ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗಬಾರದು: ನ್ಯಾ.ಶಾಂತವೀರ ಶಿವಪ್ಪ
ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.
ಉಡುಪಿ (ಏ.28) : ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.
ಅವರು ಇಂದು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ, ಮತದಾನಜಾಗೃತಿ ಸಾರುವಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಉಡುಪಿ: ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ “ಸಿಡಿಲು” ಆಪ್
ಈ ಚುನಾವಣೆಯಲ್ಲಿ (Karnataka assembly electin 2023)ಬಹುತೇಕ ಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆ ಉತ್ತಮ ಯೋಜನೆ ರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಯುವಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದಜಿಲ್ಲೆಗೆಚುನಾವಣಾಆಯೋಗದಿಂದರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದು ಜಿಲ್ಲೆಯ ಎಲ್ಲಾ ಯುವಜನತೆ ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾಎಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ನಗರಸಭೆಯ ಪೌರಾಯುಕ್ತರಮೇಶ್ ನಾಯಕ್ ಹಾಗೂ ಕಾಲೇಜಿನಉಪನ್ಯಾಸಕರು ಹಾಗೂ ಮತ್ತಿತರರು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.
ಚುನಾವಣಾ ರಣಾಂಗಣ: ಆದಿ ಉಡುಪಿ, ಹಿಜಾಬ್ ಕೇಸಿನಿಂದ ಉದ್ಭವಿಸಿದ ಬಿಜೆಪಿ ಅಭ್ಯರ್ಥಿ ಸುವರ್ಣ..!
ಕಾಲೇಜಿನ 2000 ಕ್ಕೂ ಅಧಿಕ ವಿದ್ಯಾರ್ಥಿನಿಯರು ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಎಲೆಕ್ಟಾçನಿಕ್ ಮತಯಂತ್ರ ಹಾಗೂ ವಿವಿ ಪ್ಯಾಟ್‌ನ ಸ್ತಬ್ಧಚಿತ್ರವನ್ನು ಒಳಗೊಂಡಿರುವ ಮತದಾನಜಾಗೃತಿ ಮೂಡಿಸುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವಕುರಿತುಜಾಗೃತಿ ಮೂಡಿಸಲಿದೆ.