ಮಂಡ್ಯ (ಆ.21):  ಮಂಡ್ಯ ಜಿಲ್ಲೆ ಕೆ.ಆರ್‌. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ತಾಲೂಕಿನ 50ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿ ನೀರು ಹರಿಸುವ 265.29 ಕೋಟಿ ರು. ವೆಚ್ಚದ ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹುಟ್ಟೂರಿಗೆ ಗೌರಿ-ಗಣೇಶ ಹಬ್ಬದ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ.

ಕಳೆದ ಉಪ ಚುನಾವಣೆ ವೇಳೆ ತಮ್ಮ ಹುಟ್ಟೂರು ಬೂಕನಕೆರೆ ಸೇರಿದಂತೆ ನೀರಿನ ಸಮಸ್ಯೆಯುಳ್ಳ ಎಲ್ಲಾ ಊರುಗಳಿಗೆ ಶಾಶ್ವತ ನೀರು ಒದಗಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತು ಕೊಟ್ಟಿದ್ದರು.

ಬಿಜೆಪಿ ಶಾಸಕರೊಬ್ಬರ ಜತೆ ಹೋಗಿ ಸಿಎಂ ಭೇಟಿಯಾದ ಕಾಂಗ್ರೆಸ್ ಶಾಸಕ ಅಖಂಡ...

ಇದೀಗ ತಮ್ಮ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷ್ಣರಾಜಪೇಟೆ ತಾಲೂಕಿನ ಬೂಕನಕೆರೆ ಮತ್ತು ಬರಪೀಡಿತ ಶೀಳನೆರೆ ಹೋಬಳಿಗಳ 50ಕ್ಕೂ ಹೆಚ್ಚು ಕೆರೆಕಟ್ಟೆಗಳನ್ನು ಹೇಮಾವತಿ ನದಿಯ ನೀರಿನಿಂದ ಏತ ನೀರಾವತಿ ಯೋಜನೆಯ ಮೂಲಕ ತುಂಬಿಸುವ 265.29 ಕೋಟಿ ರು. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಿದ್ದಾರೆ.

5 ಎಕರೆ ಜಾಗ ಕೋರಿ ಸಿಎಂ BSYಗೆ ಪತ್ರ ಬರೆದ ಎಸ್.ಎಂ.ಕೃಷ್ಣ...

ಚುನಾವಣೆ ವೇಳೆ ಈ ಭಾಗದಲ್ಲಿ ಅಂತರ್ಜಲ ಬರಿದಾಗಿದೆ. ಮಳೆಯೂ ಸರಿಯಾಗಿಲ್ಲ. ಹೀಗಾಗಿ ಕುಡಿಯುವ ನೀರಿಗೆ ಸಮಸ್ಯೆ ಆಗಿದ್ದು ಚುನಾವಣೆಯಲ್ಲಿ ಗೆದ್ದರೆ ನೀರಿನ ಬವಣೆ ಶಾಶ್ವತವಾಗಿ ನೀಗಿಸಬೇಕು ಎಂದು ಅಂದಿನ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಚಿವ ಡಾ.ನಾರಾಯಣಗೌಡ ಮನವಿ ಮಾಡಿದ್ದರು. ಈ ವೇಳೆ ಜನತೆ ಎದುರೇ ನೀರಾವರಿ ಕಲ್ಪಿಸುವುದಾಗಿ ಯಡಿಯೂರಪ್ಪ ಮಾತು ನೀಡಿದ್ದರು.