ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ತಮ್ಮ ಎರಡನೇ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನೀಡಿದ್ದಾರೆ. ಚುನಾವಣಾ ವರ್ಷವಾಗಿರುವುದು ರಾಜ್ಯಮಟ್ಟದಲ್ಲಿ ಎಲ್ಲಾ ವರ್ಗಕ್ಕೂ ವಿವಿಧ ಕೊಡುಗೆ ನೀಡುವುದರ ಜತೆಗೆ ತಮ್ಮ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ಘೋಷಿಸಿ ಅಭಿವೃದ್ಧಿಯ ವೇಗ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಆದರೆ ಕಳೆದ ವರ್ಷ ಘೋಷಣೆಯಾಗಿ ಅನುಷ್ಠಾನಗೊಳ್ಳುತ್ತಿರುವುದನ್ನೂ ಬಜೆಟ್‌ನಲ್ಲಿ ಮತ್ತೆ ಸೇರಿಸಿ ಕೊಡುಗೆ ಪಟ್ಟಿದೊಡ್ಡದಾಗುವಂತೆ ಮಾಡಿದ್ದಾರೆ.

ನಾರಾಯಣ ಹೆಗಡೆ

ಹಾವೇರಿ (ಫೆ.18) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ತಮ್ಮ ಎರಡನೇ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನೀಡಿದ್ದಾರೆ.

ಚುನಾವಣಾ ವರ್ಷವಾಗಿರುವುದು ರಾಜ್ಯಮಟ್ಟದಲ್ಲಿ ಎಲ್ಲಾ ವರ್ಗಕ್ಕೂ ವಿವಿಧ ಕೊಡುಗೆ ನೀಡುವುದರ ಜತೆಗೆ ತಮ್ಮ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ಘೋಷಿಸಿ ಅಭಿವೃದ್ಧಿಯ ವೇಗ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಆದರೆ ಕಳೆದ ವರ್ಷ ಘೋಷಣೆಯಾಗಿ ಅನುಷ್ಠಾನಗೊಳ್ಳುತ್ತಿರುವುದನ್ನೂ ಬಜೆಟ್‌ನಲ್ಲಿ ಮತ್ತೆ ಸೇರಿಸಿ ಕೊಡುಗೆ ಪಟ್ಟಿದೊಡ್ಡದಾಗುವಂತೆ ಮಾಡಿದ್ದಾರೆ.

ಜಿಲ್ಲೆಯವರೇ ಮುಖ್ಯಮಂತ್ರಿಯಾಗಿರುವುದರಿಂದ ಈ ಬಾರಿಯ ಬಜೆಟ್‌ ಮೇಲೆ ಅಪಾರ ನಿರೀಕ್ಷೆ ಹೊಂದಲಾಗಿತ್ತು. ತವರು ಜಿಲ್ಲೆಗೆ ವಿಶೇಷ ಕೊಡುಗೆಗಳು ದೊರಕಬಹುದು ಎಂಬ ಆಶಯವನ್ನು ಸಿಎಂ ಬೊಮ್ಮಾಯಿ ಈಡೇರಿಸಿದ್ದು, ಕಳೆದ ವರ್ಷದ ಯೋಜನೆಗಳನ್ನು ಸಾಕಾರಗೊಳಿಸುವುದರೊಂದಿಗೆ ಹೊಸ ಭರವಸೆಗಳನ್ನೂ ನೀಡಿದ್ದಾರೆ. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರಕ್ಕೆ . 25 ಕೋಟಿ ಅನುದಾನ ನೀಡಲು ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿದ್ದರು. ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿದ್ದ ವೈದ್ಯಕೀಯ ಕಾಲೇಜ್‌ ಕಟ್ಟಡ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ.

Karnataka Budget 2023: ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ ಬೊಮ್ಮಾಯಿ

ನನೆಗುದಿಗೆ ಬಿದ್ದ ಡಿಸಿಸಿ ಬ್ಯಾಂಕ್‌...

ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ, ಪ್ರತ್ಯೇಕ ಡಿಸಿಸಿ ಬ್ಯಾಂಕ್‌(DCC Bank) ಸ್ಥಾಪನೆ ಸಂಬಂಧ ಹಿಂದೆ ಬಸವರಾಜ ಬೊಮ್ಮಾಯಿ(CM Basavaraj Bommai) ಅವರೇ ಹೋರಾಟ ನಡೆಸಿದ್ದರು. ಬೊಮ್ಮಾಯಿ ಸಿಎಂ ಆದ ಮೇಲೆ ಇದರಲ್ಲಿ ಒಂದಾದ ಧಾರವಾಡ ಒಕ್ಕೂಟದಿಂದ ಪ್ರತ್ಯೇಕಿಸುವ ನಿರ್ಧಾರ ಕೈಗೊಂಡು ಈಗ ‘ಹಾವೇಮುಲ…’ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಮೆಗಾ ಡೈರಿ, ಯುಎಚ್‌ಟಿ ಘಟಕ ಶೀಘ್ರ ಲೋಕಾರ್ಪಣೆ ಮಾಡುವ ಹಂತಕ್ಕೆ ಬಂದಿದೆ. ಪ್ರತ್ಯೇಕ ಡಿಸಿಸಿ ಬ್ಯಾಂಕ್‌ ಸ್ಥಾಪನೆ ಈಗಿನ ಮುಖ್ಯ ಬೇಡಿಕೆಗಳಲ್ಲಿ ಒಂದಾಗಿತ್ತು. ಬೇರೆ ಜಿಲ್ಲೆಗಳಲ್ಲಿ ರೈತರಿಗೆ ಗರಿಷ್ಠ . 3 ಲಕ್ಷವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ಸಿಕ್ಕರೆ ಜಿಲ್ಲೆಯಲ್ಲಿ ಇಷ್ಟುಪ್ರಮಾಣದಲ್ಲಿ ಯಾವ ರೈತರಿಗೂ ಸಾಲ ಸಿಗುತ್ತಿಲ್ಲ. ಪ್ರಸ್ತುತ ಬಜೆಟ್‌ನಲ್ಲಿ ಸರ್ಕಾರ ಗರಿಷ್ಠ . 5 ಲಕ್ಷವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್‌ ಸ್ಥಾಪಿಸಿದ್ದರೆ ರೈತರಿಗೆ ಸಾಲ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಆಗುತ್ತಿತ್ತು ಎನ್ನುತ್ತಾರೆ ರೈತ ಮುಖಂಡರು. ಆದರೆ ಈ ಸಲವೂ ಈ ಬೇಡಿಕೆ ಈಡೇರದಿರುವುದು ರೈತ ವರ್ಗಕ್ಕೆ ಬೇಸರ ಮೂಡಿಸಿದೆ.

ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು..

1 ಸವಣೂರಿನಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಸ್ಥಾಪನೆ

2 ಹಾವೇರಿ, ರಾಣಿಬೆನ್ನೂರು ನಗರದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ.

3 ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರ ಸ್ಥಾಪನೆ.

4 ಹಾವೇರಿಯಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಹೂವಿನ ಚಿಲ್ಲರೆ ಮಾರುಕಟ್ಟೆಯನ್ನು ನಿರ್ಮಿಸುವುದು.

5 ಹಾವೇರಿಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪನೆ.

6 ಹಾವೇರಿಯಲ್ಲಿ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸ್ಥಾಪನೆ.

7 ಜಿಲ್ಲೆಯ ಬಂಕಾಪುರದಲ್ಲಿ 12ನೇ ಶತಮಾನದಲ್ಲಿ ನಿರ್ಮಿಸಲಾದ ಐತಿಹಾಸಿಕ 101 ಕಂಬಗಳ ನಗರೇಶ್ವರ ದೇವಸ್ಥಾನದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು.

8 ಬಂಕಾಪುರದಲ್ಲಿರುವ ಪಾಲಿಟೆಕ್ನಿಕ್‌ ಕಾಲೇಜು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜ್‌ ಆಗಿ ಉನ್ನತೀಕರಣ.

9 ಹಾವೇರಿಯಲ್ಲಿ . 90 ಕೋಟಿ ವೆಚ್ಚದಲ್ಲಿ ಮೆಗಾಡೇರಿ ಸ್ಥಾಪನೆ.

10 ಹಾವೇರಿಯಲ್ಲಿ ಇಂಟಿಗ್ರೆಟೆಡ್‌ ಟೌನ್‌ಶಿಪ್‌ಗಳನ್ನು ಸಾರ್ವಜನಿಕವಾಗಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಕ್ರಮ.

11 ಐಐಟಿ ಮಾದರಿಯಲ್ಲಿ ಕೆಐಟಿಗಳಾಗಿ ಉನ್ನತೀಕರಿಸಲು ಹಾವೇರಿಯ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜ್‌ ಆಯ್ಕೆ.

12 ಹಾನಗಲ್ಲ ತಾಲೂಕಿನ ಬಾಳಂಬೀಡ ಕೆರೆ ತುಂಬಿಸುವ ಯೋಜನೆಯನ್ನು ಪೂರ್ಣಗೊಳಿಸುವುದು.

13 ಚಿತ್ರದುರ್ಗ-ದಾವಣಗೆರೆ-ಹಾವೇರಿ ಮಾರ್ಗದ ಆರು ಪಥದ ಹೆದ್ದಾರಿ ನಿರ್ಮಾಣ.

Karnataka Budget: ಸರ್ಕಾರದಿಂದ 1 ಲಕ್ಷ ಹುದ್ದೆ ಭರ್ತಿಗೆ ನಿರ್ಧಾರ: ಪೊಲೀಸ್‌ ಅಭ್ಯರ್ಥಿಗಳಿಗೆ ಗುಡ್‌