Karnataka election 2023: ಮತದಾನ ದಿನ ಜೋಗ ಜಲಪಾತ ಸೇರಿ ಪ್ರವಾಸಿ ತಾಣಗಳು ಬಂದ್
ಮತದಾನ ದಿನವಾದ ಮೇ 10ರಂದು ಜೋಗ ಜಲಪಾತ ಸೇರಿದಂತೆ ಜಿಲ್ಲೆಯ ಎರಡು ಪ್ರವಾಸಿಗಳು ಬಂದ್ ಆಗಲಿದ್ದು, ಇದೇ ರೀತಿ ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳು ಬಂದ್ ಆಗುವ ಸಾಧ್ಯತೆ ಕಂಡುಬಂದಿದೆ.
ಶಿವಮೊಗ್ಗ (ಏ.27) : ಮತದಾನ ದಿನವಾದ ಮೇ 10ರಂದು ಜೋಗ ಜಲಪಾತ ಸೇರಿದಂತೆ ಜಿಲ್ಲೆಯ ಎರಡು ಪ್ರವಾಸಿಗಳು ಬಂದ್ ಆಗಲಿದ್ದು, ಇದೇ ರೀತಿ ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳು ಬಂದ್ ಆಗುವ ಸಾಧ್ಯತೆ ಕಂಡುಬಂದಿದೆ.
ಮತದಾನ ದಿನವನ್ನು ಅನೇಕರು ರಜೆ ದಿನವನ್ನಾಗಿ ಪರಿವರ್ತಿಸಿಕೊಂಡು ಮೋಜು-ಮಸ್ತಿಯಲ್ಲಿ ಕಳೆಯುವ ಸಲುವಾಗಿ ಪ್ರವಾಸಿ ಕೇಂದ್ರಗಳಿಗೆ ತೆರಳುವುದು ಸಾಮಾನ್ಯವಾಗಿದ್ದು, ಈ ಬಾರಿ ಇದಕ್ಕೆ ಬ್ರೇಕ್ ಹಾಕಲು ಚುನಾವಣಾ ಆಯೋಗ ಮುಂದಾಗಿದೆ.
Karnataka Assembly Elections 2023: ಜನರ ಸೆಳೆಯಲು ಯುವ, ಹಸಿರು ಮತಗಟ್ಟೆ..!
ಮೇ 10ರಂದು ಮತದಾನ ಇರುವುದರಿಂದ ಅಂದು ವಿಶ್ವ ವಿಖ್ಯಾತ ಜೋಗ ಜಲಪಾತ(Jog falls)ದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ ಇದೆ. ಮತದಾನ ದಿನದಂದು ಬಹಳಷ್ಟುಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುವುದನ್ನುಬಿಟ್ಟು ರಜಾ ಮಜಾ ಸವಿಯಲು ವಿವಾಸಿ ತಾಣಗಳಿಗೆ ಹೋಗುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಇದಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ಚುನಾವಣೆ ದಿನದಂದು ಜೋಗ ಜಲಪಾತ ವೀಕ್ಷಣೆಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ನಿರ್ಬಂಧ ವಿಧಿಸಿದ್ದಾರೆ.
ಮತದಾನದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರದೆ ಇದ್ದರೆ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ. ಇವರಿಗೆ ಪೂರಕವಾಗಿ ಸ್ಥಳೀಯವಾಗಿರುವ ವ್ಯಾಪಾರಸ್ಥರು, ಛಾಯಚಿತ್ರಗಾರರು, ಬೀದಿ ಬದಿ ವ್ಯಾಪಾರಿಗಳು, ಗೈಡ್‌ಗಳು, ಆಟೋಚಾಲಕರು, ಟ್ಯಾಕ್ಸಿ ಚಾಲಕರು ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕರು ಮತದಾನದಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಹಿಂದೆ ಮತದಾನ ದಿನಗಳಂದು ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ದಾಖಲಾದ ಪ್ರವಾಸಿಗರ ಸಂಖ್ಯೆ ಅಂಕಿ ಅಂಶಗಳನ್ನು ಪರಿಗಣಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದಕ್ಕೆ ಪೂರಕವಾಗಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲೂ ನಿಷೇಧ ಇರಲಿದೆ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಇನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ನಿಷೇಧ ಬಗ್ಗೆ ಅಧಿಕಾರಿಗಳು ಈವರೆಗೆ ತೀರ್ಮಾನ ಮಾಡಿಲ್ಲ. ಆದರೆ, ಇಲ್ಲಿಯೂ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮತದಾನ ಎಲ್ಲರ ಜವಾಬ್ದಾರಿಯುತ ಕರ್ತವ್ಯ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.