ಬೆಳಗಾವಿ [ಆ.15] :  ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಹಲವೆಡೆ ಭೂ ಕುಸಿತವಾಗಿದೆ. ಸಂಚಾರ ಅಸ್ತವ್ಯಸ್ತವಾಗಿದೆ. 

ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದು, ಬೆಳಗಾವಿ ಜಿಲ್ಲೆಯ ಶಾಲೆಗಳಲ್ಲಿ ಪರಿಹಾರ ಕೇಂದ್ರ  ತೆರೆದಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಮುಂದುವರಿಸಲಾಗಿದೆ. 

ನೂರಾರು ಜನರನ್ನು ಶಾಲೆಗಳ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದ್ದು, ಆಗಸ್ಟ್ 20ರವರೆಗೂ  ಕೂಡ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದ 17 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಇಲ್ಲಿನ ಲಕ್ಷಾಂತರ ಜನರು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ. ನೆಲೆ ಇಲ್ಲದೇ ಎಲ್ಲವನ್ನೂ ಕಳೆದುಕೊಂಡು ಪರದಾಡುವ ಸ್ಥಿತಿಯಲ್ಲಿದ್ದಾರೆ. ಇವರಿಗೆಲ್ಲಾ ತಾತ್ಕಾಲಿಕವಾಗಿ ಇಂತಹ ಪರಿಹಾರ ಕೇಂದ್ರಗಳೇ ಆಶ್ರಯವಾಗಿವೆ.