Asianet Suvarna News Asianet Suvarna News

ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಹಾಕಿದವರ, ಚರ್ಮ ಸುಲಿದ ಪೊಲೀಸರು!

ಬಿಜೆಪಿಯ ರಾಜ್ಯಾಧ್ಯಕ್ಷ ಕಟೀಲ್‌ ಹಾಗೂ ಸಂಸದ ಸದಾನಂದಗೌಡರ ಶ್ರದ್ಧಾಂಜಲಿ ಬ್ಯಾನರ್‌ ಹಾಕಿದ್ದ ಆರೋಪಿಗಳನ್ಉ ಬಂಧಿಸಿದ ಪೊಲೀಸರು ಚರ್ಮ ಸುಲಿದಿದ್ದಾರೆ.

Karnataka election Police arrested those who put up tribute banner of BJP leaders sat
Author
First Published May 17, 2023, 7:34 PM IST

ಮಂಗಳೂರು (ಮೇ 17): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ವಿಚಾರದಲ್ಲಿ ಬ್ಯಾನರ್ ಹಾಕಿದ ಆರೋಪಿಗಳಿಗೆ ಪುತ್ತೂರು ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ ಆರೋಪ ಕೇಳಿ ಬಂದಿದೆ. ಸದ್ಯ ಬ್ಯಾನರ್‌ ಹಾಕಿದ ಆರೋಪದಲ್ಲಿ ಬಂಧನವಾಗಿದ್ದವರು ಹಲ್ಲೆಗೊಳಗಾದ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಕೇವಲ 66 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರಿ ದೊಡ್ಡ ಪ್ರಮಾಣದ ಮುಖಭಂಗವನ್ನು ಅನುಭವಿಸಿದೆ. ಬಿಜೆಪಿಯ ಭದ್ರಕೋಟೆ ಎಂದು ಹೇಳಲಾಗುತ್ತಿದ್ದ ಮಂಗಳೂರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಹೀನಾಯ ಸೋಲು ಉಂಟಾಗಿದ್ದು, ಇದಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದಗೌಡ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿಇಬ್ಬರ ಫೋಟೋಗಳನ್ನು ಶ್ರದ್ಧಾಂಜಲಿ ಎಂದು ಬ್ಯಾನರ್‌ನಲ್ಲಿ ಹಾಕಿಸಿ, ಚಪ್ಪಲಿ ಹಾರ ಹಾಕಲಾಗಿತ್ತು. ಈ ಘಟನೆ ಕುರಿತು ಬ್ಯಾನರ್‌ ಹಾಕಿದವರನ್ನು ಬಂಧಿಸಿದ ಸ್ಥಳೀಯ ಪೊಲೀಸರು ಥರ್ಡ್‌ ಡಿಗ್ರಿ ಟ್ರೀಟ್ಮೆಂಟ್‌ ನೀಡಿ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ ಎಂಬ ಫೊಟೋಗಳು ಹರಿದಾಡುತ್ತಿವೆ.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌(Nalin kumar kateel) ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadanandagowda) ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆ ಇರುವ ಬ್ಯಾನರ್‌ ಪುತ್ತೂರು ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಪ್ರತ್ಯಕ್ಷವಾಗಿದ್ದು, ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ತಮ್ಮದೇ ಶೈಲಿಯಲ್ಲಿ ಥರ್ಡ್‌ ಡಿಗ್ರಿ ಟ್ರೀಟ್‌ಮೆಂಟ್‌ ನಿಡಿದ್ದು, ಆರೋಪಿಗಳ ಚರ್ಮವನ್ನೇ ಸುಲಿದಿದ್ದಾರೆ. 

ಪುತ್ತೂರಿನಲ್ಲಿ ನಳಿನ್-ಡಿವಿಎಸ್‌ಗೆ ಶ್ರದ್ಧಾಂಜಲಿ ಬ್ಯಾನರ್: ಚಪ್ಪಲಿ ಹಾರ ಹಾಕಿ ಆಕ್ರೋಶ!

