Karnataka election 2023: ಚುನಾವಣೆಗೆ ಸಜ್ಜಾದ ವಿಜಯಪುರ ಜಿಲ್ಲಾಡಳಿತ..!

ಪಾರದರ್ಶಕ, ನಿರ್ಭಿತ, ನ್ಯಾಯ ಸಮ್ಮತ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ದಾನಮ್ಮನವರ(DC Vijaya mahantesh danammanavar) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Karnataka election 2023 Vijayapur district administration is ready for election rav

- ಷಡಕ್ಷರಿ‌ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಮಾ.14): ಪಾರದರ್ಶಕ, ನಿರ್ಭಿತ, ನ್ಯಾಯ ಸಮ್ಮತ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ದಾನಮ್ಮನವರ(DC Vijaya mahantesh danammanavar) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚುನಾವಣಾ ತಯಾರಿಗೆ ಸೂಚನೆ ನೀಡಿದ ಆಯೋಗ..!

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023(Karnataka assembly election 2023)ರ  ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಆಗಮಿಸಿದ್ದ ಭಾರತ ಚುನಾವಣಾ ಆಯೋಗವು(Election commission of India) ಚುನಾವಣಾ ಪ್ರಕ್ರಿಯೆ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದು, ಮುಖ್ಯವಾಗಿ ಚುನಾವಣಾ ನೀತಿ ಸಂಹಿತೆ ಪೂರ್ವ ಹಲವು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. 

ವಿಜಯಪುರ ತಾಂಡಾಗಳಲ್ಲಿ ವಿಶಿಷ್ಟ ಹಬ್ಬ, ವರ್ಷಕ್ಕೊಮ್ಮೆ ಮಾತ್ರ ಗಂಡು ಮಕ್ಕಳಿಗೆ ನಾಮಕರಣ!

ಅಕ್ರಮ ಮದ್ಯದ ಮೇಲೆ ನಿಗಾ ವಹಿಸಲು ಡಿಸಿ ಸೂಚನೆ..!

ಅಕ್ರಮ ಮದ್ಯ ಸಾಗಾಣಿಕೆ  ಹಾಗೂ ಇತರೆ ಚುನಾವಣಾ ಸಂಬಂಧಿತ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಜಾಗೃತ ದಳ ರಚಿಸಲಾಗಿದೆ. ಜಿಲ್ಲೆಯಲ್ಲಿ 11 ಅಂತರರಾಜ್ಯ ಚೆಕ್ ಫೋಸ್ಟ್ ಸ್ಥಾಪಿಸಲು ಗುರುತಿಸಲಾಗಿದೆ. ಈ ಚೆಕ್ ಫೊಸ್ಟ್ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವುದೂ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜನೆ ಹಾಗೂ ಮೂಲ ಸೌಕರ್ಯ ಕಲ್ಪಿಸಲು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗ ಸೂಚಿಸಿದರು. ಚೆಕ್ ಪೋಸ್ಟ್ನಲ್ಲಿ ನಿಯೋಜಿತ ತಂಡವು ಪ್ರತಿವಾರ ವರದಿಯನ್ನು ತಪ್ಪದೇ ಸಲ್ಲಿಸುವುದು. ತುರ್ತು ಸಂದರ್ಭದಲ್ಲಿ ತಕ್ಷಣ ವರದಿ ನೀಡುವುದು. ಪೊಲೀಸ್ ಇಲಾಖೆ, ಅಬಕಾರಿ, ವಾಣಿಜ್ಯ ತೆರಿಗೆ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ವರದಿ ನೀಡುವುದು. ಬ್ಯಾಂಕಗಳಲ್ಲಿ ಹಣ ಚಲಾವಣೆಯ ಮೇಲೆ ನಿಗಾವಹಿಸಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. ಮಾಧ್ಯಮ  ಪ್ರಮಾಣೀಕರಣ  ಹಾಗೂ ಕಣ್ಗಾವಲು ಸಮಿತಿ ಬೇಗ  ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಚುನಾವಣಾ ಕಾರ್ಯಕ್ಕೆ ನಿಯೋಜಿತ ತಂಡಗಳು ಸಮನ್ವಯತೆಯಿಂದ ಖುದ್ದಾಗಿ ಪರಿಶೀಲಿಸಿ, ವರದಿ ನೀಡುವಂತೆಯೂ, ಚುನಾವಣಾ ವಿಷಯಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಕರ್ತವ್ಯ ಲೋಪವಾಗದಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಚುನಾವಣೆಗೆ ನೇಮಿಸಿದ ಚುನಾವಣಾಧಿಕಾರಿಗಳು ಕ್ರೀಯಾಶೀಲತೆಯಿಂದ ಕಾರ್ಯ ನಿರ್ವಹಿಸಬೇಕು. 

ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚದ ಮೇಲ್ವಿಚಾರಣೆ ಮತಗಟ್ಟೆಗಳಿಗೆ ಮೂಲ ಸೌಕರ್ಯ ಒದಗಿಸುವುದೂ ಸೇರಿದಂತೆ ವಿವಿಧ ಚುನಾವಣಾ ಕಾರ್ಯದ ಮೇಲುಸ್ತುವಾರಿಗಾಗಿ ನಿಯೋಜನೆಗೊಂಡಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕಾರ್ಯ ಕ್ಷೇತ್ರಕ್ಕನುಗುಣವಾಗಿ ಸಿದ್ಧತೆ ಕೈಗೊಳ್ಳಬೇಕು. ವಲ್ನೇರೆಬಲ್ ಮ್ಯಾಪಿಂಗ್(Vulnerable Mapping) ಸಿದ್ಧಪಡಿಸಿಕೊಳ್ಳುವ ಕುರಿತು ಸಭೆಯಲ್ಲಿ ಅಗತ್ಯ ಸಲಹೆ ಸೂಚನೆ ನೀಡಿದರು. 

ಚುನಾವಣೆಯನ್ನು ಸುಗಮವಾಗಿ ನಡೆಯಲು  ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕು. ಸಾಮಾಜಿಕ ಜಾಲ ತಾಣಗಳ ಮೇಲೆ ನಿಗಾ ವಹಿಸಬೇಕು. ಸಂಶಯಾಸ್ಪದ ಎನಿಸಿದ ವಿಷಯಗಳ ಕುರಿತು ತಮ್ಮ ಗಮನಕ್ಕೆ ತರಬೇಕು ಎಂದು ಜಿಲ್ಲಾ ವರಿಷ್ಠಾಧಿಕಾರಿ ಎಚ್. ಡಿ ಆನಂದಕುಮಾರ್ ಅವರು ಹೇಳಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಧ ರಾಹುಲ್ ಶಿಂಧೆ ಅವರು, ಚುನಾವಣಾಧಿಕಾರಿ (ಆರ್ ಓ)  ಸೆಕ್ಟರ್ ಅಧಿಕಾರಿಗಳು, ಪ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡಗಳ ಅಧಿಕಾರಿಗಳು ಚುನಾವಣಾಯನ್ನು ಸುಗಮವಾಗಿ ನಡೆಸಲು ಕೈಗೊಳ್ಳಬೇಕಾದ ಮುಂಜಾಗ್ರತೆ, ಅವಶ್ಯಕ ವಿವರಗಳನ್ನು ಕಾಲಕಾಲಕ್ಕೆ ನಿಗದಿತ ನಮೂನೆಗಳಲ್ಲಿ ಸಂಗ್ರಹಿಸಿ ಒದಗಿಸುವಂತೆ ಹೇಳಿದರು.

ಮತ ಎಣಿಕೆ ಕೇಂದ್ರಗಳ ಪೂರ್ವಭಾವಿ ಪರಿಶೀಲನೆ ನಡೆಸಿದ ಡಿಸಿ..!

ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ನಗರದ ಸೈನಿಕ ಶಾಲೆಗೆ ಭೇಟಿ ನೀಡಿ, ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಹಿನ್ನೆಲೆಯಲ್ಲಿ  ಮತ ಎಣಿಕೆ ಕೇಂದ್ರ ಭದ್ರತಾ ಕೊಠಡಿ ಸೇರಿದಂತೆ ವಿವಿಧ ಕೊಠಡಿಗಳ ಕುರಿತ ಪರಿಶೀಲನೆ ನಡೆಸಿದರು.

ಮತದಾನ ಯಂತ್ರಗಳ ಸಂಗ್ರಹಣಾ ಕೊಠಡಿ ಪರಿಶೀಲನೆ..!

ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳ ದಾಸ್ತಾನು ಕೊಠಡಿ, ಮತ ಎಣಿಕೆ ಕೊಠಡಿ ಮತ್ತು ಭದ್ರತಾ ಕೊಠಡಿಗಳನ್ನು ಸ್ಥಾಪಿಸುವ ಕುರಿತು ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಫ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ್ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳಾದ ಎಚ್.ಡಿ ಆನಂದ ಕುಮಾರ ಅವರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದರು.  

ರಾಜ್ಯ ಕಾಂಗ್ರೆಸ್‌ ಐಸಿಯುನಲ್ಲಿ: ಜಗದೀಶ ಶೆಟ್ಟರ್‌

ಮಾಧ್ಯಮ ಕೊಠಡಿ, ಪೊಲೀಸ್ ಕಂಟ್ರೋಲ್ ರೂಂ, ಗಣಕ ಯಂತ್ರ, ಇಂಟರ್ನೆಟ್ ಸಂಪರ್ಕ ವ್ಯವಸ್ಥೆ, ಭದ್ರತಾ ವ್ಯವಸ್ಥೆ, ಸ್ಡ್ರಾಂಗ್ ರೂಂ ವಿವಿಧ ಕೊಠಡಿಗಳ ಸ್ಥಾಪಿಸುವ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸ್ಥಳ ವೀಕ್ಷಣೆ ಮಾಡಿ, ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

Latest Videos
Follow Us:
Download App:
  • android
  • ios