Asianet Suvarna News Asianet Suvarna News

Karnataka budget 2023: ಕಾಫಿ ನಾಡಿಗೆ ಕೈ ಕೊಟ್ಟರಾಜ್ಯ ಸರ್ಕಾರ: ಜಿಲ್ಲೆಗೆ ಬಿಗ್‌ ಝೀರೋ ಶಾಕ್‌

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲವನ್ನು ಕೆಸರಿನಲ್ಲಿ ಮುಚ್ಚಿ ಕೈ ಹಿಡಿದ ಕಾಫಿ ನಾಡಿನ ಜನತೆಗೆ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ನಿರಾಶೆ ಉಂಟು ಮಾಡಿದೆ.

Karnataka budget 2023 Injustice to Chikmagalur district by siddaramaia government rav
Author
First Published Jul 8, 2023, 4:17 AM IST

ಚಿಕ್ಕಮಗಳೂರು (ಜು.8) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಮಲವನ್ನು ಕೆಸರಿನಲ್ಲಿ ಮುಚ್ಚಿ ಕೈ ಹಿಡಿದ ಕಾಫಿ ನಾಡಿನ ಜನತೆಗೆ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ನಿರಾಶೆ ಉಂಟು ಮಾಡಿದೆ.

ತುರ್ತು ಪರಿಸ್ಥಿತಿ ನಂತರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡು ಅತಂತ್ರಗೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಲೋಕಸಭೆಯ ಉಪ ಚುನಾವಣೆಯಲ್ಲಿ ರಾಜಕೀಯ ಪುನರ್‌ ಜನ್ಮ ನೀಡಿರುವ ಜಿಲ್ಲೆ. 1989ರ ನಂತರದ ವಿಧಾನಸಭಾ ಚುನಾವಣೆಗಳಲ್ಲಿ ಅತಂತ್ರದಲ್ಲಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಕೊಟ್ಟಿರುವ ಜಿಲ್ಲೆ ಚಿಕ್ಕಮಗಳೂರು.

ಚಿಕ್ಕಮಗಳೂರಲ್ಲಿ ತಗ್ಗಿದ ವರುಣನ ಅಬ್ಬರ, ಇಂದೂ ಕೂಡ ಶಾಲಾ, ಕಾಲೇಜುಗಳಿಗೆ ರಜೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ಪ್ರಚಾರಕ್ಕೆ ಬಾಳೆಹೊನ್ನೂರಿಗೆ ಬಂದಿದ್ದ ಸಂದರ್ಭದಲ್ಲಿ ಅವರು ತಮ್ಮ ಅಜ್ಜಿ ಇಂದಿರಾಗಾಂಧಿಯವರಿಗೆ ಈ ಜಿಲ್ಲೆ ಕೊಟ್ಟಿರುವ ಕೊಡುಗೆಯನ್ನು ಸ್ಮರಿಸಿದರು. ಈ ಋುಣ ಕಾಂಗ್ರೆಸ್‌ ಪಕ್ಷದ ಮೇಲಿದೆ ಎಂದಿದ್ದರು. ಈ ಋುಣ ತೀರಿಸಲು ಈ ಬಾರಿ ಅವಕಾಶ ಇತ್ತು. ಅಂದರೆ, ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದರೂ ಕೂಡ ಸಚಿವ ಸ್ಥಾನದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡಲಿಲ್ಲ. ರಾಜ್ಯ ಬಜೆಟ್‌ನಲ್ಲಿ ಗುರುತಿಸುವ ಕೆಲಸ ಆಗಿಲ್ಲ. ಒಂದೇ ಮಾತಿನಲ್ಲಿ ಹೇಳುವುದಾದರೆ ಜಿಲ್ಲೆಯನ್ನು ಪೂರ್ಣ ಪ್ರಮಾಣದಲ್ಲಿ ಕಡೆಗಣಿಸಲಾಗಿದೆ.

ಕಳೆದ ಬಜೆಟ್‌

ಚುನಾವಣಾ ಪೂರ್ವದಲ್ಲಿ ಫೆ.17 ರಂದು ಸಿಎಂ ಬಸವರಾಜ್‌ ಬೊಮ್ಮಾಯಿ ಮಂಡಿಸಿದ ಬಜೆಟ್‌ನಲ್ಲಿ ಹಲವು ಕೊಡುಗೆಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಪ್ರಮುಖವಾಗಿ ಜಿಲ್ಲೆಗೆ ಹೊಸ ವಿಶ್ವವಿದ್ಯಾನಿಲಯ, ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 50 ಹಾಸಿಗೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌, ಶೃಂಗೇರಿ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ, ಮೆಗಾ ಜವಳಿ ಪಾರ್ಕ್ ಸ್ಥಾಪನೆ ಒಳಗೊಂಡಿತ್ತು.

ಆದರೆ, ಈಗಿನ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಗುರುತರವಾದ ಯಾವುದೇ ಕೊಡುಗೆಯನ್ನು ನೀಡಿಲ್ಲ, ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ರಚನೆಯಾಗಬೇಕೆಂಬ ಬಹಳ ವರ್ಷದ ಕನಸ್ಸು ಹಾಗೆಯೇ ಉಳಿದುಕೊಂಡಿದೆ.

ಈ ಬಾರಿ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕೆಲವೆಡೆ ಚಿಕ್ಕಮಗಳೂರು ಜಿಲ್ಲೆಯ ಹೆಸರನ್ನು ಪ್ರಸ್ತಾಪ ಮಾಡುವ ಮೂಲಕ ಗುರುತಿಸಿದೆ.

- ಚಿಕ್ಕಮಗಳೂರು ಹಾಗೂ ಕೊಡಗು ಕಾಫಿ ವೈವಿಧÜ್ಯಗಳು ಹೊಂದಿದೆ. ಕಾಫಿ ಎಕೋ ಟೂರಿಸಂ ಅನ್ನು ಉ್ತತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು.

- ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್‌ ವ್ಯಾನ್‌ ಖರೀದಿಸಲು ಶೇ. 4ರ ಬಡ್ಡಿ ದರದಲ್ಲಿ 7 ಲಕ್ಷದವರೆಗೆ ಸಾಲ ವಿತರಣೆ

ಚಾರ್ಮಾಡಿ ಘಾಟ್‌ನಲ್ಲಿ KSRTC ಮುಖಾಮುಖಿ ಡಿಕ್ಕಿ, ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ರಕ್ಷಿಸಿದ ಮುಸ್ಲಿಂ ಯುವಕ

- ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಧರ್ಮಸ್ಥಳ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ಏರ್‌ಸ್ಟ್ರಿಪ್‌ ಅಭಿವೃದ್ಧಿ

- ಕೇ ಸೇಫ್‌ ಯೋಜನೆಯಡಿ ಎನ್‌.ಆರ್‌.ಪುರದಲ್ಲಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ.

Follow Us:
Download App:
  • android
  • ios