ಬ್ಯಾನರ್‌ ಹಾಕಿದವರ ಬೆನ್ನ ಮೇಲೆ ಬಾಸುಂಡೆ: ಆರೋಪಿಗಳ ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿಯಲ್ಲಿ ಪೊಲೀಸರು ಥಳಿಸಿದ್ದು, ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿ ಆರೋಪಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ದೂರಲಾಗಿದೆ. ಪೊಲೀಸರ ಕಿರುಕುಳದಿಂದ ಎದ್ದು ನಡೆಯಲಾಗದ ಸ್ಥಿತಿಯಲ್ಲಿ ಆರೋಪಿಗಳಿದ್ದು, ಬಂಧಿತರೆಲ್ಲರೂ ಸ್ಥಳೀಯ ಹಿಂದೂ ಪರ ಸಂಘಟನೆ ಹಾಗೂ ಬಿಜೆಪಿ ಪಕ್ಷಕ್ಕೆ ಸೇರಿರೋ ಕಾರ್ಯಕರ್ತರು ಎನ್ನಲಾಗಿದೆ. ಹಿಂದೂ ಕಾರ್ಯಕರ್ತರಿಗೆ ಥರ್ಡ್ ಡಿಗ್ರಿ ಕಿರುಕುಳ ನೀಡಿದ ಪೊಲೀಸರ ಕ್ರಮ ಸದ್ಯ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಹಾಗೂ ಪೊಲೀಸರ ವಿರುದ್ದ ಅಸಮಾಧಾನ ವ್ಯಕ್ತವಾಗಿದೆ. ಇನ್ನು ಈ ವಿಚಾರ ಗಮನಕ್ಕೆ ಬಂದ ಕೂಡಲೇ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಕಾರ್ಯಕರ್ತರನ್ನ ಠಾಣೆಯಿಂದ ಜಾಮೀನು ಕೊಡಿಸಿ ಕರೆದೊಯ್ದಿದ್ದಾರೆ. ಪೊಲೀಸರ ಈ ಅಮಾನವೀಯ ಕ್ರಮವನ್ನ ಪುತ್ತಿಲ ಖಂಡಿಸಿದ್ದಾರೆ. 

Puttur News: ನಳಿನ್-ಡಿವಿಎಸ್ ಬ್ಯಾನರ್‌ಗ ಚಪ್ಪಲಿಹಾರ ಹಾಕಿದ ಪ್ರಕರಣ ಇಬ್ಬರ ಬಂಧನ

ಒಟ್ಟು 7 ಜನರನ್ನು ಬಂಧಿಸಿದ್ದ ಪೊಲೀಸರು:  ಪ್ರಕರಣ ಸಂಬಂಧಿಸಿ ಒಟ್ಟು ಏಳು ಜನರನ್ನ ಬಂಧಿಸಿದ್ದ ಪುತ್ತೂರು ನಗರ ಠಾಣೆ ಪೊಲೀಸರು ಅವರಿಗೆ ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ‌. ಅಭಿ @ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಬಂಧಿತರು. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನಿವಾಸಿಗಳಾಗಿದ್ದಾರೆ. ಪುತ್ತೂರು ನಗರಸಭೆ ಮುಖ್ಯಾಧಿಕಾರಿ ಮಧು ಮನೋಹರ್ ದೂರು ನೀಡಿದ್ದರು‌. ಸರ್ಕಾರಿ ಆಸ್ತಿಪಾಸ್ತಿ ಹಾಗೂ ಸಾರ್ವಜನಿಕ ಸ್ಥಳ ವಿರೂಪಗೊಳಿಸಿದ ಬಗ್ಗೆ ದೂರು ನೀಡಲಾಗಿತ್ತು. ದ.ಕ ಜಿಲ್ಲೆಯ ಪುತ್ತೂರಿನ ಬಸ್ ನಿಲ್ದಾಣದ ‌ಬಳಿ ಬ್ಯಾನರ್ ಹಾಕಲಾಗಿತ್ತು. ಬಿಜೆಪಿ ನಾಯಕರ ಫೋಟೋ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿತ್ತು‌. ನಳಿನ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿ ಆಕ್ರೋಶಿತರು ಕೃತ್ಯ ಎಸಗಿದ್ದರು.  ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ' ಅಂತ ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.

Follow Us:
Download App:
  • android
  • ios