ಬೆಂಗಳೂರು [ ಆ.11]: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇದೀಗ ಬೆಂಗಳೂರಿಗೂ ಮಳೆಯ ಭೀತಿ ಎದುರಾಗಿದೆ. 

ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಬಹುದಾದ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದ್ದಾರೆ. 

ಕರ್ನಾಟಕದ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೋಂದಿಗೆ ಜಂಟಿಯಾಗಿ ಸಭೆ ನಡೆಸಿದ್ದಾರೆ. ಮಳೆಯಿಂದಾಗುವ ಅನಾಹುತದ ಬಗ್ಗೆ ಚರ್ಚೆ ನಡೆಸಿದ್ದು, ಅಪಾಯಕಾರಿ ಸ್ಥಳಗಳ ಬಗ್ಗೆ ಅಲರ್ಟ್ ಆಗುವಂತೆ  ಸೂಚನೆ ನೀಡಿದ್ದಾರೆ. 

182 ಸ್ಥಳಗಳನ್ನು ಡೇಂಜರಸ್ ಎಂದು ಗುರುತಿಸಲಾಗಿದ್ದು, ಇಂತಹ ಪ್ರದೇಶಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ನಿರ್ಲಕ್ಷ್ಯ ವಹಿಸಿದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಸಲಾಗಿದೆ.