ಬೆಂಗಳೂರು(ಆ. 02)  ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಕೊರೋನಾ ಅಂಟಿಕೊಂಡಿದೆ. ಕೇಂದ್ರ ಸಚಿವ ಅಮಿತ್ ಶಾ ಗೆ ಕೊರೋನಾ ತಾಗಿದ್ದ ನಂತರ ಇದೊಂದು ಆಘಾತಕಾರಿ ಸುದ್ದಿ ಬಂದಿದೆ.

"

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ  ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಭಾನುವಾರ ಕರ್ನಾಟಕದಲ್ಲಿ ಕೊರೋನಾ ಆರ್ಭಟ

77  ವರ್ಷದ ಯಡಿಯೂರಪ್ಪ ಕೊರೋನಾ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದವರು. ತಾವೇ ಮುಂದೆ ನಿಂತು ರಾಜ್ಯದ ಪರಿಸ್ಥಿತಿ ನಿಭಾಯಿಸುತ್ತ ಬಂದಿದ್ದಾರೆ.  ಇದೀಗ ಸೋಂಕು ಅವರನ್ನೇ ಆವರಿಸಿದೆ.