೂ ಪ್ರತಿನಿಧಿಸುವ ಮಧ್ಯಂತರ ಬಜೆಟ್ ಮಂಡಿಸಿದ ಮೋದಿ ಸರ್ಕಾರ! ಇದಕ್ಕೆ ಕರ್ನಾಟಕ ಬಿಜೆಪಿ ಫುಲ್ ಖುಷ್! ಇದೇ ಖುಷಿಯಲ್ಲಿ ಫೆ.2ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡ ಕರ್ನಾಟಕ ಬಿಜೆಪಿ.
ಬೆಂಗಳೂರು, (ಫೆ.01): ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ನಲ್ಲಿ ಭರ್ಜರಿ ಗಿಫ್ಟ್ ನೀಡಿದೆ.
ಇಂದು [ಶುಕ್ರವಾರ] ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಅವರು ಮಧ್ಯಂತರ ಬಜೆಟ್ ಮಂಡಿಸಿದ್ದು, ರೈತ, ಕಾರ್ಮಿಕ ಹಾಗೂ ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಬಜೆಟ್‌ವೊಂದನ್ನು ಮಂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಧ್ಯಂತರ ಬಜೆಟ್‌ನ ಮಹಾ ಕೊಡುಗೆ: ಅದೂ, ಇದೂ, ಎಲ್ಲವೂ ನಿಮಗೆ!
ಇನ್ನು ಈ ಬಜೆಟ್ ಚುನಾವಣೆ ಬಜೆಟ್ ಆಗಿದೆ ಅಂತೆಲ್ಲಾ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ರೆ, ಇನ್ನು ಆಡಳಿತ ಪಕ್ಷ ಫುಲ್ ಖುಷ್ ಆಗಿದೆ. ಇದೇ ಖುಷಿಯಲ್ಲಿ ರಾಜ್ಯ [ಕರ್ನಾಟಕ] ಬಿಜೆಪಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅತ್ಯುತ್ತಮ ಬಜೆಟ್ ನೀಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಭಿನಂದನಾ ಕಾರ್ಯಕ್ರಮ 2.2.2019ರಂದು [ಶನಿವಾರ] ಮಧ್ಯಾಹ್ನ12 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ಎದುರು ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಶ್ರೀ ಬಿ.ಎಸ್. ಯಡಿಯೂರಪ್ಪ, ಮಾಜೀ ಉಪಮುಖ್ಯಮಂತ್ರಿ ಆರ್. ಅಶೋಕ್ ಮತ್ತಿತರ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎಸ್.ಶಾಂತಾರಾಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 1, 2019, 9:45 PM IST