ಈ ಯೋಜನೆಯನ್ನು ಕರ್ನಾಟಕ ಗೃಹ ಮಂಡಳಿಯಿಂದಲೇ ಅನುಷ್ಠಾನಗೊಳಿಸಲಾಗುತ್ತದೆ. ಕ್ರೀಡಾಂಗಣ ನಿರ್ಮಾಣದ ಜೊತೆಗೆ ನಿರ್ವಹಣೆಗೂ ಗೃಹ ಮಂಡಳಿ ಅಧಿಕಾರಿಗಳು ಸಭೆಯಲ್ಲಿ ಆಸಕ್ತಿ ತೋರಿಸಿದರು ಎಂದು ತಿಳಿದು ಬಂದಿದೆ.

ಬೆಂಗಳೂರು : ನಗರ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿಯ ಸೂರ್ಯ ನಗರದಲ್ಲಿ 100 ಎಕರೆ ವಿಸ್ತೀರ್ಣದಲ್ಲಿ 1,650 ಕೋಟಿ ರು. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಕೆಲವು ತಿಂಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಗುತ್ತದೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಎಚ್‌ಬಿ ಅಧಿಕಾರಿಗಳು ಕ್ರೀಡಾಂಗಣದ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

80 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳಬಹುದಾದ ಕ್ರಿಕೆಟ್ ಮೈದಾನ, 8 ಒಳಾಂಗಣ ಕ್ರೀಡೆಗಳ ಕ್ರೀಡಾಂಗಣ ಮತ್ತು 8 ಹೊರಾಂಗಣ ಕ್ರೀಡೆಗಳ ಕ್ರೀಡಾಂಗಣಗಳು, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಹಾಸ್ಟೆಲ್‌, ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಅತಿಥಿಗೃಹಗಳು ಇರಲಿವೆ.

ಈ ಯೋಜನೆಯನ್ನು ಕರ್ನಾಟಕ ಗೃಹ ಮಂಡಳಿಯಿಂದಲೇ ಅನುಷ್ಠಾನಗೊಳಿಸಲಾಗುತ್ತದೆ. ಕ್ರೀಡಾಂಗಣ ನಿರ್ಮಾಣದ ಜೊತೆಗೆ ನಿರ್ವಹಣೆಗೂ ಗೃಹ ಮಂಡಳಿ ಅಧಿಕಾರಿಗಳು ಸಭೆಯಲ್ಲಿ ಆಸಕ್ತಿ ತೋರಿಸಿದರು ಎಂದು ತಿಳಿದು ಬಂದಿದೆ.

ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತ ಘಟನೆ ಕುರಿತು ವಿಚಾರಣೆ ನಡೆಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ಆಯೋಗವೂ, ಕ್ರಿಕೆಟ್ ಮೈದಾನದವನ್ನು ಹೊರ ವಲಯಕ್ಕೆ ಸ್ಥಳಾಂತರಿಸಲು ಶಿಫಾರಸು ಮಾಡಿತ್ತು.