ಹಾವೇರಿ ಆಯ್ತು, ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ: ಸಚಿವ ಎಚ್.ಕೆ. ಪಾಟೀಲ ಮಾಹಿತಿ
ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿದ ಬೆನ್ನಲ್ಲಿಯೇ ಗದಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ಮಾಡಲಾಗುವುದು ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಗದಗ (ಸೆ.05): ರಾಜ್ಯದಲ್ಲಿ ಈ ವರ್ಷ ಮಳೆ ಕೊರತೆಯಾಗಿದ್ದು, ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈಗಾಗಲೇ ಬಿತ್ತನೆ ಮಾಡಿ ಒಂದೆರಡು ಅರ್ಧ ಬೆಳೆದು ಒಣಗಿರುವ ಬೆಳೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ಗದಗ ಜಿಲ್ಲೆಯಲ್ಲಿಯೂ ಕೂಡ ಮೋಡ ಬಿತ್ತನೆ ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿ ಆರಂಭವಾಗಿದೆ. ಇದರ ನಡುವೆ ಜುಲೈ ತಿಂಗಳಲ್ಲಿ ಉತ್ತಮವಾಗಿ ಮಳೆ ಸುರಿದಿತ್ತು. ಆದ್ದರಿಂದ ಮಳೆ ಕೊರತೆ ನೀಗಿ ಬರಗಾಲ ದೂರವಾಯಿತು ಎಂದು ರೈತರು ಬಿತ್ತನೆ ಕಾರ್ಯ ಪೂರ್ಣಗೊಳಿಸಿ, ಬೆಳೆಗಳು ನಳನಳಿಸುವ ವೇಳೆಗಾಗಲೇ ಪುನಃ ಆಗಸ್ಟ್ ತಿಂಗಳಲ್ಲಿ ಪೂರ್ಣವಾಗಿ ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ 134 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈಗ ಅರ್ಧಕ್ಕೆ ಬೆಳೆದಿರುವ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿ ಮಳೆ ಸುರಿಸಲು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಶಾಸಕ: ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಆರಂಭ
ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರು ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ ಕೊಟ್ಟ ಬೆನ್ನಲ್ಲಿಯೇ, ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆಗೆ ಚಿಂತನೆ ನಡೆದಿರೋದಾಗಿ ಕಾನೂನು ಹೆಚ್.ಕೆ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಗದಗ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಟೀಲ್, ಗದಗ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಜಿಲ್ಲಾಧಿಕಾರಿ ಅವರಿಗೆ ಪರವಾನಿಗೆ ಕೇಳಿದ್ದೇವೆ. ಮೋಡ ಬಿತ್ತನೆ ಮಾಡುತ್ತಿರುವ ಏಜೆನ್ಸಿ ಜೊತೆಗೂ ಮಾತನಾಡಿದ್ದೇನೆ. ನಿನ್ನೆ ಮಳೆಯಾಗಿದೆ. ಇವತ್ತು, ನಾಳೆ ಒಂದೆರಡು ದಿನ ನೋಡೋಣ. ಮಳೆ ಕೊರತೆ ಕಂಡುಬಂದರೆ ಮೋಡ ಬಿತ್ತನೆ ಮಾಡುತ್ತೇವೆ ಅಂತಾ ಹೇಳಿದರು.
ಇನ್ನು ರಾಜ್ಯದಲ್ಲಿ ಮೋಡ ಬಿತ್ತನೆ ಯಶಸ್ವಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರ ಬಗ್ಗೆ ಮಾತನಾಡಿದ ಹೆಚ್.ಕೆ.ಪಟೀಲರು, ಮೋಡ ಬಿತ್ತನೆ ಒಂದು ವಿಜ್ಞಾನವಾಗಿದೆ. ನಾನು ನೀರಾವರಿ ಸಚಿವನಾಗಿದ್ದಾಗ 2003ರಲ್ಲಿ 85 ದಿನ ಮೋಡ ಬಿತ್ತನೆ ಮಾಡಲಾಗಿತ್ತು. ಈ ವೇಳೆ 60 ದಿನಗಳ ಕಾಲ ಶೇಕಡಾ 22 ರಷ್ಟು ಮಳೆಯಾಗಿತ್ತು. ಇನ್ನು 2017- 18 ರಲ್ಲಿಯೂ ರಾಜ್ಯದ ವಿವಿಧೆಡೆ ಓಡ ಬಿತ್ತನೆ ಮಾಡಲಾಗಿತ್ತು. ಅವೆಲ್ಲ ಯಶಸ್ವಿ ಪ್ರಯೋಗ ಆಗಿವೆ. ಪ್ರಯೋಗ ಹಾಗೂ ವಿಜ್ಞಾನದ ಬಗ್ಗೆ ಹೆಚ್ಚು ಹೆಚ್ಚು ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.
ಕರ್ನಾಟಕದ ಪ್ರಸಿದ್ಧ ಬಾಕ್ಸರ್ ಮಲ್ಪೆಯ ವಿರಾಜ್ ಮೆಂಡನ್ ಆತ್ಮಹತ್ಯೆ
ಹುಬ್ಬಳ್ಳಿಯಿಂದ ಮೋಡ ಬಿತ್ತನೆಗೆ ಚಾಲನೆ: ಇನ್ನು ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಮಾಡುವ ವಿಮಾನಕ್ಕೆ ಕಾನೂನು ಸಚಿವ ಹೆಚ್.ಕೆ. ಪಾಟೀಲ ಸೋಮವಾರ ಚಾಲನೆ ನೀಡಿದ್ದರು. ಈ ವೇಳೆ ಹೆಚ್.ಕೆ.ಪಾಟೀಲ್ ಅವರಿಗೆ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕ ಯು.ಬಿ.ಬಣಕಾರ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದ್ದರು. ಶಾಸಕ ಪ್ರಕಾಶ ಕೋಳಿವಾಡ ಓಡೆತನದ ಪಿಕೆಕೆ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರೈತರಿಗಾಗಿ ಬುಧವಾರದವರೆಗೆ ಮೂರು ದಿನಗಳ ಕಾಲ ಉಚಿತವಾಗಿ ಮೋಡ ಬಿತ್ತನೆ ಮಾಡಲಾಗುತ್ತದೆ.