ಬೆಳಗಾವಿ (ಅ.05): ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಹಾಗೂ ಜಿಲ್ಲೆಯ ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜೆಡಿಎಸ್‌ ಪ್ರಮುಖ ಮುಖಂಡ ರಾಜೀನಾಮೆ : ಕಣ್ಣೀರಿಟ್ಟು ಭಾವುಕ

ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದರು.